ಮೇಷ: ಸಾಂಸಾರಿಕವಾಗಿ ಅನೇಕ ವಿಚಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳಲು ಗೊಂದಲಗಳು ಕಾಡೀತು. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾಗಲಿದೆ.
ವೃಷಭ: ಪಾಲುದಾರಿಕಾ ವ್ಯವಹಾರದಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಾಗುತ್ತದೆ. ಸಾಂಸಾರಿಕವಾಗಿ ಸುಖ ಸಮೃದ್ಧಿ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.
ಮಿಥುನ: ಉದ್ಯೋಗ, ವ್ಯವಹಾರಗಳಲ್ಲಿ ಹೆಚ್ಚಿನ ಜವಾಬ್ಧಾರಿ ನಿಮ್ಮದಾಗಲಿದೆ. ಗುರುಹಿರಿಯರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ಕಂಡುಬರಲಿದೆ. ಬಹಳ ದಿನಗಳ ನಂತರ ಬಂಧು ಮಿತ್ರರನ್ನು ಭೇಟಿಯಾಗಲಿದ್ದೀರಿ.
ಕರ್ಕಟಕ: ದೇಹಾರೋಗ್ಯದಲ್ಲಿ ಏರುಪೇರಾಗಿದ್ದರೂ ಆಪ್ತರ ಬೆಂಬಲ ಮಾನಸಿಕವಾಗಿ ಬೆಂಬಲ ಸಿಗಲಿದೆ. ದಾಂಪತ್ಯದಲ್ಲಿ ಮಧ್ಯಮ ಸುಖ. ವಿದ್ಯಾರ್ಥಿಗಳಿಗೆ ಹೊಸ ವಿಚಾರಗಳನ್ನು ಕಲಿಯುವ ಉತ್ಸಾಹ ಕಂಡುಬರಲಿದೆ.
ಸಿಂಹ: ಸಂದರ್ಭಕ್ಕೆ ಸರಿಯಾಗಿ ತೀರ್ಮಾನ ತೆಗೆದುಕೊಳ್ಳುವುದರಿಂದ ಸಂಭಾವ್ಯ ಸಮಸ್ಯೆಯಿಂದ ಪಾರಾಗಬಹುದು. ಕೌಟುಂಬಿಕವಾಗಿ ಕ್ಷಮಾಗುಣವಿದ್ದರೆ ಭಿನ್ನಾಬಿಪ್ರಾಯಗಳು ದೂರವಾದೀತು. ತಾಳ್ಮೆಯಿರಲಿ.
ಕನ್ಯಾ: ನಕಾರಾತ್ಮಕ ಚಿಂತನೆಗೆ ಅವಕಾಶ ಮಾಡಿಕೊಡದಿರಿ. ತಾಳ್ಮೆ, ಸಹನೆಯಿಂದ ಕಾರ್ಯಪ್ರವೃತ್ತರಾಗಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಚಿಂತೆ ಬೇಡ.
ತುಲಾ: ಇನ್ನೊಬ್ಬರಿಗೆ ಮಾತು ನೀಡುವ ಮೊದಲು ಸರಿಯಾಗಿ ಪರಾಮರ್ಶೆ ನಡೆಸಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ.
ವೃಶ್ಚಿಕ: ಸಾಂಸಾರಿಕವಾಗಿ ಸುಖ, ಸಮೃದ್ಧಿಯಿದ್ದರೂ ಉದ್ಯೋಗ ಸಂಬಂಧವಾದ ಚಿಂತೆ ನಿಮ್ಮನ್ನು ಕಾಡಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ದೇವತಾ ಪ್ರಾರ್ಥನೆ ಮಾಡಿ.
ಧನು: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಿದ್ದರೆ ಅಡೆತಡೆಗಳು ಕಂಡುಬಂದೀತು. ಬಚ್ಚಿಟ್ಟಿದ್ದ ಸಂಪಾದನೆ ಅನಿರೀಕ್ಷಿತವಾಗಿ ಖರ್ಚು ವೆಚ್ಚವಾಗಲಿದೆ. ದೀರ್ಘ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ.
ಮಕರ: ಧಾರ್ಮಿಕ ಚಟುವಟಿಕೆಗಳಿಗೆ ನೇತೃತ್ವ ವಹಿಸಲಿದ್ದೀರಿ. ಹೊಸ ಕೆಲಸಕ್ಕೆ ಕೈ ಹಾಕಲು ಇದು ಸಕಾಲ. ದಂಪತಿಗಳಲ್ಲಿ ಅನುರಾಗ ವೃದ್ಧಿಯಾಗಲಿದೆ. ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆಕಂಡುಬರಲಿದೆ.
ಕುಂಭ: ಸರಕಾರೀ ಉದ್ಯೋಗಿಗಳಿಗೆ ಮುಂಬಡ್ತಿಯ ಕನಸು ಸದ್ಯದಲ್ಲೇ ನನಸಾಗಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.
ಮೀನ: ನೂತನ ದಂಪತಿಗಳು ಸುಂದರ ಕ್ಷಣ ಕಳೆಯಲಿದ್ದಾರೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸ್ವಯಂ ವೃತ್ತಿಯವರಿಗೆ ಲಾಭವಾಗಲಿದೆ.