ಮೇಷ: ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕಾರ್ಯದೊತ್ತಡ ಕಂಡುಬರಲಿದೆ. ಅವಶ್ಯಕತೆಗಳು ಹೆಚ್ಚಾಗಲಿದ್ದು, ಖರ್ಚು ವೆಚ್ಚ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.
ವೃಷಭ: ಸಾಂಸಾರಿಕವಾಗಿ ಸುಖ, ಸಮೃದ್ಧಿಯಿರಲಿದೆ. ನಿಮ್ಮ ಕೆಲಸಗಳಿಗೆ ಪರರಿಗೆ ಆಶ್ರಯಿಸುವ ಸ್ಥಿತಿ ಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಆಹಾರೋದ್ಯಮಿಗಳಿಗೆ ಮುನ್ನಡೆಯ ಯೋಗ. ದಿನದಂತ್ಯಕ್ಕೆ ನೆಮ್ಮದಿ.
ಮಿಥುನ: ಅಧಿಕ ಧನ ಸಂಚಯವಾಗಲಿದ್ದು, ನಿಮ್ಮ ಮೇಲೆ ಹೆಚ್ಚಿನ ಜವಾಬ್ಧಾರಿ ಇರಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಗುರುಹಿರಿಯರ ಬೆಂಬಲವಿರಲಿದೆ. ಕಿರು ಸಂಚಾರ ಮಾಡಲಿದ್ದೀರಿ.
ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ಹಣಕಾಸಿನ ಖರ್ಚು ವೆಚ್ಚಗಳು ಕಂಡುಬರಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ.
ಸಿಂಹ: ದೇವತಾ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ದಾಂಪತ್ಯ ಸುಖಕ್ಕೆ ಕೊರತೆಯಾಗದು. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ.
ಕನ್ಯಾ: ವಿದ್ಯಾರ್ಥಿಗಳಿಗೆ, ಅಧ್ಯಯನಪ್ರವೃತ್ತರಿಗೆ ಹೊಸ ಅವಕಾಶಗಳು ಕಂಡುಬರಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗುವುದು. ಇಷ್ಟಭೋಜನ ಮಾಡಲಿದ್ದೀರಿ. ಮಕ್ಕಳಿಂದ ಸಂತೋಷ ಸಿಗಲಿದೆ.
ತುಲಾ: ಭೂಮಿ, ವಾಹನಾದಿ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಇಷ್ಟ ವ್ಯಕ್ತಿಗಳೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ.
ವೃಶ್ಚಿಕ: ಪ್ರಯಾಣದ ವೇಳೆ ಅಡೆತಡೆಗಳು, ಅಡ್ಡಿ ಆತಂಕಗಳು ಬರಲಿವೆ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನ ನಡೆಸಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಬೇರೆಯವರ ಹಸ್ತಕ್ಷೇಪಕ್ಕೆ ಅವಕಾಶ ಕೊಡಬೇಡಿ.
ಧನು: ಮನೆಯಲ್ಲಿ ಸಣ್ಣ ಪುಟ್ಟ ಕೆಲಸಗಳಿಗೂ ಇನ್ನೊಬ್ಬರನ್ನು ಆಶ್ರಯಿಸಬೇಕಾದ ಪರಿಸ್ಥಿತಿ. ಮಾತಿನ ಮೇಲೆ ನಿಗಾ ಇರಲಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.
ಮಕರ: ಕಾರ್ಯರಂಗದಲ್ಲಿ ಹೊಸ ಬದಲಾವಣೆಗೆ ಸಿದ್ಧರಾಗಬೇಕಾಗುತ್ತದೆ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ರಾಜಕೀಯ ರಂಗದಲ್ಲಿರುವವರಿಗೆ ಉನ್ನತಿಯ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಕುಂಭ: ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಇಬ್ಬರ ವಾಜ್ಯಕ್ಕೆ ಮಧ‍್ಯಸ್ಥಿಕೆ ವಹಿಸುವ ಜವಾಬ್ಧಾರಿ ನಿಮ್ಮದಾಗಲಿದೆ. ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ತಾಳ್ಮೆಯಿರಲಿ.
ಮೀನ: ವಿವಾಹಾದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ಸಾಂಸಾರಿಕವಾಗಿ ಮುಖ್ಯವಾದ ತೀರ್ಮಾನ ಕೈಗೊಳ್ಳಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಕಂಡುಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.