ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 8 ಮಾರ್ಚ್ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ವ್ಯವಹಾರದಲ್ಲಿ ಹೆಚ್ಚಿನ ಜವಾಬ್ಧಾರಿ ಜೊತೆಗೂ ಕೀರ್ತಿಯೂ ಸಂಪಾದಿಸಲಿದ್ದೀರಿ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸಾಂಸಾರಿಕವಾಗಿ ನಿಮ್ಮ ಅಧಿಕಾರಯುತ ಧೋರಣೆ ಇತರರಿಗೆ ಇಷ್ಟವಾಗದು.

ವೃಷಭ: ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳುವ ಮೂಲಕ ಮನಸ್ಸಿಗೆ ನೆಮ್ಮದಿ ಪಡೆಯಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಯಾದೀತು.

ಮಿಥುನ: ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ಕಷ್ಟವಾದೀತು. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.

ಕರ್ಕಟಕ: ಸಾಂಸಾರಿಕವಾಗಿ ಇತರ ಸದಸ್ಯರ ಕಷ್ಟಗಳಲ್ಲಿ ಪಾಲುದಾರರಾಗಲಿದ್ದೀರಿ. ಕಾರ್ಯರಂಗದಲ್ಲಿ ನಿಮ್ಮ ವಿಶ್ವಾಸಕ್ಕೆ ಧಕ್ಕೆಯಾಗುವಂತಹ ಘಟನೆಗಳಾದೀತು. ದೇವತಾ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ.

ಸಿಂಹ: ಇನ್ನೊಬ್ಬರಿಗೆ ಸಹಾಯ ಮಾಡುವ ಮುನ್ನ ಪೂರ್ಪಾವರ ತಿಳಿದು ಮುಂದುವರಿಯಿರಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಸರಾಕರೀ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ.

ಕನ್ಯಾ: ಆಪ್ತರಿಗೆ ಹಣಕಾಸಿನ ಸಹಾಯ ಮಾಡಲಿದ್ದೀರಿ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ಮೂಲಕ ಖುಷಿ ನೀಡಲಿದ್ದೀರಿ. ಸಾಂಸಾರಿಕವಾಗಿ ನೆಮ್ಮದಿಯಿರಲಿದೆ.

ತುಲಾ: ವೈಯಕ್ತಿಕ ಜೀವನದಲ್ಲಿ ಆಗುವ ಬದಲಾವಣೆಗಳಿಗೆ ಮಾನಸಿಕವಾಗಿ ಸಿದ್ಧರಾಗಬೇಕಾಗುತ್ತದೆ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ದೂರದ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರುವುದು.

ವೃಶ್ಚಿಕ: ಮನಸ್ಸಿಗೆ ಹಿಡಿಸಿದ ವ್ಯಕ್ತಿಗಳ ಜೊತೆ ಸಂಬಂಧ ಗಟ್ಟಿಗೊಳಿಸಲಿದ್ದೀರಿ. ಉದ್ಯೋಗ ನಿಮಿತ್ತ ಸಣ್ಣ ಪ್ರಯಾಣ ಮಾಡಬೇಕಾಗಿ ಬಂದೀತು. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಚಿಂತೆ ಬೇಡ.

ಧನು: ವೈಯಕ್ತಿಕ ವಿಚಾರಗಳಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಹೊಸ ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಸಹೋದ್ಯೋಗಿಗಳಿಂದ ಸಹಕಾರ ಸಿಗುವುದು. ದೇವತಾ ಪ್ರಾರ್ಥನೆ ಮಾಡಿ.

ಮಕರ: ವಿದ್ಯಾರ್ಥಿಗಳಿಗೆ ಏಕಾಗ್ರತೆಗೆ ಭಂಗವುಂಟಾದೀತು. ಗುರುಹಿರಿಯರ ಸಲಹೆ ಪಾಲಿಸುವುದು ಉತ್ತಮ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ಅವಿವಾಹಿತರಿಗೆ ವಿವಾಹಕ್ಕೆ ವಿಘ್ನ ಪರಿಹಾರಕ್ಕೆ ದೇವರ ಮೊರೆ ಹೋಗುವುದು ಉತ್ತಮ.

ಕುಂಭ: ಕಟ್ಟಡ ಕಾಮಗಾರಿ ಕೆಲಸಗಳು ಸಂಪೂರ್ಣವಾದ ತೃಪ್ತಿ ನಿಮ್ಮದಾಗುವುದು. ಅಗತ್ಯಕ್ಕೆ ತಕ್ಕಂತೆ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಹಳೆಯ ಸ್ನೇಹಿತರನ್ನು ಭೇಟಿ ಮಾಡುವ ಯೋಗ. ತಾಳ್ಮೆ, ಸಂಯಮವಿರಲಿ.

ಮೀನ: ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ಕುಟುಂಬ ಸದಸ್ಯರೊಂದಿಗೆ ಚರ್ಚಿಸಿ ಮುನ್ನಡೆಯಿರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ