ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 19 ಮಾರ್ಚ್ 2023 (08:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹಳೆಯ ಸಮಸ್ಯೆಗಳಿಗೆ ಮರುಜೀವ ಬರಲಿದೆ. ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಬೇಕಾಗುತ್ತದೆ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಬೇಕಾಗುತ್ತದೆ.

ವೃಷಭ: ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಭೇಟಿ ಸಾಧ‍್ಯತೆ. ಸಾಂಸಾರಿಕವಾಗಿ ಸುಂದರ ಕ್ಷಣ ಕಳೆಯಲಿದ್ದೀರಿ. ಇಷ್ಟ ಭೋಜನ ಮಾಡುವ ಯೋಗ. ವ್ಯಾಪಾರಿಗಳಿಗೆ ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಅನಗತ್ಯ ಚಿಂತೆ ಬೇಡ.

ಮಿಥುನ: ದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು. ಇಷ್ಟಮಿತ್ರರೊಂದಿಗೆ ಕಾಲ ಕಳೆಯಲಿದ್ದೀರಿ. ಸಮಸ್ಯೆಗಳಿಗೆ ಕ್ರಿಯಾತ್ಮಕವಾಗಿ ಯೋಚಿಸಿ ಪರಿಹಾರ ಕಂಡುಬರಲಿದೆ. ಕುಲದೇವರ ಸನ್ನಿಧಿಗೆ ಭೇಟಿ ಕೊಡಲಿದ್ದೀರಿ.

ಕರ್ಕಟಕ: ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಕೂಡಿಬರಲಿದೆ. ಗುರುಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ವಿದ್ಯಾರ್ಥಿಗಳು ಓದಿನಲ್ಲಿ ಆಸಕ್ತಿ ಕಳೆದುಕೊಳ್ಳಬಹುದು. ಯಾವುದನ್ನೂ ಹಗುರವಾಗಿ ಪರಿಗಣಿಸಬೇಡಿ.

ಸಿಂಹ: ಹಠಮಾರೀತನ ಮನೋಭಾವ ಬಿಟ್ಟು ತಾಳ್ಮೆಯಿಂದ ಪ್ರಯತ್ನಪಟ್ಟಲ್ಲಿ ಕೈ ಹಿಡಿದ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ದಾಂಪತ್ಯದಲ್ಲಿ ತೃಪ್ತಿಕರ ವಾತಾವರಣ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ.

ಕನ್ಯಾ: ಕೌಟುಂಬಿಕವಾಗಿ ತೃಪ್ತಿಕರ ವಾತಾವರಣವಿರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪ್ರಯತ್ನ ಪಡಬೇಕಾಗುತ್ತದೆ.

ತುಲಾ: ಅಧ್ಯಯನ ಪ್ರವೃತ್ತರಿಗೆ ಅವಿರತ ಪ್ರಯತ್ನ ಅಗತ್ಯ. ಸನ್ಮಿತ್ರರ ಸಹಕಾರದಿಂದ ಕೆಲಸಗಳು ಸುಗಮವಾಗಿ ನೆರವೇರಲಿದೆ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೃಶ್ಚಿಕ: ಹೂಡಿಕೆ ವ್ಯವಹಾರಗಳಲ್ಲಿ ಆಸಕ್ತಿ ಕಂಡುಬರಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹಾಯಾಸವಾದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಧನು: ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷ ಬೇಡ. ಗೃಹ, ವಾಹನ ರಿಪೇರಿ ಕೆಲಸಗಳಿಗೆ ಖರ್ಚು ವೆಚ್ಚವಾಗಲಿದೆ. ಬಂಧು ಮಿತ್ರರ ಭೇಟಿ ಸಾಧ‍್ಯತೆ.

ಮಕರ: ಸಂದರ್ಭಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಹೂಡಿಕೆ ವ್ಯವಹಾರಗಳಲ್ಲಿ ಆಸಕ್ತಿ ಕಂಡುಬರಲಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ.

ಕುಂಭ: ಸಾಂಸಾರಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ದೇವತಾ ಸ್ಥಳ ಸಂದರ್ಶನ ಮಾಡಲಿದ್ದೀರಿ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗುವುದು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಆಪ್ತರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ಮನೆಗೆ ಬಂಧು ಮಿತ್ರರ ಆಗಮನ ಸಾಧ‍್ಯತೆ. ಕೌಟುಂಬಿಕವಾಗಿ ಸುಖ,ಸಮೃದ್ಧಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ತಾಳ್ಮೆಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ