ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 23 ಏಪ್ರಿಲ್ 2023 (06:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸತ್ಕರ್ಮದಲ್ಲಿ ಆಸಕ್ತಿ ಮೂಡಲಿದೆ. ಹಿರಿಯರ ಕೆಲಸಗಳಲ್ಲಿ ಸಹಾಯ ಮಾಡಲಿದ್ದೀರಿ. ಉದ್ಯೋಗ, ವ್ಯವಹಾರದಲ್ಲಿ ಗೌರವ ಹೆಚ್ಚಾಗಲಿದೆ. ಮೇಲಧಿಕಾರಿಗಳ ಪ್ರೀತಿ ಸಂಪಾದಿಸಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೃಷಭ: ಅನಗತ್ಯವಾಗಿ ಬೇರೆಯವರ ಜೀವನದಲ್ಲಿ ಮೂಗು ತೂರಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಅನ್ಯರಿಗೆ ಸಹಾಯ ಮಾಡುವುದರಿಂದ ಮನಸ್ಸಿಗೆ ತೃಪ್ತಿ ಸಿಗುವುದು. ವಿಶೇಷ ಅತಿಥಿಗಳು ಮನೆಗೆ ಭೇಟಿ ನೀಡಲಿದ್ದಾರೆ.

ಮಿಥುನ: ಯಾವುದೇ ಕೆಲಸಕ್ಕೆ ಮುನ್ನ ಕುಟುಂಬದವರ ಅಭಿಪ್ರಾಯ ತಿಳಿದು ಮುನ್ನಡೆದರೆ ಸೂಕ್ತ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ವ್ಯಾಪಾರೀ ವರ್ಗದವರಿಗೆ ಸಾಲಗಾರರ ಕಾಟದಿಂದ ಮುಕ್ತಿ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಕಷ್ಟದ ಸಮಯದಲ್ಲಿ ಸಹೋದ್ಯೋಗಿಗಳ ಸಹಾಯ ಪಡೆಯಲಿದ್ದೀರಿ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ಸಿಂಹ: ಉದ್ಯೋಗ ಸಂಬಂಧವಾಗಿ ಪರವೂರಿಗೆ ಸಂಚರಿಸುವ ಯೋಗ. ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ.

ಕನ್ಯಾ: ಮಕ್ಕಳ ಸಂತೋಷಕ್ಕಾಗಿ ಮನೋಲ್ಲಾಸ ನೀಡುವ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿದ್ದೀರಿ. ಕ್ರಿಯಾತ್ಮಕ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಿರಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ತುಲಾ: ಕೌಟುಂಬಿಕ ವಿಚಾರದಲ್ಲಿ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾದೀತು. ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಗುರುಹಿರಿಯರ ಅಭಿಪ್ರಾಯ ಪಡೆದುಕೊಳ್ಳಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾದೀತು.

ವೃಶ್ಚಿಕ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ನಿಮ್ಮ ಹಳೆಯ ಬಾಕಿಗಳು ತೀರಲಿವೆ. ವಿದ್ಯಾರ್ಥಿಗಳಿಗೆ ತಮ್ಮ ಜಾಣತನ ಪ್ರದರ್ಶಿಸುವ ಅವಕಾಶಗಳು ಸಿಗುವುದು. ತಾಳ್ಮೆಯಿರಲಿ.

ಧನು: ಆತ್ಮೀಯರ ಜೊತೆ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ವ್ಯವಹಾರದಲ್ಲಿ ಲಾಭ-ನಷ್ಟಗಳು ಸಾಮಾನ್ಯ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ತಾಳ್ಮೆಯಿರಲಿ.

ಮಕರ: ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ಕೊಡಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಕುಂಭ: ಎಷ್ಟೇ ನೋವಿದ್ದರೂ ಅದನ್ನು ಅದುಮಿಟ್ಟುಕೊಳ್ಳುವ ಅನಿವಾರ್ಯತೆ. ಸಂಗಾತಿಯ ಕಿರಿ ಕಿರಿ ಮನಸ್ಸಿಗೆ ಬೇಸರವುಂಟು ಮಾಡೀತು. ಮಕ್ಕಳಿಂದ ಸಂತೋಷ ಸಿಗುವುದು. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ.

ಮೀನ: ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಸಭೆ, ಸಮಾರಂಭಗಳಲ್ಲಿ ಭಾಗಿಯಾಗಲಿದ್ದೀರಿ. ಪಾಲು ಬಂಡವಾಳ ಹೂಡಿಕೆ ವ್ಯವಹಾರದಲ್ಲಿ ಲಾಭದ ನಿರೀಕ್ಷೆ. ದೇವತಾ ಪ್ರಾರ್ಥನೆ ಮಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ