ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 25 ಫೆಬ್ರವರಿ 2023 (08:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಒಂದು ರೀತಿಯ ಆಲಸ್ಯ ಮನೋಭಾವ ಕಂಡುಬಂದೀತು. ಕೆಲವೊಂದು ವಿಚಾರಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳಬೇಕಾದ ಅನಿವಾರ್ಯತೆಯಿದೆ.

ವೃಷಭ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ನಿರುದ್ಯೋಗಿಗಳು ಸೂಕ್ತ ಉದ್ಯೋಗಕ್ಕಾಗಿ ಪ್ರಯತ್ನ ಮುಂದುವರಿಸಬೇಕಾಗುತ್ತದೆ. ತಾಳ್ಮೆಯಿರಲಿ.

ಮಿಥುನ: ಕೌಟುಂಬಿಕ  ವಿಚಾರವಾಗಿ ಕೆಲವೊಂದು ಭಿನ್ನಾಭಿಪ್ರಾಯಗಳು ಬಂದೀತು. ಸಲಹೆಗಳಿಗೆ ಕಿವಿಗೊಡುವ ತಾಳ್ಮೆ ನಿಮ್ಮದಾಗಿರಲಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆ ಎದುರಾಗದು. ಚಿಂತೆ ಬೇಡ.

ಕರ್ಕಟಕ: ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಬಹುದಿನಗಳ ಕನಸೊಂದು ನನಸಾಗಲಿದೆ.

ಸಿಂಹ: ಎದುರಾಳಿಗಳು ಎಷ್ಟೇ ಪ್ರಯತ್ನಪಟ್ಟರೂ ನಿಮ್ಮ ಯಶಸ್ಸು ತಡೆಯಲಾಗದು. ವ್ಯಾವಹಾರಿಕವಾಗಿ ಮುನ್ನಡೆ ಕಂಡುಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಕನ್ಯಾ: ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಹೊಸ ಪ್ರತಿಸ್ಪರ್ಧಿಗಳು ಕಂಡುಬಂದಾರು. ಸಂಗಾತಿಯೊಂದಿಗೆ ಮನಸ್ಸಿನ ಮಾತು ಹಂಚಿಕೊಳ್ಳಲಿದ್ದೀರಿ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.

ತುಲಾ: ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದ ನೆಮ್ಮದಿ ನಿಮ್ಮದಾಗಲಿದೆ. ಹೊಸ ಜನರ ಭೇಟಿಯಿಂದ ಮನಸ್ಸಿಗೆ ಉಲ್ಲಾಸವಾದೀತು. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗವಿದೆ. ಚಿಂತೆ ಬೇಡ.

ವೃಶ್ಚಿಕ: ವ್ಯವಹಾರದಲ್ಲಿ ನಿಮಗೆ ಎದುರಾಳಿಗಳಿಂದ ತೊಂದರೆಗಳು ಎದುರಾದೀತು. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಸಾಂಸಾರಿಕವಾಗಿ ಪರಸ್ಪರ ಸಹಕಾರವಿರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಧನು: ಸರಕಾರೀ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ತಕ್ಕ ಮಟ್ಟಿನ ಯಶಸ್ಸು ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಬೇರೆಯವರಿಗೆ ಸಾಲ ಕೊಡಲು ಇಂದಿನ ದಿನ ಸೂಕ್ತವಲ್ಲ. ಎಚ್ಚರಿಕೆಯಿರಲಿ.

ಮಕರ: ನಿಮ್ಮ ಕೆಲವೊಂದು ತಪ್ಪು ನಿರ್ಧಾರಗಳು ಕುಟುಂಬದ ಮೇಲೆ ಪರಿಣಾಮ ಬೀರಲಿದೆ. ಬಂಧು ಬಳಗದವರನ್ನು ಭೇಟಿಯಾಗುವ ಸಾಧ್ಯತೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾದೀತು.

ಕುಂಭ: ಹಿಂದೆ ಮಾಡಿದ್ದ ಸಾಲಗಳನ್ನು ಮರುಪಾವತಿ ಮಾಡಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ದಾಂಪತ್ಯದಲ್ಲಿ ತೃಪ್ತಿಕರ ವಾತಾವರಣವಿರುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮೀನ: ಮಕ್ಕಳಿಗೆ ವಿದ್ಯಾಭ್ಯಾಸದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಸಹೋದರ ಸಮಾನರಿಗೆ ಕೆಲಸ ಕಾರ್ಯಗಳಲ್ಲಿ ನೆರವಾಗಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ. ಚಿಂತೆ ಬೇಡ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ