ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 18 ಏಪ್ರಿಲ್ 2023 (06:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕುಟುಂಬ ಸದಸ್ಯರೊಂದಿಗೆ ಸಂತೋಷದಿಂದ ಕಾಲ ಕಳೆಯಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಬಹಳ ದಿನಗಳ ನಂತರ ನಿಮ್ಮ ಇಷ್ಟದ ಖಾದ್ಯ ಸವಿಯುವ ಯೋಗ.

ವೃಷಭ: ಹಿರಿಯರಿಗೆ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸಿದ ತೃಪ್ತಿ. ನಿಮ್ಮ ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ್ಯತೆ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಬಹಳ ಓಡಾಟ ನಡೆಸಬೇಕಾದ ದಿನವಿದು. ಬಹುಜನರ ಸಂಪರ್ಕ ಮಾಡಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಕಟ್ಟುನಿಟ್ಟು ಅಗತ್ಯ. ನೆರೆಹೊರೆಯವರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ.

ಕರ್ಕಟಕ: ನಿಮ್ಮ ಮನಸ್ಸಿನಲ್ಲಿರುವ ಯೋಚನೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಿಂಹ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ನೆಂಟರಿಷ್ಟರನ್ನು ಭೇಟಿಯಾಗಲಿದ್ದೀರಿ. ಮಕ್ಕಳಿಗೆ ಅಚ್ಚರಿಯ ಉಡುಗೊರೆ ನೀಡಲಿದ್ದೀರಿ. ದಾಂಪತ್ಯದಲ್ಲಿ ಸುಖ, ಸಮೃದ್ಧಿಯಿರಲಿದೆ. ಚಿಂತೆ ಬೇಡ.

ಕನ್ಯಾ: ಬಹಳ ದಿನಗಳ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಹಳೆಯ ಮಿತ್ರರ ಭೇಟಿ ಯೋಗ. ಉದ್ಯೋಗದ ನಿಮಿತ್ತ ಪರವೂರಿಗೆ ಸಂಚರಿಸಲಿದ್ದೀರಿ.

ತುಲಾ: ಆತುರದ ನಿರ್ಧಾರದಿಂದ ಅನಾಹುತವಾದೀತು. ಸಂಗಾತಿಯ ಸಲಹೆ ಪಾಲಿಸುವುದು ಉತ್ತಮ. ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಮಾತಿನಲ್ಲೇ ಇತರರನ್ನು ಮೋಡಿ ಮಾಡಲಿದ್ದೀರಿ.

ವೃಶ್ಚಿಕ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಯೋಜನೆ ರೂಪಿಸಿದ್ದರೆ ಕೆಲವು ದಿನ ಮುಂದೂಡುವುದು ಉತ್ತಮ. ವ್ಯಾಪಾರೀ ವರ್ಗದವರಿಗೆ ಅತ್ತ ಲಾಭವೂ ಇಲ್ಲ, ಇತ್ತ ನಷ್ಟವೂ ಇಲ್ಲದ ಪರಿಸ್ಥಿತಿ. ಮಹಿಳೆಯರಿಗೆ ಆರೋಗ್ಯದ ಬಗ್ಗೆ ನಿಗಾ ಅಗತ್ಯ.

ಧನು: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಯಂತ್ರೋಪಕರಣಗಳಿಂದ ತೊಂದರೆ ಎದುರಾಗುವ ಸಾಧ‍್ಯತೆ. ಮಕ್ಕಳೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ದೇವಾಲಯ ಸಂದರ್ಶನ ಯೋಗವಿದೆ.

ಮಕರ: ನಾನಾ ಚಟುವಟಿಕೆಗಳಿಂದ ಕೂಡಿದ ದಿನ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ವ್ಯಾವಹಾರಿಕವಾಗಿ ಇದುವರೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಮನೆಯ ಆಗು ಹೋಗುಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರುವುದು. ತಾಳ್ಮೆಯಿರಲಿ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸ್ಥಾನ ಮಾನಕ್ಕಾಗಿ ಸಂಘರ್ಷ ನಡೆಸಬೇಕಾದೀತು. ಸ್ವಯಂ ವೃತ್ತಿಯವರಿಗೆ ಲಾಭಕರ ದಿನ. ಹೂಡಿಕೆ ವ್ಯವಹಾರಗಳಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ಕೃಷಿಕರಿಗೆ ಕೊಡು-ಕೊಳ್ಳುವ ವ್ಯವಹಾರದಿಂದ ಲಾಭ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ