ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 19 ಮೇ 2023 (06:50 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಮಕ್ಕಳ ವಿಚಾರದಲ್ಲಿ ಉಪೇಕ್ಷೆ ಬೇಡ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದಲ್ಲಿ ಆಸಕ್ತಿ.

ವೃಷಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಕಂಡುಬರಲಿದೆ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಕೆಲವು ದಿನ ಕಾಯುವುದು ಉತ್ತಮ. ಕಿರು ಸಂಚಾರ ಮಾಡಬೇಕಾಗುತ್ತದೆ.

ಮಿಥುನ: ನಿಮ್ಮ ಹಿಂದಿನ ತಪ್ಪುಗಳು ಮತ್ತೆ ಪುನರಾವರ್ತನೆಯಾದೀತು. ಹಿರಿಯರ ಸಲಹೆ ಪಾಲಿಸುವುದು ಉತ್ತಮ. ಕೃಷಿಕರಿಗೆ ಬೆಳೆ ನಷ್ಟ ಭೀತಿ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಕಂಡುಬರಲಿದೆ.

ಕರ್ಕಟಕ: ಕಾರ್ಯರಂಗದಲ್ಲಿ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗುವುದು. ಕೋರ್ಟು ಕಚೇರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಭಾಗ್ಯ ಕೂಡಿಬರುವುದು.

ಸಿಂಹ: ಮನೆಯ ಯಾವುದೇ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಧಾರ ತೆಗೆದುಕೊಳ್ಳುವಾಗ ಇತರ ಸದಸ್ಯರ ಅಭಿಪ್ರಾಯಕ್ಕೆ ಬೆಲೆ ಕೊಡಬೇಕಾಗುತ್ತದೆ. ಪಾಲುದಾರಿಕಾ ವ್ಯವಹಾರದಲ್ಲಿ ಲಾಭ ಕಂಡುಬರುವುದು. ತಾಳ್ಮೆಯಿರಲಿ.

ಕನ್ಯಾ: ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಅನಿವಾರ್ಯ ಕಾರಣಗಳಿಗೆ ಪರವೂರಿಗೆ ಸಂಚರಿಸಬೇಕಾಗುತ್ತದೆ.

ತುಲಾ: ಅನ್ಯರ ಕೆಲಸಗಳಿಗೆ ಸಹಾಯ ಮಾಡಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರಲಿದೆ. ಸನ್ಮಿತ್ರರ ಸಹಕಾರದಿಂದ ಕೆಲಸ ಕಾರ್ಯಗಳು ಸುಗಮವಾಗಿ ನೆರವೇರಲಿದೆ.

ವೃಶ್ಚಿಕ: ಪಾಲುದಾರಿಕಾ ಕ್ಷೇತ್ರದಲ್ಲಿ ಭಿನ್ನಾಬಿಪ್ರಾಯಗಳು ಬಂದೀತು. ಸಮಚಿತ್ತದಿಂದ ನಿಭಾಯಿಸಿಕೊಂಡು ಹೋಗಬೇಕಾಗುತ್ತದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ದಿನದಂತ್ಯಕ್ಕೆ ನೆಮ್ಮದಿ.

ಧನು: ಮನೆಯ ಆಗು ಹೋಗುಗಳ ವಿಚಾರದಲ್ಲಿ ತೀರ್ಮಾನ ತೆಗೆದುಕೊಳ್ಳುವಾಗ ಸಂಗಾತಿಯೊಂದಿಗೆ ಭಿನ್ನಾಬಿಪ್ರಾಯಗಳಾದೀತು. ಮಾತಿನ ಮೇಲೆ ನಿಗಾ ಇರಲಿ. ವಿದ್ಯಾರ್ಥಿಗಳಿಗೆ ಮುನ್ನಡೆ.

ಮಕರ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಕೌಟುಂಬಿಕವಾಗಿ ನಿಮ್ಮ ಅಭಿಪ್ರಾಯಗಳಿಗೆ ಬೆಲೆ ಸಿಗದೇ ಬೇಸರವಾದೀತು. ಮಕ್ಕಳ ಸಂತೋಷದಲ್ಲಿ ಭಾಗಿಯಾಗಲಿದ್ದೀರಿ. ಇಷ್ಟ ಭೋಜನ ಮಾಡುವ ಯೋಗವಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮೀನ: ಸರಕಾರೀ ಕೆಲಸಗಳು ನಿಮಗೆ ಅನುಕೂಲಕರವಾಗಿಯೇ ನಡೆಯುವುದು. ಕೋರ್ಟಿನಲ್ಲಿರುವ ವ್ಯಾಜ್ಯಗಳ ತೀರ್ಪು ಬರಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗುವುದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ