ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 4 ಫೆಬ್ರವರಿ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದೈಹಿಕವಾಗಿ ಆರೋಗ್ಯ ಸಮಸ್ಯೆ ಕಾಡಲಿದೆ. ಆದರೆ ಮನಸ್ಸಿಗೆ ಉಲ್ಲಾಸ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಮಕ್ಕಳ ಬೆಳವಣಿಗೆ ಬಗ್ಗೆ ಸಂತೋಷವಾಗಲಿದೆ. ಅನಗತ್ಯ ಚಿಂತೆ ಬೇಡ.

ವೃಷಭ: ಬೇರೆಯವರ ನಡೆ ನೋಡಿ ನೀವು ಏನು ಮಾಡಬೇಕು ಎಂದು ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ.

ಮಿಥುನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟವಾಗುವ ಸಾಧ‍್ಯತೆ. ನಿಮ್ಮ ಮೇಲಿಟ್ಟಿದ್ದ ವಿಶ‍್ವಾಸಕ್ಕೆ ಧಕ್ಕೆಯಾಗದಂತೆ ನಡೆದುಕೊಳ್ಳಿ. ದಾಂಪತ್ಯ ಸುಖ ಮಧ್ಯಮವಾಗಿರಲಿದೆ. ತಾಳ್ಮೆಯಿರಲಿ.

ಕರ್ಕಟಕ: ಹೂಡಿಕೆ ವ್ಯವಹಾರದಲ್ಲಿ ನಿರೀಕ್ಷಿತ ಆದಾಯ ಕಂಡುಬರಲಿದೆ. ಹೊಸದಾಗಿ ಪರಿಚಿತರಾಗುವ ವ್ಯಕ್ತಿಗಳಿಂದ ನಿಮಗೆ ಉಪಕಾರವಾದೀತು. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಿ ಮುನ್ನಡೆಯುವುದು ಉತ್ತಮ.

ಸಿಂಹ: ನಿಮ್ಮ ಕಾರ್ಯವೈಖರಿಯಿಂದ ಇತರರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳನ್ನು ಹೆಗಲಿಗೇರಿಸಿಕೊಳ್ಳಬೇಕಾಗುತ್ತದೆ.

ಕನ್ಯಾ: ಕಾರ್ಯರಂಗದಲ್ಲಿ ನಿಮ್ಮ ಕಾರ್ಯವೈಖರಿಯಿಂದ ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದ್ದೀರಿ. ಪಾಲುದಾರಿಕೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ತುಲಾ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಮನಸ್ಸಿನಲ್ಲಿರುವ ವಿಚಾರವನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ನಿರುದ್ಯೋಗಿಗಳ ಉದ್ಯೋಗ ಪ್ರಯತ್ನ ಮುಂದುವರಿಯಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ನಿಮ್ಮ ಹಳೆಯ ಬಾಕಿ ತೀರಿಸಲು ಸಮಯ ಕೂಡಿಬರಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಸರಕಾರೀ ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ಹಳೆಯ ಸ್ನೇಹಿತರನ್ನು ಭೇಟಿ ಮಾಡುವ ಯೋಗವಿದೆ.

ಧನು: ಗೃಹ ಸಂಬಂಧೀ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ನಿಮ್ಮ ಆರೋಗ್ಯ ಅಲಕ್ಷಿಸಬೇಡಿ. ನೆರೆಹೊರೆಯವರು ಆಡುವ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಗುರುಹಿರಿಯರ ಸಲಹೆ ಪಾಲಿಸುವುದು ಉತ್ತಮ.

ಮಕರ: ಕಳೆದು ಹೋದ ವಸ್ತುಗಳಿಗಾಗಿ ಹುಡುಕಾಟ ನಡೆಸಲಿದ್ದೀರಿ. ರಾಜಕೀಯ ರಂಗದಲ್ಲಿರುವವರಿಗೆ ನಿರೀಕ್ಷಿತ ಸ್ಥಾನ ಮಾನ ಸಿಗಲಿದೆ. ಬಯಸಿದ ವ್ಯಕ್ತಿಗಳನ್ನು ಭೇಟಿಯಾಗುವ ಕಾಲ ಕೂಡಿಬರಲಿದೆ. ತಾಳ್ಮೆಯಿರಲಿ.

ಕುಂಭ: ಪರೋಪಕಾರಿಂದ ಸಂಭಾವ್ಯ ಅಪವಾದಗಳು ದೂರವಾದೀತು. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯುವುದು. ಹಣಕಾಸಿನ ವಿಚಾರದಲ್ಲಿ ಕಟ್ಟು ನಿಟ್ಟು ಅಗತ್ಯ. ಕಿರು ಸಂಚಾರ ಮಾಡಲಿದ್ದೀರಿ.

ಮೀನ: ನಿಮ್ಮ ಬುದ್ಧಿವಂತಿಕೆಯ ನಡೆಯಿಂದ ಯಶಸ್ಸು ಸಂಪಾದಿಸಲಿದ್ದೀರಿ. ಪರರಿಗೆ ಸಹಾಯ ಮಾಡುವಾಗಲೂ ನಿಮ್ಮ ಲಾಭದ ಬಗ್ಗೆ ಯೋಚಿಸಲಿದ್ದೀರಿ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ