ಮೇಷ: ಸದಾ ಕ್ರಿಯಾಶೀಲರಾಗಿರಲಿದ್ದೀರಿ. ಮನೆಗೆ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸುವಿರಿ. ಗೃಹಿಣಿಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗದು. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ.
ವೃಷಭ: ದೈಹಿಕ ಆರೋಗ್ಯದಲ್ಲಿ ಉದಾಸೀನತೆ ಸಲ್ಲದು. ಪರರ ಹಿತಕ್ಕಾಗಿ ಕೆಲವೊಂದು ಕೆಲಸ ಮಾಡಬೇಕಾಗುತ್ತದೆ. ಸಾಲಗಾರರಿಂದ ಮುಕ್ತಿ ಸಿಗಲಿದೆ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ. ಚಿಂತೆ ಬೇಡ.
ಮಿಥುನ: ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾದೀತು. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತಿ. ಕಿರು ಸಂಚಾರ ಮಾಡಬೇಕಾಗುತ್ತದೆ.
ಕರ್ಕಟಕ: ನಿಮ್ಮ ಕೆಲಸ ಕಾರ್ಯಗಳನ್ನು ಅನಿವಾರ್ಯವಾಗಿ ಮುಂದೂಡಬೇಕಾದೀತು. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಕಾರ್ಯನಿಮಿತ್ತ ಪರರ ಸಹಾಯ ಪಡೆಯಬೇಕಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಸಿಂಹ: ನಿಮ್ಮ ಕೆಲಸ ಕಾರ್ಯಗಳು ಬೇರೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಸಂದರ್ಭೋಚಿತ ನಿರ್ಧಾರಗಳಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಬಹುದು. ದೇವತಾ ಪ್ರಾರ್ಥನೆ ಮಾಡಿ.
ಕನ್ಯಾ: ನಿಮ್ಮ ಜೀವನದಲ್ಲಿ ಮಹತ್ತರ ಬದಲಾವಣೆಯಾಗುವ ಸಂಭವ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ದಿನದಂತ್ಯಕ್ಕೆ ಸಂತೋಷದ ಸುದ್ದಿ.
ತುಲಾ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಕೆಲವು ದಿನ ಕಾಯುವುದು ಉತ್ತಮ. ಹಣಕಾಸಿನ ಗಳಿಕೆಗೆ ನಾನಾ ದಾರಿಗಳ ಬಗ್ಗೆ ಯೋಚನೆ ನಡೆಸಲಿದ್ದೀರಿ. ಕೌಟುಂಬಿಕವಾಗಿ ಪರಸ್ಪರ ಸಹಕಾರವಿರಲಿದೆ. ತಾಳ್ಮೆಯಿರಲಿ.
ವೃಶ್ಚಿಕ: ಅವಿವಾಹಿತರು ಉತ್ತಮ ವಿವಾಹ ಸಂಬಂಧಕ್ಕಾಗಿ ಕಾಯಬೇಕಾಗುತ್ತದೆ. ಮನೆಯಲ್ಲಿ ನೆಂಟರಿಷ್ಟರ ಆಗಮನದಿಂದ ಸಂತೋಷದ ವಾತಾವರಣವಿರಲಿದೆ. ಇಷ್ಟ ಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ.
ಧನು: ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆಯ ಯೋಗ. ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ವಿಶೇಷ ವ್ಯಕ್ತಿಗಳು ನಿಮ್ಮ ಜೀವನ ಪ್ರವೇಶ ಮಾಡಲಿದ್ದಾರೆ.
ಮಕರ: ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಚಿಂತೆ ಬೇಡ.
ಕುಂಭ: ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಪ್ರಯತ್ನ ಮುಂದುವರಿಸಬೇಕಾಗುತ್ತದೆ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.
ಮೀನ: ಮಕ್ಕಳ ನಿಮಿತ್ತ ಖರ್ಚು ವೆಚ್ಚಗಳಾದೀತು. ಕೌಟುಂಬಿಕವಾಗಿ ಸುಖ, ಸಮೃದ್ಧಿಯಿರಲಿದೆ. ಕಾರ್ಯರಂಗದಲ್ಲಿ ಆಲಸ್ಯತನ ಧೋರಣೆ ಬೇಡ. ನೆರೆಹೊರೆಯವರೊಂದಿಗೆ ಸಂಬಂಧ ಸುಧಾರಿಸಲಿದೆ.