ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 9 ಏಪ್ರಿಲ್ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಾಂಸಾರಿಕವಾಗಿ ನಿಮ್ಮ ಮಾತಿನಿಂದ ಘರ್ಷಣೆಗಳಾಗುವ ಸಾಧ‍್ಯತೆ. ಮಾತಿನ ಮೇಲೆ ನಿಗಾ ಇರಲಿ. ಹಣಕಾಸಿನ ವಿಚಾರದಲ್ಲಿ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಷಭ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಕೆಲವೊಂದು ಕೆಲಸಗಳು ಇನ್ನೇನು ಮುಗಿದೇ ಹೋಯ್ತು ಎನ್ನುವಾಗ ಅಡ್ಡಿ ಆತಂಕಗಳು ಎದುರಾದೀತು. ಕುಲದೇವರ ಪ್ರಾರ್ಥನೆ ಮಾಡಿ.

ಮಿಥುನ: ದಾನವಾಗಿ ಸಿಕ್ಕಿದ್ದು ವ್ಯರ್ಥವಾಗುವ ಸಾಧ‍್ಯತೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ. ಆರೋಗ್ಯದ ವಿಚಾರದಲ್ಲಿ ಉಪೇಕ್ಷೆ ಬೇಡ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ.

ಕರ್ಕಟಕ: ತಲೆತಲಾಂತರದಿಂದ ನಡೆದುಕೊಂಡ ಬಂದ ಕೆಲಸಗಳು ನಿಮ್ಮಿಂದಾಗಿ ತಪ್ಪಿ ಹೋದೀತು. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಇಷ್ಟ ಭೋಜನ ಮಾಡುವ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ನಿಮ್ಮ ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಮಕ್ಕಳಿಂದಾಗಿ ದಿನವಿಡೀ ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಮನೆಗೆ ಬಂಧು ಮಿತ್ರರ ಭೇಟಿ ಸಾಧ‍್ಯತೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಕನ್ಯಾ: ಮನಸ್ಸಿನಲ್ಲಿ ಅಂದುಕೊಂಡಿದ್ದು ಒಂದು ಆಗುವುದು ಇನ್ನೊಂದು ಎನ್ನುವ ಪರಿಸ್ಥಿತಿ ಎದುರಾದೀತು. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವ್ಯಾಪಾರಿಗಳಿಗೆ ಹಣಕಾಸಿನ ಹರಿವಿಗೆ ತೊಂದರೆಯಾಗದು.

ತುಲಾ: ನಿಮ್ಮಿಂದ ಹಿಂದೆ ಸಹಾಯ ಪಡೆದವರಿಂದ ಪ್ರತ್ಯುಪಕಾರ ಪಡೆಯಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹಾಯಾಸವಾದೀತು. ಕಟ್ಟಡ ಕಾಮಗಾರಿ ಕೆಲಸಗಳನ್ನು ಕೆಲವು ಸಮಯ ಮುಂದೂಡುವುದು ಉತ್ತಮ.

ವೃಶ್ಚಿಕ: ನಿಮ್ಮ ಮೂಲಕ ಇನ್ನೊಬ್ಬರಿಗೆ ಅನುಕೂಲವಾಗುವ ಕೆಲಸ ಮಾಡಲಿದ್ದೀರಿ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಪ್ರೇಮಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಕಿರು ಓಡಾಟ ನಡೆಸಬೇಕಾಗುತ್ತದೆ.

ಧನು: ವಾಹನ ಖರೀದಿಸುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ ಕಂಡುಬರಲಿದೆ. ವಿದ್ಯಾರ್ಥಿಗಳು ಬಿಡುವಿನ ವೇಳೆಯ ಸದುಪಯೋಗ ಪಡಿಸಿಕೊಳ್ಳುವರು. ಮಾತಿನ ಮೇಲೆ ನಿಗಾ ಇರಲಿ.

ಮಕರ: ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡಿದ್ದರೆ ಸವಾಲುಗಳು ಎದುರಾದೀತು. ಎಲ್ಲವನ್ನೂ ಎದುರಿಸಿಕೊಂಡು ಹೋಗುವ ತಾಳ್ಮೆ ಬೆಳೆಸಿಕೊಳ್ಳಬೇಕು. ಕೌಟುಂಬಿಕವಾಗಿ ಪರಸ್ಪರ ಸಹಕಾರ ಕಂಡುಬಂದೀತು.

ಕುಂಭ: ಕಾರ್ಯನಿಮಿತ್ತ ಪರವೂರಿಗೆ ಸಂಚರಿಸುವ ಅನಿವಾರ್ಯತೆ. ಹಿರಿಯರೊಂದಿಗೆ ಸಣ್ಣ ಪುಟ್ಟ ಸಂಘರ್ಷಗಳಾದೀತು. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಪುಣ್ಯ ಕ್ಷೇತ್ರಗಳ ಸಂದರ್ಶನ ನಡೆಸಲಿದ್ದೀರಿ.

ಮೀನ: ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಪ್ರೀತಿ ಪಾತ್ರರ ಕೆಲಸಗಳಲ್ಲಿ ಸಹಾಯ ಮಾಡಲಿದ್ದೀರಿ. ಮಕ್ಕಳಿಗೆ ಹೊಸ ವಸ್ತು ಖರೀದಿಸುವ ಸಂಭ್ರಮವಿರಲಿದೆ. ಅನಗತ್ಯ ಚಿಂತೆ ಬೇಡ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ