ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 8 ಏಪ್ರಿಲ್ 2023 (07:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕಾರ್ಯಕ್ಷೇತ್ರದಲ್ಲಿ ಹೊಂದಾಣಿಕೆಯಿದ್ದರೆ ಮಾತ್ರ ಯಶಸ್ಸು ಸಿಗಲಿದೆ. ಹಣಕಾಸಿನ ವಿಚಾರದಲ್ಲಿ ಯೋಚನೆಯಾದೀತು. ಮಕ್ಕಳಿಗಾಗಿ ಖರ್ಚು ವೆಚ್ಚಗಳಾದೀತು. ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ತಾಳ್ಮೆಯಿರಲಿ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಯಶಸ್ಸು ತಡೆಯಲು ಯಾರಿಗೂ ಸಾಧ‍್ಯವಾಗದು. ಸಹೋದ್ಯೋಗಿಗಳಿಂದ ನೆರವು ಸಿಗಲಿದೆ. ಹಣಕಾಸಿನ ವಿಚಾರದಲ್ಲಿ ಪ್ರಾಮಾಣಿಕತೆಯಿರಲಿ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ಕಂಡುಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ದೊರೆಯಲಿದೆ. ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕರ್ಕಟಕ: ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಸಂಶೋಧಕರಿಗೆ, ಅಧ್ಯಯಪ್ರವೃತ್ತರಿಗೆ ಮುನ್ನಡೆಯ ಯೋಗ. ಅತಿಯಾದ ಕೆಲಸಗಳಿಂದ ದೇಹಾಯಸವಾಗದಂತೆ ನೋಡಿಕೊಳ್ಳಿ. ದಿನದಂತ್ಯಕ್ಕೆ ನೆಮ್ಮದಿ ಕಂಡುಕೊಳ್ಳಲಿದ್ದೀರಿ.

ಸಿಂಹ: ಉದ್ಯೋಗ, ವ್ಯವಹಾರಗಳಲ್ಲಿ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಹೊಸ ಕೆಲಸಗಳಿಗೆ ಕೈ ಹಾಕಲಿದ್ದೀರಿ. ಸ್ವಯಂ ವ್ಯಾಪಾರಿಗಳಿಗೆ ಮುನ್ನಡೆಯ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಮನಸ್ಸಿನಲ್ಲಿರುವ ಕೆಲಸಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನ ನಡೆಸಲಿದ್ದೀರಿ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳ ಸಂತೋಷಕ್ಕಾಗಿ ಕೆಲವೊಂದು ಕೆಲಸ ಮಾಡಬೇಕಾಗುತ್ತದೆ. ತಾಳ್ಮೆಯಿರಲಿ.

ತುಲಾ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಸಾಂಸಾರಿಕವಾಗಿ ನೆಮ್ಮದಿ ಕಂಡುಬರಲಿದೆ. ಬೇರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ಆರೋಗ್ಯದಲ್ಲಿ ಗಣನೀಯ ಸುಧಾರಣೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ ಕಂಡುಬರಲಿದೆ. ವಿಶೇಷವಾದ ವ್ಯಕ್ತಿಗಳು ನಿಮ್ಮ ಜೀವನಕ್ಕೆ ಹೊಸ ತಿರುವು ನೀಡಲಿದ್ದಾರೆ. ಕುಲದೇವರ ಪ್ರಾರ್ಥನೆ ಮಾಡಿ.

ಧನು: ಬಂಧು ಮಿತ್ರರ ಸಮಾಗಮದಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವ್ಯವಹಾರಗಳಲ್ಲಿ ಅನುಕೂಲಕ್ಕಿಂತ ಅನಾನುಕೂಲಗಳೇ ಹೆಚ್ಚು. ತಾಳ್ಮೆಯಿರಲಿ.

ಮಕರ: ಸರಕಾರೀ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಡಿಮೆಯಾಗಲಿದೆ. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಅವಕಾಶವಿದೆ. ನಿರುದ್ಯೋಗಿಗಳಿಗೆ ಪರದೇಶಗಳಿಂದ ಉದ್ಯೋಗಾವಕಾಶಗಳು ಬರಲಿವೆ.

ಕುಂಭ: ಮನೆಯಲ್ಲಿ ಸಣ್ಣ ಪುಟ್ಟ ವಿಚಾರಗಳಿಗೆ ಸಂಗಾತಿಯೊಂದಿಗೆ ಘರ್ಷಣೆಯಾಗುವ ಸಾಧ‍್ಯತೆ. ವಾಹನ, ಭೂಮಿ ಖರೀದಿ ವಿಚಾರದಲ್ಲಿ ಆಪ್ತರ ಸಹಾಯ ಸಿಗಲಿದೆ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.

ಮೀನ: ಅವಿವಾಹಿತರಿಗೆ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಆಹಾರೋದ್ಯಮಿಗಳಿಗೆ ಮುನ್ನಡೆಯ ಯೋಗ. ಮನೆಯಲ್ಲಿ ಶುಭ ಮಂಗಲ ಕಾರ್ಯ ನಿರ್ವಹಿಸಲು ಸಿದ್ಧತೆ ನಡೆಸಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ