ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 28 ಏಪ್ರಿಲ್ 2023 (06:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಯಾರದ್ದೋ ಮೇಲಿನ ಸಿಟ್ಟನ್ನು ಇನ್ಯಾರದ್ದೋ ಮೇಲೆ ತೀರಿಸುವ ಪ್ರಸಂಗ ಎದುರಾದೀತು. ಮಕ್ಕಳ ಬಗ್ಗೆ ವಿಶೇಷ ಗಮನ ಹರಿಸಬೇಕಾಗುತ್ತದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದೇಹಾರೋಗ್ಯದಲ್ಲಿ ಸುಧಾರಣೆ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರೀತಿಗೆ ಪಾತ್ರರಾಗಲಿದ್ದೀರಿ. ಸಾಂಸಾರಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಯಾವುದೇ ವಿಚಾರದಲ್ಲಿ ಆತುರದ ನಿರ್ಣಯಕ್ಕೆ ಬರಬೇಡಿ. ತಾಳ್ಮೆಯಿರಲಿ.

ಮಿಥುನ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಹಿರಿಯರಿಗೆ ಸತ್ಕಾರ್ಯಗಳಲ್ಲಿ ನೆಮ್ಮದಿ ಸಿಗಲಿದೆ. ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ. ಸರಕಾರಿ ಕೆಲಸಗಳಿಗೆ ಓಡಾಟ ನಡೆಸಬೇಕಾದೀತು.

ಕರ್ಕಟಕ: ಎಷ್ಟೇ ಪ್ರಯತ್ನಪಟ್ಟರೂ ಅದಕ್ಕೆ ತಕ್ಕ ಫಲ ಸಿಗುತ್ತಿಲ್ಲ ಎಂಬ ಬೇಸರ ಕಾಡೀತು. ಕೌಟುಂಬಿಕವಾಗಿ ಸಂಗಾತಿಯ ಸಹಕಾರ ಸಿಗುವುದು. ಮಕ್ಕಳ ನಿಮಿತ್ತ ಖರ್ಚು ವೆಚ್ಚ ಸಾಧ‍್ಯತೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಸಿಂಹ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಚೇತರಿಕೆ ಕಂಡುಬರಲಿದೆ. ವ್ಯಾಪಾರೀ ವರ್ಗದವರಿಗೆ ಮುನ್ನಡೆ. ರಾಜಕೀಯ ರಂಗದಲ್ಲಿರುವವರಿಗೆ ಹೊಸ ಎದುರಾಳಿಗಳು ಕಂಡಬಂದಾರು.

ಕನ್ಯಾ: ಉದ್ಯೋಗ, ವ್ಯವಹಾರದಲ್ಲಿ ಅಧಿಕ ಪರಿಶ್ರಮ ಪಡಬೇಕಾಗುತ್ತದೆ. ಮೇಲಧಿಕಾರಿಗಳಿಂದ ಕಿರಿ ಕಿರಿ ಇದ್ದರೂ ನಿಮ್ಮ ನಿಷ್ಠೆಗೆ ತಕ್ಕ ಫಲ ಸಿಗಲಿದೆ. ಕೌಟುಂಬಿಕವಾಗಿ ನೆಮ್ಮದಿ ಸಿಗಲಿದೆ. ಬಂಧು ಮಿತ್ರರ ಭೇಟಿಯಾಗಲಿದ್ದೀರಿ.

ತುಲಾ: ನಿಮ್ಮ ವಾಕ್ಚತುರತೆ ಇತರರ ಮೆಚ್ಚುಗೆಗೆ ಪಾತ್ರವಾಗಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಅಪರಿಚಿತರಿಂದ ವಂಚನೆಗೊಳಗಾಗುವ ಭೀತಿ. ಎಚ್ಚರಿಕೆಯಿರಲಿ.

ವೃಶ್ಚಿಕ: ನಿಮ್ಮ ಯೋಜನೆಗಳನ್ನು ಪುನರ್ ವಿಮರ್ಶೆ ಮಾಡಲಿದ್ದೀರಿ. ಕಾರ್ಯನಿಮಿತ್ತ ದೂರ ಪ್ರಯಾಣ ಮಾಡಬೇಕಾದೀತು. ಸಂಗಾತಿಯ ಸಮಯೋಚಿತ ಸಲಹೆಗಳು ಉಪಯೋಗಕ್ಕೆ ಬರಲಿವೆ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಧನು: ಬೇರೆಯವರ ಮಾತು ಕೇಳಿ ಆಪ್ತರ ಮನಸ್ಸು ನೋಯಿಸುವ ಕೆಲಸ ಮಾಡಬೇಡಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ಮಕ್ಕಳಿಗೆ ಅಭ್ಯಾಸದಲ್ಲಿ ಆಸಕ್ತಿ ಹೆಚ್ಚಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಕೃಷಿಕರಿಗೆ ಕೆಲಸ ಕಾರ್ಯಗಳಿಗೆ ಅಡಚಣೆಗಳು ಬಂದೀತು. ವ್ಯಾಪಾರೀ ವರ್ಗದವರಿಗೆ ಲಾಭ-ನಷ್ಟ ಸಮನಾಗಿರುವುದು. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ಕಿರು ಸಂಚಾರ ಮಾಡಲಿದ್ದೀರಿ.

ಕುಂಭ: ಹೊಸ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದರೆ ಉತ್ತಮ ಫಲ ಕಂಡುಬರಲಿದೆ. ನಿರ್ಧಾರ ತೆಗೆದುಕೊಳ್ಳುವ ವಿಚಾರದಲ್ಲಿ ಆಪ್ತರ ಸಲಹೆ ಪಡೆಯಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಗಮನವಿರಲಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮೀನ: ಸರಕಾರೀ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬಂದೀತು. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಮನರಂಜನಾ ವೃತ್ತಿಯಲ್ಲಿರುವವರಿಗೆ ಮುನ್ನಡೆ. ನಿರೀಕ್ಷಿತ ಧನಾರ್ಜನೆಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ