ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 22 ಮೇ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸರಕಾರೀ ಕೆಲಸಗಳಲ್ಲಿ ಸಫಲತೆ ಕಂಡುಬರಲಿದೆ. ಇಷ್ಟ ಮಿತ್ರರನ್ನು ಭೇಟಿಯಾಗುವ ಯೋಗ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು ಕಂಡುಬರಲಿದೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು.

ವೃಷಭ: ಅವಿವಾಹಿತರಿಗೆ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ವ್ಯಾಪಾರೀ ವರ್ಗದವರಿಗೆ ಹಿತ ಶತ್ರಗಳಿಂದ ಕಿರಿ ಕಿರಿ ಕಂಡುಬಂದೀತು.

ಮಿಥುನ: ನಿಮ್ಮ ಕೆಲಸ ಕಾರ್ಯಗಳಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಕಂಡುಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರವಿರಲಿ.

ಕರ್ಕಟಕ: ಗೃಹ, ವಾಹನಾದಿ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಸನ್ಮಿತ್ರರ ಸಹಾಯ ಒದಗಿಬರುವುದು. ಕಾರ್ಯನಿಮಿತ್ತ ಸಂಚಾರ ಮಾಡಬೇಕಾದೀತು.

ಸಿಂಹ: ನಿಮ್ಮ ಮನಸ್ಸಿನ ಮಾತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಉದ್ದಿಮೆದಾರರಿಗೆ ಮುನ್ನಡೆ ಯೋಗ. ಹಣಕಾಸಿನ ಹರಿವಿಗೆ ತೊಂದರೆಯಾಗದು.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಕಂಡುಬರಲಿದೆ. ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ತಿಳಿದು ಮುನ್ನಡೆಯಿರಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಆಪ್ತರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲು ಅವಕಾಶ ಸಿಗಲಿದೆ. ಕೌಟುಂಬಿಕವಾಗಿ ಸುಖ, ಸಮೃದ್ಧಿಯಿರುವುದು. ಮಕ್ಕಳ ಸಂತೋಷದಲ್ಲಿ ಭಾಗಿಯಾಗಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಮುನ್ನಡೆ ಕಂಡುಬಂದೀತು. ಹಿರಿಯರ ಮಧ‍್ಯಸ್ಥಿಕೆಯಿಂದ ಸಮಸ್ಯೆಗಳು ಬಗೆಹರಿಯಲಿವೆ. ತಾಂತ್ರಿಕ ವೃತ್ತಿಯವರಿಗೆ ಕಾರ್ಯದೊತ್ತಡ ಕಂಡುಬಂದೀತು. ಸ್ವಯಂ ವೃತ್ತಿಯವರಿಗೆ ಲಾಭವಾಗಲಿದೆ.

ಧನು: ಕೌಟುಂಬಿಕವಾಗಿ ವಿಚಾರವಾಗಿ ನಿರ್ಧಾರ ತೆಗೆದುಕೊಳ್ಳುವಾಗ ಸಂಗಾತಿಯೊಂದಿಗೆ ಚರ್ಚಿಸಿ ಮುನ್ನಡೆಯಿರಿ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಲಿದ್ದೀರಿ. ಹಿರಿಯರಿಗೆ ತೀರ್ಥ ಯಾತ್ರೆಗೆ ಅವಕಾಶ ಕಂಡುಬರಲಿದೆ.

ಮಕರ: ಮಹಿಳೆಯರಿಗೆ ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಅಧಿಕ ಧನ ಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗಲಿದೆ.

ಕುಂಭ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಪ್ರೀತಿ ಪಾತ್ರರಿಂದ ಉಡುಗೊರೆ ಸ್ವೀಕರಿಸಲಿದ್ದೀರಿ. ನೀವು ಮಾಡುವ ಕೆಲಸಗಳಿಗೆ ಕುಟುಂಬ ಸದಸ್ಯರ ಬೆಂಬಲ ಸಿಗುವುದು. ಕಿರು ಸಂಚಾರ ಮಾಡಲಿದ್ದೀರಿ.

ಮೀನ: ಪಾಲುದಾರಿಕಾ ವ್ಯವಹಾರದಲ್ಲಿ ಪರಸ್ಪರ ಸಹಕಾರ ಅಗತ್ಯ. ದೀರ್ಘಪ್ರಯಾಣದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗುವುದು. ತಾಳ್ಮೆಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ