ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 16 ಮಾರ್ಚ್ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನೀವು ಆಗ್ರಹಿಸದೇ ಹೋದರೂ ಕೆಲವೊಂದು ವಿಚಾರಗಳು ಅನುಕೂಲಕರವಾಗಿಯೇ ನಡೆಯಲಿವೆ. ಮನೆಯವರ ಸಂತೋಷಕ್ಕಾಗಿ ಕೆಲವೊಂದು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಕಿರು ಸಂಚಾರ ಮಾಡಲಿದ್ದೀರಿ.

ವೃಷಭ: ಕಾರ್ಯರಂಗದಲ್ಲಿ ನಿಮ್ಮ ಬಗ್ಗೆ ಚಾಡಿ ಮಾತುಗಳು ಕೇಳಿಬಂದೀತು. ಎದುರಿಸಿಕೊಂಡು ಹೋಗುವ ತಾಳ್ಮೆಯಿರಲಿ. ಸಂಗಾತಿಯ ಸಾಂತ್ವನ ಮನಸ್ಸಿಗೆ ನೆಮ್ಮದಿ ನೀಡಲಿದೆ. ಹಿರಿಯರಿಗೆ ಪುಣ್ಯಕ್ಷೇತ್ರದ ಸಂದರ್ಶನ ಯೋಗ.

ಮಿಥುನ: ಸಾಂಸಾರಿಕವಾಗಿ ಯಾವುದೋ ವಿಚಾರಗಳಲ್ಲಿ ಒಂದು ರೀತಿಯ ಅತೃಪ್ತಿ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ. ನಿಮ್ಮ ಆಪ್ತರ ಕಷ್ಟಗಳಿಗೆ ಸಹಾಯ ಮಾಡಲಿದ್ದೀರಿ.

ಕರ್ಕಟಕ: ಆತ್ಮೀಯರನ್ನು ಕಳೆದುಕೊಂಡ ನೋವು ನಿಮ್ಮದಾಗುವುದು. ಬಂಧು ಮಿತ್ರರನ್ನು ಭೇಟಿಯಾಗಲಿದ್ದೀರಿ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ಸ್ವಯಂ ವೃತ್ತಿಯವರಿಗೆ ಅನುಕೂಲಕರ ದಿನವಾಗಲಿದೆ.

ಸಿಂಹ: ವ್ಯಾಪಾರ, ಉದ್ದಿಮೆಯಲ್ಲಿ ತೊಡಗಿಸಿಕೊಂಡವರು ತಮ್ಮ ವಾಕ್ಚತುರತೆಯನ್ನು ಪ್ರದರ್ಶಿಸಬೇಕಾಗುತ್ತದೆ. ಸನ್ಮಿತ್ರರ ಸಹವಾಸದಿಂದ ಕೆಲವೊಂದು ಒಳ್ಳೆಯ ಕೆಲಸಗಳಿಗೆ ನೇತೃತ್ವ ವಹಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಮನಸ್ಸಿನಲ್ಲಿರುವ ವಿಚಾರಗಳನ್ನು ಆಪ್ತರೊಂದಿಗೆ ಹೇಳಿಕೊಳ್ಳಲು ಹಿಂಜರಿಯುವ ಪರಿಸ್ಥಿತಿ. ಮಕ್ಕಳ ನಿಮಿತ್ತ ಖರ್ಚು ವೆಚ್ಚಗಳಾದೀತು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿಂದಿರುವುದು ಮುಖ್ಯ.

ತುಲಾ: ಎಷ್ಟೇ ಕಷ್ಟವಿದ್ದರೂ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿಬರಲಿರುವುದರಿಂದ ಚಿಂತೆ ಬೇಡ. ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ.

ವೃಶ್ಚಿಕ: ಸರಕಾರೀ ಕೆಲಸಗಳಲ್ಲಿ ಕಾರ್ಯಸಿದ್ಧಿಯಾಗಿ ನೆಮ್ಮದಿಯಾಗಲಿದೆ. ಸಾಂಸಾರಿಕವಾಗಿ ಇತರ ಸದಸ್ಯರ ಗೌರವ ಸಂಪಾದಿಸಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಕಟ್ಟು ನಿಟ್ಟು ಅಗತ್ಯ. ಕುಲದೇವರ ಪ್ರಾರ್ಥನೆ ಮಾಡಿ.

ಧನು: ನೀವು ಇಷ್ಟು ದಿನ ಬಯಸಿದ ಸುದ್ದಿ ಇಂದು ನಿಮ್ಮ ಕಿವಿಗೆ ಬೀಳಲಿದೆ. ಮಕ್ಕಳಿಂದ ಸಂತೋಷ ಸಿಗಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ಮಕರ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಹಿತಶತ್ರುಗಳಿಂದ ತೊಂದರೆಗಳು ಎದುರಾದೀತು. ಆದಾಯ ವೃದ್ಧಿಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ.

ಕುಂಭ: ನಿಮ್ಮ ಹಣಕಾಸಿನ ವ್ಯವಹಾರದಲ್ಲಿ ಬೇರೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಏಕಾಗ್ರತೆಯ ಕೊರತೆ ಕಂಡುಬಂದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ.

ಮೀನ: ಯಾರು ಎಷ್ಟೇ ಹೇಳಿದರೂ ನಿಮ್ಮ ತೀರ್ಮಾನದಂತೇ ನೀವು ನಡೆದುಕೊಳ್ಳಲಿದ್ದೀರಿ. ಸಹೋದರರ ಜವಾಬ್ಧಾರಿ ನಿಮ್ಮದಾಗಲಿದೆ. ದೇವತಾ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಕಾರ್ಯ ವಿಘ್ನ ದೂರವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ