ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 11 ಮಾರ್ಚ್ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮನ್ನು ಟೀಕೆ ಮಾಡುತ್ತಿದ್ದವರಿಗೆ ಕೆಲಸ ಕಾರ್ಯಗಳೇ ಉತ್ತರವಾಗಲಿ. ಅನಗತ್ಯ ಮಾತುಗಳಿಗೆ ಅವಕಾಶ ನೀಡಬೇಡಿ. ದೇಹಾರೋಗ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ಸಹೋದ್ಯೋಗಿಗಳ ನೆರವು ಪಡೆಯಲಿದ್ದೀರಿ. ಕೌಟುಂಬಿಕವಾಗಿ ಪರಸ್ಪರ ಸಹಕಾರ ಕಂಡುಬರಲಿದೆ. ಮಹಿಳೆಯರಿಗೆ ದೇಹಾರೋಗ್ಯದ ಸಮಸ್ಯೆ ಎದುರಾದೀತು. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ನಿಮ್ಮ ಕಾರ್ಯವೈಖರಿ ಮೆಚ್ಚಿ ಮೇಲಧಿಕಾರಿಗಳಿಂದ ಇನಾಮು ಪಡೆಯಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಬಹುದಿನಗಳ ನಂತರ ಆಪ್ತರನ್ನು ಭೇಟಿ ಮಾಡಲಿದ್ದೀರಿ.

ಕರ್ಕಟಕ: ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಬಗ್ಗೆ ಐಡಿಯಾ ಬರಲಿವೆ. ಮಹಿಳೆಯರಿಗೆ ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ.

ಸಿಂಹ: ಮನಸ್ಸಿನಲ್ಲಿರುವ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ.

ಕನ್ಯಾ: ಹಿರಿಯರ ಪ್ರೀತಿ ಸಂಪಾದಿಸಲಿದ್ದೀರಿ. ಧಾರ್ಮಿಕ ಚಟುವಟಿಕೆಗಳಿಗೆ ನೇತೃತ್ವ ವಹಿಸಲಿದ್ದೀರಿ. ವ್ಯವಾಹರದಲ್ಲಿ ದಾಕ್ಷಿಣ್ಯಕ್ಕೊಳಗಾಗದಿರಿ. ಸಂಗಾತಿಯ ಬಹುದಿನಗಳ ಬೇಡಿಕೆ ಈಡೇರಿಸಲಿದ್ದೀರಿ. ತಾಳ್ಮೆಯಿರಲಿ.

ತುಲಾ: ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಆಸ್ತಿ ವಿಚಾರದಲ್ಲಿ ಹೆಚ್ಚಿನ ಜವಾಬ್ಧಾರಿ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಚಿಂತೆ ಬೇಡ.

ವೃಶ್ಚಿಕ: ಕೌಟುಂಬಿಕ ನೆಮ್ಮದಿಗಾಗಿ ಕೆಲವೊಂದು ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ನೀವು ಹೇಳುವ ವಿಚಾರದಲ್ಲಿ ಸ್ಪಷ್ಟತೆಯಿರಲಿ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ.

ಧನು: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ಕೊಡಬೇಡಿ. ಸಹೋದರ ಸಮಾನರಿಂದ ಸಹಕಾರ ಸಿಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ವಿದ್ಯಾರ್ಥಿಗಳಿಗೆ, ಅಧ್ಯಯನ ಪ್ರವೃತ್ತರಿಗೆ ಮುನ್ನಡೆಯ ಯೋಗ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಹೊಸದಾಗ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ.

ಕುಂಭ: ದೇಹಾರೋಗ್ಯದ ಬಗ್ಗೆ ಅಸಡ್ಡೆ ಬೇಡ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿಂದಿರಿ. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಪ್ರಯತ್ನ ನಡೆಸಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮೀನ: ನಿಮ್ಮ ಮಾತಿನಿಂದ ಇತರರಿಗೆ ಬೇಸರವಾದೀತು. ದುಡುಕಿನ ನಿರ್ಧಾರ ಅನಾಹುತಕ್ಕೆ ಕಾರಣವಾದೀತು. ಕೆಲಸ ಕಾರ್ಯದ ಒತ್ತಡದಿಂದ ದೇಹಾಯಾಸವಾದೀತು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ