ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 20 ಮಾರ್ಚ್ 2023 (08:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮಲ್ಲಿರುವ ಒಳ್ಳೆಯತನ ದುರುಪಯೋಗ ಪಡಿಸಿಕೊಳ್ಳುವವರಿರುತ್ತಾರೆ. ತಾಯಿಯ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳಿಂದ ಮುಕ್ತಿ ಸಿಗಲಿದೆ. ತಾಳ್ಮೆಯಿರಲಿ.

ಮಿಥುನ: ಹೊಸದಾಗಿ ಆರಂಭಿಸಿರುವ ಉದ್ದಿಮೆಯಲ್ಲಿ ಮುನ್ನಡೆ ಕಂಡುಬರಲಿದೆ. ಸಂಗಾತಿಯ ಸೂಕ್ತ ಸಲಹೆಗಳು ಉಪಯೋಗಕ್ಕೆ ಬರಲಿವೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಅನಗತ್ಯ ಚಿಂತೆ ಬೇಡ.

ಕರ್ಕಟಕ: ಅನಿರೀಕ್ಷಿತ ಧನಾಗಮನವಾಗಲಿದ್ದು, ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಗುರುಹಿರಿಯರ ಪ್ರೋತ್ಸಾಹ ಕಂಡುಬರುವುದು.

ಸಿಂಹ: ಭೂಮಿ ಇತ್ಯಾದಿ ವ್ಯವಹಾರಗಳಲ್ಲಿ ಅಡೆತಡೆಗಳಿದ್ದರೂ ನಿಮ್ಮ ಕಡೆಗೆ ತೀರ್ಪು ಬರಲಿದೆ. ಪಾಲುದಾರಿಕಾ ಕ್ಷೇತ್ರದಲ್ಲಿ ವ್ಯವಹಾರ ಮಾಡುವವರಿಗೆ ಲಾಭವಾಗುವ ಸಾಧ‍್ಯತೆ. ಕಾರ್ಯನಿಮಿತ್ತ ಪರವೂರಿಗೆ ಸಂಚರಿಸಬೇಕಾಗುತ್ತದೆ.

ಕನ್ಯಾ: ಸಹೋದ್ಯೋಗಿಗಳ ಕಷ್ಟಕ್ಕೆ ನೆರವಾಗಲಿದ್ದೀರಿ. ಕ್ರಿಯಾತ್ಮಕ ಯೋಚನೆಗಳು ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣವಿರಲಿದೆ.

ತುಲಾ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ನಿರಾಸಕ್ತಿ ಕಂಡುಬರಲಿದೆ. ಸಾಂಸಾರಿಕವಾಗಿ ಸುಖ ಸಮೃದ್ಧಿ ಕಂಡುಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ಪಾಲುದಾರಿಕೆ ವ್ಯವಹಾರದಲ್ಲಿ ನಿರೀಕ್ಷಿತ ಅಭಿವೃದ್ಧಿ ಕಂಡುಬರಲಿದೆ. ಉದ್ಯೋಗದಲ್ಲಿ ಬದಲಾವಣೆಗೆ ಪ್ರಯತ್ನ ನಡೆಸಲಿದ್ದೀರಿ. ಆರ್ಥಿಕ ವಿಚಾರದಲ್ಲಿ ಮನಸ್ಸಿಗೆ ತೃಪ್ತಿಯಾಗಲಿದೆ. ದಾಂಪತ್ಯದಲ್ಲಿ ನೆಮ್ಮದಿ ಕಂಡುಬರುವುದು.

ಧನು: ಸಾಂಸಾರಿಕವಾಗಿ ಮೂರನೆಯವರು ಮೂಗು ತೂರಿಸಲು ಅವಕಾಶ ನೀಡಬೇಡಿ. ಗುರುಹಿರಿಯರಲ್ಲಿ ಸಹನೆಯಿಂದ ವರ್ತಿಸಿ. ಅಧ್ಯಯನಕಾರರಿಗೆ ಅನುಕೂಲಕರ ವಾತಾವರಣವಿರಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಹಿರಿಯರಿಗೆ ದೇವತಾ ಸ್ಥಳ  ಸಂದರ್ಶನ ಮಾಡುವ ಯೋಗ. ತಾಳ್ಮೆಯಿರಲಿ.

ಕುಂಭ: ಸರಕಾರೀ ಕೆಲಸಗಳಲ್ಲಿ ಜಯ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಸ್ವಯಂ ವೃತ್ತಿಯವರಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಮಾತೃ ಸಮಾನರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ದೇವತಾ ಪ್ರಾರ್ಥನೆ ಮಾಡಿ.

ಮೀನ: ಉದ್ದೇಶಿತ ಕೆಲಸಗಳಿಗಾಗಿ ಕೆಲವೊಂದು ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಸಂಗಾತಿಯ ಸಲಹೆಗಳಿಗೆ ಬೆಲೆ ನೀಡಿ. ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ