ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 13 ಮಾರ್ಚ್ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ವ್ಯವಾಹರದಲ್ಲಿ ಅಡಚಣೆಗಳು ನಿವಾರಣೆಯಾಗಿ ನೆಮ್ಮದಿಯಾಗಲಿದೆ. ಆದರೆ ದೇಹಾರೋಗ್ಯದ ಸಮಸ್ಯೆ ಚಿಂತೆಗೆ ಕಾರಣವಾದೀತು. ಸಾಂಸಾರಿಕವಾಗಿ ತಾಳ್ಮೆ ಅಗತ್ಯ. ಕಿರು ಸಂಚಾರ ಮಾಡಲಿದ್ದೀರಿ.

ವೃಷಭ: ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ಬಂಧು ಮಿತ್ರರಿಂದ ಸಹಕಾರ ಸಿಗುವುದು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.

ಮಿಥುನ: ವಿಶೇಷ ಅತಿಥಿಗಳ ಸ್ವಾಗತಕ್ಕೆ ಸಿದ್ಧತೆ ನಡೆಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕ ಯೋಜನೆಗಳು ಕೈ ಕೊಡುವ ಸಂಭವ. ಮೇಲಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ವರ್ತಿಸಿ. ತಾಳ್ಮೆಯಿರಲಿ.

ಕರ್ಕಟಕ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ. ವಿವಾಹಾದಿ ಪ್ರಯತ್ನಗಳಲ್ಲಿ ಮುನ್ನಡೆ ಕಂಡುಬರಲಿದೆ. ಚಿಂತೆ ಬೇಡ.

ಸಿಂಹ: ಧನಾದಾಯ ಹೆಚ್ಚಳಕ್ಕೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾದೀತು. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಮನಸ್ಸಿನಲ್ಲಿರುವ ಕಷ್ಟಗಳನ್ನು ಇನ್ನೊಬ್ಬರಿಗೆ ಹೇಳಿಕೊಳ‍್ಳಲಾಗದ ಸಂದಿಗ್ಧತೆ ಕಾಡಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ತುಲಾ: ಪ್ರಯತ್ನಕ್ಕೆ ತಕ್ಕ ಫಲ ಸಿಗದೇ ನಿರಾಶರಾಗುವ ಸಂಭವ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಬೆಲೆಸಿಗದೇ ಹೋದೀತು. ನೆರೆಹೊರೆಯವರೊಂದಿಗೆ ಅನಗತ್ಯ ಸಂಘರ್ಷ ಬೇಡ.

ವೃಶ್ಚಿಕ: ಪಾಲುದಾರಿಕಾ ಕ್ಷೇತ್ರದ ವ್ಯವಹಾರದಲ್ಲಿ ನಿರೀಕ್ಷಿತ ಅಭಿವೃದ್ಧಿ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮ ಹೆಚ್ಚಿಸಬೇಕಾದ ಅನಿವಾರ್ಯತೆ. ಸಾಂಸಾರಿಕವಾಗಿ ನೆಮ್ಮದಿ, ಅಭಿವೃದ್ಧಿ ಕಂಡುಬರಲಿದೆ.

ಧನು: ಸಮಾನ ಮನಸ್ಕರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ. ಮನಸ್ಸಿನಲ್ಲಿರುವ ಕ್ರಿಯಾತ್ಮಕ ಆಲೋಚನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಆಸ್ತಿ ವಿಚಾರದಲ್ಲಿ ನಿರ್ಣಯ ಬರುವ ಸಾಧ‍್ಯತೆ. ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ಕೋರ್ಟು ಕಚೇರಿ ವ್ಯವಹಾರಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ವ್ಯಾಪಾರೀ ವರ್ಗದವರು ಸಾಲಗಾರರ ಕಾಟದಿಂದ ಮುಕ್ತರಾಗಲಿದ್ದಾರೆ.

ಕುಂಭ: ಸರಕಾರೀ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆಯ ಯೋಗ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ.

ಮೀನ: ಸಾಂಸಾರಿಕವಾಗಿ ಸಂಘರ್ಷಗಳನ್ನು ನಿವಾರಿಸಲು ಪ್ರಯತ್ನ ನಡೆಸಲಿದ್ದೀರಿ. ಧನಾರ್ಜನೆಗೆ ಯಾವುದೇ ತೊಂದರೆಯಾಗದು. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ