ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 10 ಮಾರ್ಚ್ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಿದ್ಯಾರ್ಥಿಗಳಿಗೆ ಅದೃಷ್ಟದ ದಿನ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಭವಿಷ್ಯದ ಬಗ್ಗೆ ಎಚ್ಚರಿಕೆಯಿರಲಿ. ಸಾಂಸಾರಿಕವಾಗಿ ಸಮಾಧಾನಕರ ದಿನವಾಗಿರಲಿದೆ. ಅನಗತ್ಯ ಚಿಂತೆ ಬೇಡ.

ವೃಷಭ: ನಿಮ್ಮ ಕೆಲಸ ಕಾರ್ಯಗಳಿಗೆ ಗುರುಹಿರಿಯರ ಬೆಂಬಲ ಸಿಗಲಿದೆ.  ಅನಿರೀಕ್ಷಿತ ಧನಲಾಭ ಕಂಡುಬರಲಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ವಿದೇಶಗಳಲ್ಲಿ ಉದ್ಯೋಗದಲ್ಲಿರುವವರಿಗೆ ತವರಿನ ಭೇಟಿ ಯೋಗ. ಆಸ್ತಿ ವಿಚಾರದಲ್ಲಿ ಹೆಚ್ಚಿನ ಜವಾಬ್ಧಾರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣವಿರಲಿದೆ. ತಾಳ್ಮೆಯಿರಲಿ.

ಸಿಂಹ: ನಿಮ್ಮ ಕಾರ್ಯವೈಖರಿಯಿಂದ ಇತರರ ಗಮನ ಸೆಳೆಯಲಿದ್ದೀರಿ. ಸಂಗಾತಿಯ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕೆ ಅವಕಾಶ ಪಡೆಯಲಿದ್ದಾರೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಗೊಂದಲಗಳು ಕಾಡುವುದು ಸಹಜ. ಸತ್ಕಾರ್ಯಗಳಿಗೆ ಧನವ್ಯಯ ಮಾಡಲಿದ್ದೀರಿ. ಸರಕಾರೀ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬಂದೀತು. ತಾಳ್ಮೆಯಿರಲಿ.

ತುಲಾ: ಸಾಮಾಜಿಕವಾಗಿ ಕೀರ್ತಿವಂತರಾಗಲಿದ್ದೀರಿ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಪಾಲುದಾರಿಕಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದವರಿಗೆ ಮುನ್ನಡೆ.

ವೃಶ್ಚಿಕ: ಉದ್ಯೋಗ ಸಂಬಂಧವಾದ ಸಮಸ್ಯೆಗಳನ್ನು ಪರಿಹರಿಸಲು ಸಂಗಾತಿಯ ಸಲಹೆ ಪಡೆಯಲಿದ್ದೀರಿ. ಮಕ್ಕಳಿಂದ ಸಂತೋಷ ಸಿಗುವುದು. ಮಾತೃ ಸಮಾನರ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಕುಲದೇವರ ಪ್ರಾರ್ಥನೆ ಮಾಡಿ.

ಧನು: ಅವಿವಾಹಿತರಿಗೆ ಶೀಘ್ರದಲ್ಲೇ ಯೋಗ್ಯ ಸಂಬಂಧಗಳು ಕೂಡಿಬರಲಿವೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಮನೆಗೆ ಬಂಧು ಮಿತ್ರರ ಆಗಮನ ಸಾಧ‍್ಯತೆ. ಕಿರು ಸಂಚಾರ ಮಾಡಲಿದ್ದೀರಿ.

ಮಕರ: ಕಾರ್ಯನಿಮಿತ್ತ ಪರವೂರಿಗೆ ಸಂಚರಿಸುವ ಅನಿವಾರ್ಯತೆ ಎದುರಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಯೋಗ. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟ ಕಂಡುಬರಲಿದೆ. ಎಚ್ಚರಿಕೆಯಿರಲಿ.

ಕುಂಭ: ಉಳಿತಾಯದ ಹಣವನ್ನು ಹೂಡಿಕೆ ಮಾಡಲು ಯೋಜನೆ ರೂಪಿಸಲಿದ್ದೀರಿ. ಕೌಟುಂಬಿಕವಾಗಿ ಸುಖ ಸಮೃದ್ಧಿಯಿರಲಿದೆ. ಬೇಡವೆಂದು ಬಿಟ್ಟಿದ್ದ ವಸ್ತುವೂ ನಿಮಗೆ ಇಂದು ಉಪಯೋಗಕ್ಕೆ ಬಂದೀತು. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಮೀನ: ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡಿದ್ದವರಿಗೆ ಸವಾಲುಗಳು ಎದುರಾದೀತು. ಅನಗತ್ಯ ವಿಚಾರಗಳಿಗೆ ತಲೆಕೊಡದಿರಿ. ಹಿರಿಯರು ದೇವತಾ ಸ್ಥಳ ಸಂದರ್ಶಿಸಲಿದ್ದಾರೆ. ದಾಂಪತ್ಯದಲ್ಲಿ ಕಲಹಕ್ಕೆ ಅವಕಾಶ ನೀಡದಿರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ