ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 14 ಏಪ್ರಿಲ್ 2023 (08:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮಲ್ಲಿರುವ ಒಳ್ಳೆಯತನವನ್ನು ದುರುಪಯೋಗಪಡಿಸಿಕೊಳ್ಳುವವಿರುತ್ತಾರೆ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ಸಂಗಾತಿಯೊಂದಿಗೆ ನೀವು ಹಂಚಿಕೊಳ್ಳಬೇಕಾದ ವಿಚಾರ ಹಂಚಿಕೊಳ್ಳಲು ಹಿಂಜರಿಯಲಿದ್ದೀರಿ.

ವೃಷಭ: ಸಮಯಕ್ಕೆ ಸರಿಯಾಗಿ ಕೆಲಸ ಮುಗಿಸಿದ ತೃಪ್ತಿ ನಿಮ್ಮದಾಗಲಿದೆ. ನೆರೆಹೊರೆಯವರ ಜೊತೆ ಸಂಬಂಧ ಸುಧಾರಣೆಯಾಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ತಾಳ್ಮೆಯಿರಲಿ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಯೋಗ್ಯತೆಗೆ ಮೀರಿ ಕೆಲಸಗಳು ಸಿಗಲಿವೆ. ಗುರುಹಿರಿಯರ ಸಲಹೆ ಪಡೆಯುವುದು ಉತ್ತಮ. ವ್ಯಾವಹಾರಿಕವಾಗಿ ನಿಮಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿವೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಹಿರಿಯರಿಗೆ ದೇವತಾ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಚಿಂತೆ ಬೇಡ.

ಸಿಂಹ: ಕಾರ್ಯರಂಗದಲ್ಲಿ ನೀವು ಅಂದುಕೊಂಡ ಸ್ಥಾನಕ್ಕೆ ಏರಲು ಅವಕಾಶ ಸಿಗುವುದು. ವಿದ್ಯಾರ್ಥಿಗಳಿಗೆ ಪರಿಶ್ರಮದಾಯಕ ದಿನವಾಗಿರಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ಕನ್ಯಾ: ಉದ್ಯೋಗ, ವ್ಯವಹಾರಗಳಲ್ಲಿ ಸಹೋದ್ಯೋಗಿಗಳಿಂದ ಪ್ರೋತ್ಸಾಹ ಕಂಡುಬರಲಿದೆ. ಸಂಗಾತಿಯ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ತುಲಾ: ಪ್ರತಿಷ್ಠೆ ಬದಿಗಿಟ್ಟು ಕೆಲಸ ಮಾಡಬೇಕಾಗುತ್ತದೆ. ಮನೆಯಲ್ಲಿ ಸಣ್ಣ ಪುಟ್ಟ ಭಿನ್ನಾಬಿಪ್ರಾಯಗಳು ಸಾಮಾನ್ಯ. ಮಾತಿನ ಮೇಲೆ ನಿಗಾ ಇರಲಿ. ಹೊಸ ವ್ಯಕ್ತಿಗಳನ್ನು ಪರಿಚಯ ಮಾಡಿಕೊಳ್ಳಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೃಶ್ಚಿಕ: ಕಾರ್ಯಕ್ಷೇತ್ರದಲ್ಲಿ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾಗುತ್ತಿರುವ ಸಂತೋಷ ನಿಮ್ಮದಾಗಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸಲಿದ್ದೀರಿ. ತಾಳ್ಮೆಯಿರಲಿ.

ಮಕರ: ಮಹಿಳೆಯರಿಗೆ ಅಡುಗೆ ಮನೆ ಕೆಲಸದಲ್ಲಿ ತೊಂದರೆಗಳು ಎದುರಾದೀತು. ಆಸ್ತಿ ವಿವಾದಗಳನ್ನು ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಸಿಕೊಳ್ಳಲಿದ್ದೀರಿ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ.

ಕುಂಭ: ಸರಕಾರೀ ನೌಕರರಿಗೆ ಸಮಯ ಮಿತಿಯೊಳಗೆ ಕೆಲಸ ಮುಗಿಸುವ ಒತ್ತಡ ಕಂಡುಬರಲಿದೆ. ನಿಮ್ಮ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ವಿಚಾರಗಳು ನಡೆದೀತು. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ.

ಮೀನ: ಕೊಟ್ಟ ಮಾತಿನಂತ ನಡೆದುಕೊಳ್ಳಲು ಪ್ರಯಾಸಪಡಬೇಕಾದೀತು. ಖರೀದಿ ವಿಚಾರದಲ್ಲಿ ಅಡೆತಡೆಗಳು ತೋರಿಬಂದೀತು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಸಾಂಸಾರಿಕ ಸುಖ ಮಧ‍್ಯಮವಾಗಿರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ