ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 29 ಮಾರ್ಚ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಮನಸ್ಸಿನ ನೋವುಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಆತ್ಮೀಯರೊಂದಿಗೆ ಇಷ್ಟಭೋಜನ ಮಾಡುವ ಯೋಗ ಕೂಡಿಬರಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ನಿಮ್ಮ ಪ್ರೀತಿ ಪಾತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಮನೆಗೆ ಬಂಧು ಮಿತ್ರರ ಭೇಟಿ ಸಾಧ್ಯತೆ. ಉನ್ನತ ಹುದ್ದೆಗೇರುವ ನಿಮ್ಮ ಕನಸು ಸದ್ಯದದಲ್ಲೇ ನನಸಾಗುವುದು. ಹೊಸ ಜನರ ಭೇಟಿಯಾಗಲಿದ್ದೀರಿ. ಕಾರ್ಯಾನುಕೂಲವಾಗಲಿದೆ.

ಮಿಥುನ: ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಪೂರಕವಾದ ವಾತಾವರಣವಿರಲಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ವಿಶೇಷ ವ್ಯಕ್ತಿಗಳು ಇಂದು ನಿಮ್ಮ ಜೀವನಕ್ಕೆ ಹೊಸ ತಿರುವು ನೀಡಲಿದ್ದಾರೆ. ಆತ್ಮೀಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಸಂಗಾತಿಯ ಮಾತಿಗೆ ಬೆಲೆ ಕೊಡಬೇಕಾಗುತ್ತದೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಸಿಂಹ: ಮಾತಿನ ಭರದಲ್ಲಿ ಇನ್ನೊಬ್ಬರಿಗೆ ನೋಯಿಸುವ ಸಾಧ‍್ಯತೆಯಿದೆ. ತಾಳ್ಮೆಯಿರಲಿ. ವ್ಯಾಪಾರಿಗಳಿಗೆ ಸಾಲಗಾರರ ಕಾಟದಿಂದ ಮುಕ್ತಿ ಸಿಗುವುದು. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆ ಕಂಡುಬರಲಿದೆ. ಅನಗತ್ಯ ಚಿಂತೆ ಬೇಡ.

ಕನ್ಯಾ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆಯ ಯೋಗ ಕಂಡುಬರಲಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ನಿಮ್ಮ ವೈಯಕ್ತಿಕ ಸಮಸ್ಯೆಗಳನ್ನು ಆತ್ಮೀಯರ ಮೇಲೆ ಹೇರಲು ಹೋಗಬೇಡಿ. ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ  ವಹಿಸಿ. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆ.

ವೃಶ್ಚಿಕ: ಕಾರ್ಯನಿಮಿತ್ತ ಪರವೂರಿಗೆ ಸಂಚರಿಸುವ ಅನಿವಾರ್ಯತೆ ಎದುರಾಗಲಿದೆ. ವೈಯಕ್ತಿಕ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ಮರಳಿ ಬಾರದು.

ಧನು: ಮಕ್ಕಳ ಜೀವನದಲ್ಲಿ ಅನಗತ್ಯ ಮೂಗು ತೂರಿಸಲು ಹೋಗಬೇಡಿ. ನಿಮ್ಮ ಮಾತಿನಿಂದ ಸಂಬಂಧಗಳು ಹಾಳಾಗದಂತೆ ಎಚ್ಚರಿಕೆ ವಹಿಸಬೇಕಾಗುತ್ತದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಕಾರ್ಯದೊತ್ತಡವಿರಲಿದೆ.

ಮಕರ: ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಏಕಾಗ್ರತೆಯ ಕೊರತೆ ಕಂಡುಬಂದೀತು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕುಂಭ: ಮನಸ್ಸಿನಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ದಿನದಂತ್ಯಕ್ಕೆ ಸಂತೋಷವಾಗುವುದು.

ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ್ಯತೆ. ವಾಹನ, ಭೂಮಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರುವುದು. ಅನಗತ್ಯ ವಾದ ವಿವಾದಗಳಲ್ಲಿ ಮೂಗು ತೂರಿಸಲು ಹೋಗಬೇಡಿ. ತಾಳ‍್ಮೆಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ