ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 3 ಫೆಬ್ರವರಿ 2023 (08:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅನಿವಾರ್ಯ ಕಾರಣಗಳಿಗೆ ಕೆಲವೊಂದು ಯೋಜನೆಗಳನ್ನು ಮುಂದೂಡಬೇಕಾಗುತ್ತದೆ. ಆತ್ಮೀಯರನ್ನು ಭೇಟಿಯಾಗುವ ಅವಕಾಶ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ.

ವೃಷಭ: ಫಲ ವಸ್ತುಗಳನ್ನು ದಾನ ಮಾಡುವ ಯೋಗ ನಿಮ್ಮದಾಗಲಿದೆ. ಹಿರಿಯರಿಗೆ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಮಿಥುನ: ಮನೆಗೆ ವಿಶೇಷ ಅತಿಥಿಗಳನ್ನು ಬರಮಾಡಿಕೊಳ್ಳಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಕಾರ್ಯರಂಗದಲ್ಲಿ ನಿಮ್ಮ ಅಧಿಕಾರದ ದುರ್ಬಳಕೆಯಾಗದಂತೆ ಎಚ್ಚರಿಕೆ ವಹಿಸಿ.

ಕರ್ಕಟಕ: ಹಣಕಾಸಿನ ವಿಚಾರದಲ್ಲಿ ವಂಚನೆಯ ಭೀತಿಯಿದ್ದು, ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ಪೂರ್ವಾಪರ ತಿಳಿದು ಪರರಿಗೆ ಸಹಾಯ ಮಾಡುವುದು ಉತ್ತಮ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ವಿಶೇಷಾಧಿಕಾರ ಪಡೆಯಲಿದ್ದೀರಿ. ವಿದ್ಯಾರ್ಥಿಗಳು ಅ‍ಧ್ಯಾಪಕರಿಂದ ಹೊಸ ವಿಚಾರವನ್ನು ತಿಳಿದುಕೊಳ್ಳುವ ಆಸಕ್ತಿ ಕಂಡುಕೊಳ್ಳಲಿದ್ದೀರಿ. ವ್ಯಾಪಾರಿಗಳು, ಸ್ವಯಂ ವೃತ್ತಿಯವರಿಗೆ ಮುನ್ನಡೆಯ ಯೋಗ.

ಕನ್ಯಾ: ಎಷ್ಟೇ ಹಣ ಸಂಪಾದನೆ ಮಾಡಿದರೂ ಅದಕ್ಕೆ ತಕ್ಕ ನೆಮ್ಮದಿ ಇಲ್ಲ ಎನಿಸೀತು. ಮಕ್ಕಳ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ. ಸಂಗಾತಿಯ ಸಲಹೆ ಪಾಲಿಸುವುದು ಉತ್ತಮ. ತಾಳ್ಮೆಯಿರಲಿ.

ತುಲಾ: ದೈವಾನುಕೂಲದಿಂದ ಇಂದು ನೀವು ಕೈಗೆತ್ತಿಕೊಳ್ಳಲಿರುವ ಕೆಲಸಗಳು ಸುಸ್ರೂತ್ರವಾಗಿ ನಡೆಯಲಿದೆ. ಆತ್ಮೀಯರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ದೂರದ ವ್ಯವಹಾರಗಳಿಂದ ಲಾಭವಾಗುವ ಸಾಧ‍್ಯತೆ. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ಗುರುಹಿರಿಯರ ಸಲಹೆ ಪಾಲಿಸುವುದು ಉತ್ತಮ. ಕಿರು ಸಂಚಾರ ಮಾಡಬೇಕಾಗುತ್ತದೆ.

ಧನು: ಒಳ್ಳೆಯ ಮಾತು, ಪ್ರವಚನ ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಕೀರ್ತಿ ಸಂಪಾದಿಸುವ ಯೋಗ. ಸಹೋದ್ಯೋಗಿಗಳ ಪ್ರೋತ್ಸಾಹ ಕಂಡುಬರಲಿದೆ.

ಮಕರ: ನಿಮ್ಮ ಋಣಾತ್ಮಕ ಅಂಶಗಳು ಇತರರಿಗೆ ಕಾಣದಂತೆ ಮರೆ ಮಾಚಲು ಪ್ರಯತ್ನಿಸುವಿರಿ. ನೆರೆಹೊರೆಯವರೊಂದಿಗೆ ಅಗನತ್ಯ ಸಂಘರ್ಷ ಬೇಡ. ವಾಹನ, ಭೂಮಿ ಖರೀದಿಗೆ ಕೆಲವು ಸಮಯ ಕಾಯುವುದು ಉತ್ತಮ.

ಕುಂಭ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದೆ. ಅತಿಯಾಗಿ ಇನ್ನೊಬ್ಬರ ಮೇಲೆ ಅವಲಂಬನೆ ಬೇಡ. ಉದ್ಯೋಗ ಕ್ಷೇತ್ರದಲ್ಲಿ ವಿಶೇಷಾಧಿಕಾರ ನಿಮ್ಮದಾಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಮೀನ: ಮನಸ್ಸಿಗೆ ಖುಷಿ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಆತುರದ ನಿರ್ಧಾರದಿಂದ ಸಂಕಷ್ಟಕ್ಕೊಳಗಾಗದಂತೆ ಎಚ್ಚರಿಕೆ ವಹಿಸಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ