ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 15 ಏಪ್ರಿಲ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನೀವು ಬಯಸಿದ್ದು ಸಿಗುವವರೆಗೂ ಸತತ ಪ್ರಯತ್ನ ನಡೆಸಬೇಕಾಗುತ್ತದೆ. ಗುರು ಹಿರಿಯರ ಆಶೀರ್ವಾದ ಪಡೆಯಲಿದ್ದೀರಿ. ಹಣಕಾಸಿನ ಖರ್ಚು ವೆಚ್ಚದ ಮೇಲೆ ನಿಗಾ ಇರಲಿ. ದೇವತಾ ಪ್ರಾರ್ಥನೆ ಮಾಡಲಿದ್ದೀರಿ.

ವೃಷಭ: ಧಾರ್ಮಿಕ ಚಟುವಟಿಕೆಗಳ ನೇತೃತ್ವ ವಹಿಸಲಿದ್ದೀರಿ. ಕುಟುಂಬ ಸದಸ್ಯರೊಂದಿಗೆ ಸಂತೋಷದಿಂದ ಕಾಲ ಕಳೆಯುವ ಯೋಗ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನ ನಡೆಸಲಿದ್ದೀರಿ.

ಮಿಥುನ: ಗೃಹ, ವಾಹನಾದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಸಹಾಯ ಮಾಡಲು ಹೋಗಿ ತೊಂದರೆಗೆ ಸಿಲುಕಿಕೊಳ‍್ಳದಿರಿ. ಮಹಿಳೆಯರಿಗೆ ಮಂಗಲ ವಸ್ತ್ರ ಖರೀದಿ ಯೋಗ.

ಕರ್ಕಟಕ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ವ್ಯಾಪಾರಿಗಳಿಗೆ ಕೊಂಚ ಹಿನ್ನಡೆಯಾದೀತು. ತಾಳ್ಮೆಯಿರಲಿ.

ಸಿಂಹ: ಕಾರ್ಯರಂಗದಲ್ಲಿ ಎಷ್ಟೇ ಮುನ್ನಡೆಯಿದ್ದರೂ ನಿಮ್ಮ ಮಾತಿನಿಂದ ಇತರರಿಗೆ ಅಸಮಾಧಾನವುಂಟು ಮಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ಹಣಕಾಸಿನ ವಿಚಾರದಲ್ಲಿ ತೃಪ್ತಿದಾಯಕ ಬೆಳವಣಿಗೆ ಕಂಡುಬರಲಿದೆ. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಇಷ್ಟ ಮಿತ್ರರನ್ನು ಭೇಟಿಯಾಗುವ ಯೋಗ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ವಸ್ತು ಸ್ಥಿತಿ ಅರಿತು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಆಸ್ತಿ ವಿವಾದಗಳು ಬಗೆಹರಿಯಲಿವೆ. ಸರಕಾರಿ ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ಹಿರಿಯರಿಂದ ಉಡುಗೊರೆ ದೊರೆಯುವ ಸಾಧ‍್ಯತೆ. ಚಿಂತೆ ಬೇಡ.

ವೃಶ್ಚಿಕ: ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಸವಾಲುಗಳು ಎದುರಾದೀತು. ಕಟ್ಟಡ ನಿರ್ಮಾಣ ಕಾರ್ಯಗಳು ಮುಂದೂಡಿಕೆಯಾಗಲಿವೆ. ದೀರ್ಘಪ್ರಯಾಣದಿಂದ ದೇಹಾಯಾಸ ಸಂಭವ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಧನು: ಮಕ್ಕಳ ಜೀವನದಲ್ಲಿ ಅನಗತ್ಯವಾಗಿ ಮೂಗು ತೂರಿಸಲು ಹೋಗಬೇಡಿ. ಯಶಸ್ಸು ನಿಮ್ಮದಾಗಬೇಕಾದರೆ ಅಷ್ಟೇ ಪರಿಶ್ರಮವೂ ಬೇಕಾಗುತ್ತದೆ ಎಂಬುದನ್ನು ಮರೆಯಬೇಡಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಮಕರ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಡಿಮೆಯಾದೀತು. ಕುಟುಂಬ ಸದಸ್ಯರೊಂದಿಗೆ ಕಿರು ಪ್ರವಾಸಕ್ಕೆ ಯೋಜನೆ ರೂಪಿಸಲಿದ್ದೀರಿ. ಸಾಂಸಾರಿಕ ಸುಖ ವೃದ್ಧಿಯಾಗಲಿದೆ. ವಿದ್ಯಾರ್ಥಿಗಳಿಗೆ, ಅಧ್ಯಯನ ಪ್ರವೃತ್ತರಿಗೆ ಮುನ್ನಡೆ.

ಕುಂಭ: ಬಾಕಿ ಬರಬೇಕಾದ ಹಣ ಪಾವತಿಯಾಗಲಿದೆ. ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಂಡುಬಂದೀತು. ಗುರುಹಿರಿಯರಿಂದ ಪ್ರೋತ್ಸಾಹ ಕಂಡುಬರಲಿದೆ. ಆರೋಗ್ಯದಲ್ಲಿ ಚೇತರಿಕೆಯಿರುವುದು.

ಮೀನ: ಬೇರೆಯವರ ಇಷ್ಟಕ್ಕೆ ವಿರುದ್ಧವಾಗಿ ತೀರ್ಮಾನ ಕೈಗೊಳ್ಳುವುದು ಬೇಡ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಆಸ್ತಿ ವಿಚಾರದಲ್ಲಿ ಪ್ರಗತಿ ಕಂಡುಬರಲಿದೆ. ತಾಳ್ಮೆಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ