ಮೇಷ: ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾಗುವ ಯೋಗ. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳಾದೀತು. ಇಷ್ಟಭೋಜನ ಮಾಡುವ ಯೋಗ. ಆದರೆ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಸಂತೋಷದಾಯಕ ದಿನವಾಗಿರಲಿದೆ.
ವೃಷಭ: ಗುರುಹಿರಿಯರ ಪ್ರೋತ್ಸಾಹದಿಂದ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರುವುದು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಗೃಹಕೃತ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.
ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ತಾಳ್ಮೆಯಿರಲಿ.
ಕರ್ಕಟಕ: ವ್ಯಾವಹಾರಿಕವಾಗಿ ನಿಮ್ಮ ಏಳಿಗೆಗೆ ಕಾರಣರಾದವರಿಗೆ ಪ್ರತ್ಯುಪಕಾರ ಮಾಡುವ ಅವಕಾಶ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆಯ ಯೋಗ. ಕೌಟುಂಬಿಕವಾಗಿ ಸುಖ ಸಮೃದ್ಧಿ ಕಂಡುಬರಲಿದೆ.
ಸಿಂಹ: ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಉದ್ದಿಮೆದಾರರಿಗೆ ರಾಜಯೋಗ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಕಿರು ಸಂಚಾರ ಮಾಡಲಿದ್ದೀರಿ.
ಕನ್ಯಾ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕ ಫಲ ಸಿಗುವುದು. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ದಿನದಂತ್ಯಕ್ಕೆ ಸಂತೋಷದ ಸುದ್ದಿ.
ತುಲಾ: ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳುವುದರಿಂದ ನಿಮ್ಮ ಭವಿಷ್ಯಕ್ಕೆ ಒಳಿತಾಗಲಿದೆ. ಮಹಿಳೆಯರಿಗೆ ಆರೋಗ್ಯ ಸಮಸ್ಯೆ ಎದುರಾದೀತು. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.
ವೃಶ್ಚಿಕ: ಮಾತಿನ ಮೇಲೆ ನಿಗಾ ಇರಲಿ. ದೂರದ ವ್ಯವಹಾರಗಳಿಂದ ಲಾಭವಾಗಲಿದೆ. ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುವ ಯೋಗ. ಕಿರು ಓಡಾಟ ನಡೆಸಬೇಕಾಗುತ್ತದೆ.
ಧನು: ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಮಾತೃ ಸಮಾನರ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ. ಧೈರ್ಯ, ಉತ್ಸಾಹದಿಂದ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ.
ಮಕರ: ವಸ್ತು ಸ್ಥಿತಿ ಅರಿತು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿದೆ. ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಕೂಡಿಬರುವುದು. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗುವುದು.
ಕುಂಭ: ನಿಮಗೆ ಬರಬೇಕಾದ ಬಾಕಿ ಹಣ ಪಾವತಿಯಾಗಲಿದೆ. ಇಷ್ಟ ವ್ಯಕ್ತಿಗಳನ್ನು ಭೇಟಿಯಾದ ಖುಷಿ ನಿಮ್ಮದಾಗಲಿದೆ. ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ನಿಮ್ಮ ನಾಯಕತ್ವ ಗುಣಕ್ಕೆ ಪ್ರಶಂಸೆ ಸಿಗುವುದು.
ಮೀನ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ ಕಂಡುಬರಲಿದೆ. ಬಹುವಿಧದ ಚಟುವಟಿಕೆಗಳಿಂದ ಕೂಡಿದ ದಿನವಿದು. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.ದಂಪತಿಗಳಲ್ಲಿ ಅನುರಾಗ ವೃದ್ಧಿಯಾಗಲಿದೆ. ಚಿಂತೆ ಬೇಡ.