ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 12 ಫೆಬ್ರವರಿ 2023 (07:50 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಸಂಬಂಧವಾದ ಸಮಸ್ಯೆಗಳನ್ನು ಸ್ನೇಹಿತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಅಪಾಯ ಸಂಭವ. ಎಚ್ಚರಿಕೆಯಿರಲಿ.

ವೃಷಭ: ಕಾರ್ಯನಿಮಿತ್ತ ದೀರ್ಘ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ನೂತನ ಮಿತ್ರರ ಸಮಾಗಮವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚ ಬೇಡ.

ಮಿಥುನ: ನಿಮ್ಮ ಕೆಲಸ ಕಾರ್ಯಗಳಲ್ಲಿ ಸಹೋದ್ಯೋಗಿಗಳ ಹಸ್ತಕ್ಷೇಪ ಅಸಮಾಧಾನಕ್ಕೆ ಕಾರಣವಾದೀತು. ಆತ್ಮೀಯರೊಂದಿಗೆ ಮನಸ್ಸಿನ ಮಾತು ಹಂಚಿಕೊಳ್ಳಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ನಿಮಗೆಂದೇ ಬಂದ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಸಂಗಾತಿಯೊಂದಿಗೆ ಸಹನೆಯಿಂದ ವರ್ತಿಸಿ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಉನ್ನತಿಯ ಯೋಗ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ‍್ಯತೆ. ವ್ಯಾಪಾರೀ ವರ್ಗದವರಿಂದ ಸಾಲಗಳು ತೀರಲಿವೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಉನ್ನತ ವ್ಯಾಸಂಗ ಮಾಡುವವರಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರುವುದು. ನಿಮ್ಮ ಕೆಲಸಗಳು ಹಿರಿಯರ ಸಂತೋಷಕ್ಕೆ ಕಾರಣವಾಗಲಿದೆ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದೀರಿ. ನೆಮ್ಮದಿಯಿರಲಿದೆ.

ತುಲಾ: ಪಾಲಿಗೆ ಬಂದಿದ್ದು ಪಂಚಾಮೃತ ಎಂದು ತಿಳಿದು ಮುನ್ನಡೆಯಬೇಕು. ಹೊಸದಾಗಿ ಕೆಲಸಕ್ಕೆ ಸೇರಿಕೊಂಡವರಿಗೆ ಹೊಂದಾಣಿಕೆ ಕಷ್ಟವಾಗಬಹುದು. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ತಾಳ್ಮೆಯಿರಲಿ.

ವೃಶ್ಚಿಕ: ಕೈಗೆ ಸಿಕ್ಕ ತುತ್ತು ಬಾಯಿಗೆ ಬರಲಿಲ್ಲ ಎಂದು ನಿರಾಸೆ ಅನುಭವಿಸಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಆಪ್ತರಿಂದಲೇ ತೊಂದರೆ ಎದುರಾದೀತು. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಹೆಚ್ಚು ಆಸಕ್ತಿ ಕಂಡುಕೊಳ್ಳಲಿದ್ದಾರೆ.

ಧನು: ಸ್ವಲ್ಪದರಲ್ಲೇ ಅನಾಹುತವೊಂದು ತಪ್ಪಿತೆಂಬ ನೆಮ್ಮದಿಯ ಭಾವವಿರಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಕ್ಕಳಿಂದ ಸಂತೋಷದ ವಾರ್ತೆ.

ಮಕರ: ನೀವು ಇಷ್ಟು ದಿನ ಕಾಯ್ದುಕೊಂಡಿದ್ದ ಗುಟ್ಟು ಹೊರಬರುವ ಸಮಯ. ಮಕ್ಕಳ ಸಂತೋಷಕ್ಕಾಗಿ ಕೆಲವು ಕೆಲಸ ಮಾಡಬೇಕಾಗುತ್ತದೆ. ವಾಹನ ಖರೀದಿಸುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಚಿಂತೆ ಬೇಡ.

ಕುಂಭ: ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದ್ದು, ನೆಮ್ಮದಿಯಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ.

ಮೀನ: ಅಂದುಕೊಂಡಿದ್ದನ್ನೂ ಬೇಗನೇ ಕೆಲಸ ಮುಗಿಸಿದ ಸಂತೃಪ್ತಿ ನಿಮ್ಮದಾಗಲಿದೆ. ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾಗಲಿದ್ದೀರಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ