ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 17 ಮಾರ್ಚ್ 2023 (08:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹಿಂದೆ ಬೇಡವೆಂದು ಬಿಟ್ಟಿದ್ದ ವಿಚಾರಗಳು ಮತ್ತೆ ನಿಮ್ಮನ್ನು ಕಾಡಲಿದೆ. ಸಮಸ್ಯೆಗಳನ್ನು ಬಂದ ಹಾಗೇ ಸ್ವೀಕರಿಸಲು ಕಲಿಯಬೇಕಾಗುತ್ತದೆ. ಮಕ್ಕಳು ನಿಮ್ಮ ಆತ್ಮವಿಶ್ವಾಸ ಹೆಚ್ಚಿಸಲಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಮನಸ್ಸಿನಲ್ಲಿರುವ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಪ್ರಯತ್ನ ಮುಂದುವರಿಸಬೇಕಾಗುತ್ತದೆ.

ಮಿಥುನ: ನಿರುದ್ಯೋಗಿಗಳಿಗೆ ವಿದೇಶದಲ್ಲಿ ಉದ್ಯೋಗಾವಕಾಶಗಳ ಸಾಧ್ಯತೆ. ವಿದ್ಯಾರ್ಥಿಗಳು ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ.

ಸಿಂಹ: ಹೊಸದಾಗಿ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದವರಿಗೆ ಮುನ್ನಡೆಯ ಯೋಗ. ನಿರುದ್ಯೋಗಿಗಳ ಉದ್ಯೋಗ ಬೇಟೆ ಪ್ರಯತ್ನಕ್ಕೆ ಹಿನ್ನಡೆಯಾದೀತು. ಆಹಾರ ಸೇವನೆ ವಿಚಾರದಲ್ಲಿ ಕಾಳಜಿ ಅಗತ್ಯ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ನಿಮ್ಮ ಮಾತಿನಿಂದಲೇ ಇತರರಿಗೆ ಮೋಡಿ ಮಾಡಲಿದ್ದೀರಿ. ವ್ಯವಹಾರ  ಚತುರತೆಯಿಂದ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಧನ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ.

ತುಲಾ: ಸಾಂಸಾರಿಕವಾಗಿ ಸುಖ ಸಮೃದ್ಧಿ ಕಂಡುಬರಲಿದೆ. ಆಪ್ತೇಷ್ಟರನ್ನು ಭೇಟಿಯಾಗುವ ಯೋಗ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಕಾರ್ಯನಿಮಿತ್ತ ಪ್ರಯಾಣ ಮಾಡಬೇಕಾದೀತು.

ವೃಶ್ಚಿಕ: ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಯೋಗ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಕೈ ಹಾಕಿದ್ದರೆ ಅನಗತ್ಯ ಖರ್ಚು ವೆಚ್ಚಗಳಾಗುವ ಸಾಧ‍್ಯತೆ. ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಆಪ್ತರ ಸಲಹೆ ಪಾಲಿಸುವುದು ಉತ್ತಮ.

ಧನು: ಬೇರೆಯವರು ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ನಿಮ್ಮ ಕೆಲಸಗಳು ನಿಮಗೇ ನೆಮ್ಮದಿ ಕೊಡಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಕಿರು ಓಡಾಟ ಸಾಧ‍್ಯತೆ.

ಮಕರ: ಅತಿಯಾದ ಧಾರಾಳತನ, ದಾನ ಧರ್ಮಾದಿಗಳು ಮುಂದೆ ನಿಮಗೇ ತೊಂದರೆ ತಂದೀತು. ಮಕ್ಕಳ ವಿಚಾರದಲ್ಲಿ ಸಂಗಾತಿಯೊಂದಿಗೆ ಚರ್ಚೆಗಳಾಗುವ ಸಾಧ‍್ಯತೆ. ಮಾತಿನ ಮೇಲೆ ನಿಗಾ ಇರಲಿ. ತಾಳ್ಮೆ ಅಗತ್ಯ.

ಕುಂಭ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆ. ದಾಂಪತ್ಯ ಸುಖಕ್ಕೆ ತೊಂದರೆಯಾಗದು. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವರ್ತಿಸಿ. ಆಹಾರೋದ್ಯಮಿಗಳಿಗೆ ಲಾಭವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಆದಾಯ  ವೃದ್ಧಿಗೆ ನಾನಾ ದಾರಿಗಳನ್ನು ಕಂಡುಕೊಳ್ಳಬೇಕಾಗುತ್ತದೆ.ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಅನಗತ್ಯ ಚಿಂತೆ ಬೇಡ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ