ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 5 ಮೇ 2023 (06:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉತ್ತಮ ಧನಾರ್ಜನೆಗೆ ನಾನಾ ಅವಕಾಶಗಳು ಕಂಡುಬರಲಿದೆ. ಆಪ್ತರೊಂದಿಗೆ ಮನಸ್ಸಿನ ಮಾತುಗಳನ್ನು ಹಂಚಿಕೊಳ್ಳಲಿದ್ದೀರಿ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ಅನಗತ್ಯ ಚಿಂತೆ ಬೇಡ.

ವೃಷಭ: ವೃತ್ತಿಧರ್ಮ ಪಾಲಿಸುವುದಕ್ಕಾಗಿ ಕೆಲವೊಂದು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲಿದ್ದೀರಿ. ಕೃಷಿಕರಿಗೆ ಹೊಸ ದಾರಿಗಳು ಗೋಚರವಾದೀತು.

ಮಿಥುನ: ರಾಜಕೀಯ ರಂಗದಲ್ಲಿರುವವರಿಗೆ ಬಿಡುವಿಲ್ಲದ ಕೆಲಸ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಉತ್ತಮ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ದೇಹಾರೋಗ್ಯದಲ್ಲಿ ಸುಧಾರಣೆಯಿರಲಿದೆ.

ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಏಳಿಗೆಗೆ ಕೆಲವೊಂದು ಅಡೆತಡೆಗಳು ಬಂದೀತು. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ತಾಳ್ಮೆ ಬೆಳೆಸಿಕೊಳ್ಳಬೇಕು. ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ. ಮಾನಸಿಕವಾಗಿ ಸಂತೋಷದಾಯಕ ದಿನವಾಗಿದ್ದರೂ ದೈಹಿಕ ಆರೋಗ್ಯ ಸಮಸ್ಯೆಗಳು ಕಾಡೀತು. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಯೋಜನೆಗಳು ಹೊಳೆಯಲಿವೆ.

ಕನ್ಯಾ: ನಿಮ್ಮ ದೈನಂದಿನ ಚಟುವಟಿಕೆಗಳಿಗೆ ಅಡ್ಡಿ ಆತಂಕಗಳು ಬಂದೀತು. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ತುಲಾ: ಕಾರ್ಯರಂಗದಲ್ಲಿ ಹಿತ ಶತ್ರುಗಳ ಕಾಟ ಕಂಡುಬಂದೀತು. ಕುಲದೇವರ ಪ್ರಾರ್ಥನೆಯೊಂದಿಗೆ ಇಂದಿನ ದಿನದಾರಂಭ ಮಾಡಿ. ಮನೆಯಲ್ಲಿ ಸಣ್ಣ ಪುಟ್ಟ ಬದಲಾವಣೆಯಾದೀತು. ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ.

ವೃಶ್ಚಿಕ: ಅಧಿಕ ಕಾರ್ಯದೊತ್ತಡದಿಂದಾಗಿ ದೇಹಾಯಾಸವಾಗುವ ಸಾಧ‍್ಯತೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಹೊಸ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದರೆ ಮುನ್ನಡೆ ಕಂಡುಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಧನು: ಪಾಲುದಾರಿಕಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದವರಿಗೆ ನಿವ್ವಳ ಲಾಭ ಸಿಗುವುದು. ಉದ್ಯೋಗ, ವ್ಯವಹಾರದಲ್ಲಿ ಗೌರವ ಪ್ರಾಪ್ತಿಯಾಗಲಿದೆ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಮಕ್ಕಳಿಂದ ಸಂತೋಷ ಸಿಗುವುದು.

ಮಕರ: ನಿಮ್ಮ ಇಷ್ಟದ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ದೂರದ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಪರವೂರಿಗೆ ಸಂಚರಿಸುವ ಸಾಧ‍್ಯತೆ.

ಕುಂಭ: ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಸಂದರ್ಭಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುವುದರಿಂದ ಲಾಭ ಕಂಡುಕೊಳ್ಳಲಿದ್ದೀರಿ. ಕೃಷಿಗೆ ಸಂಬಂಧಿತ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದವರಿಗೆ ಲಾಭದಾಯಕ ದಿನ.

ಮೀನ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ ಕಂಡುಬರಲಿದೆ. ದಾಂಪತ್ಯದಲ್ಲಿ ನೆಮ್ಮದಿ ಕಂಡುಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗುವುದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ