ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 24 ಮಾರ್ಚ್ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ತಾಳ್ಮೆಯಿಂದ ನಡೆದುಕೊಳ್ಳಿ. ಯಾವುದೇ ವಿಚಾರವಾದರೂ ತಲ್ಲೀನತೆಯಿಂದ ತೊಡಗಿಸಿಕೊಳ್ಳಲಿದ್ದೀರಿ. ಹಿರಿಯರಿಗೆ ಸತ್ಕರ್ಮಗಳಲ್ಲಿ ಭಾಗಿಯಾದ ಸಂತೋಷ ಸಿಗುವುದು.

ವೃಷಭ: ಬಯಸದೇ ಬಂದ ಭಾಗ್ಯ ನಿಮ್ಮ ಜೀವನದ ಸಂತೋಷ ಹೆಚ್ಚಿಸಲಿದೆ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವತಾ ಪ್ರಾರ್ಥನೆ ಮಾಡಬೇಕಾಗುತ್ತದೆ.

ಮಿಥುನ: ಕುಟುಂಬ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ. ಅಧಿಕಾರಿಗಳಿಂದ ಮೆಚ್ಚುಗೆ.

ಕರ್ಕಟಕ: ಕುಟುಂಬದವರ ಕ್ಷೇಮಕ್ಕಾಗಿ ಕೆಲವು ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಹಣಕಾಸಿನ ವ್ಯವಹಾರದಲ್ಲಿ ಪಾರದರ್ಶಕತೆಯಿರಲಿ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಅನಗತ್ಯ ಚಿಂತೆ ಬೇಡ.

ಸಿಂಹ: ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿಬರುವುದರಿಂದ ಸಂಭಾವ್ಯ ಕಷ್ಟಗಳಿಂದ ಪಾರಾಗಲಿದ್ದೀರಿ. ಇಷ್ಟ ಭೋಜನ ಮಾಡುವ ಯೋಗವಿದೆ. ಆದರೆ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಕನ್ಯಾ: ನಿಮ್ಮ ಅನುಕೂಲಕ್ಕಾಗಿ ನಿಮ್ಮದೇ ಕೆಲವೊಂದು ನಿಯಮಗಳಲ್ಲಿ ಬದಲಾವಣೆ ಮಾಡಿಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ವಿದ್ಯಾರ್ಥಿಗಳಿಗೆ ಉನ್ನತಿಯ ಯೋಗ.

ತುಲಾ: ಸಹೋದ್ಯೋಗಿಗಳ ಕಷ್ಟಗಳಿಗೆ ನೆರವಾಗಲಿದ್ದೀರಿ. ಮಹಿಳೆಯರಿಗೆ ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯ. ಮಕ್ಕಳಿಗೆ ಅಪಾಯವಾಗದಂತೆ ನೋಡಿಕೊಳ್ಳಿ.

ವೃಶ್ಚಿಕ: ಪರರ ಹಿತ ಬಯಸುವ ನಿಮಗೆ ನಿಮ್ಮ ಬಗ್ಗೆ ಯೋಚಿಸಲೂ ಸಮಯವಿಲ್ಲದಂತಹ ಪರಿಸ್ಥಿತಿಯಾದೀತು. ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಧನು: ಸರಕಾರೀ ಕೆಲಸಗಳಿಗಾಗಿ ಖರ್ಚು ವೆಚ್ಚಗಳಾದೀತು. ಭೂಮಿ ಪರಭಾರೆ ವಿಚಾರದಲ್ಲಿ ಮುನ್ನಡೆ. ಹೊಸ ಕೆಲಸಗಳಿಗೆ ಕೈ ಹಾಕಲು ಶುಭ ದಿನ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಪಾಲುದಾರಿಕಾ ವ್ಯವಹಾರದಲ್ಲಿ ನಿವ್ವಳ ಲಾಭ ಕಂಡುಬರಲಿದೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಬೇಕಾಗುತ್ತದೆ. ಅನಗತ್ಯ ಚಿಂತೆ ಬೇಡ.

ಕುಂಭ: ಸಭೆ ಸಮಾರಂಭಗಳಲ್ಲಿ ಭಾಗಿಯಾಗಲಿದ್ದು, ಮನಸ್ಸಿಗೆ ಉಲ್ಲಾಸ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕಿರು ಓಡಾಟ ನಡೆಸಬೇಕಾಗುತ್ತದೆ.

ಮೀನ: ಹಿರಿಯರಿಂದ ಬಂದ ಬಳವಳಿಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ನಿಮ್ಮ ಮೇಲಿರಲಿದೆ. ಮನೆಗೆ ನೆಂಟರಿಷ್ಟರ ಭೇಟಿ ಸಾಧ‍್ಯತೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ಕೊಟ್ಟ ಮಾತಿಗೆ ಬದ್ಧರಾಗಿ ನಡೆದುಕೊಳ್ಳಬೇಕಾಗುತ್ತದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ