ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 4 ಜೂನ್ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬೇರೆಯವರು ನಿಮ್ಮ ಬಗ್ಗೆ ಹೇಳುವ ಅಭಿಪ್ರಾಯಗಳಿಗೆ ಅತಿಯಾಗಿ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕೆಲವು ತೀರ್ಮಾನ ಕೈಗೊಳ್ಳಲಿದ್ದೀರಿ.

ವೃಷಭ: ಹೊಸದಾಗಿ ಆರಂಭಿಸಿದ್ದ ಉದ್ದಿಮೆಗಳು ಕೈ ಹಿಡಿಯಲಿವೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಇಷ್ಟಮಿತ್ರರೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಹಳೆಯ ಬಾಕಿ ತೀರಿಸಲು ಮುಂದಾಗಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳು ಕಂಡುಬರಲಿದೆ. ಇಷ್ಟಮಿತ್ರರನ್ನು ಭೇಟಿಯಾಗಲಿದ್ದೀರಿ.

ಕರ್ಕಟಕ: ಸಾಂಸಾರಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಮನೆಗೆ ನೆಂಟರಿಷ್ಟರ ಆಗಮನ ಸಾಧ‍್ಯತೆ. ವಿದ್ಯಾರ್ಥಿಗಳು ಓದಿನ ಕಡೆಗೆ ಗಮನ ಕೇಂದ್ರೀಕರಿಸಬೇಕಾಗುತ್ತದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆ.

ಸಿಂಹ: ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗಲಿದೆ. ಇಷ್ಟ ಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಉದ್ಯೋಗ ಕ್ಷೇತ್ರದ ಬದಲಾವಣೆಗೆ ಪ್ರಯತ್ನ ನಡೆಸಲಿದ್ದೀರಿ. ವಾಹನ ಖರೀದಿ ಯೋಗ ಸದ್ಯದಲ್ಲೇ ನನಸಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ತುಲಾ: ಸನ್ಮಿತ್ರರ ಸಹವಾಸದಿಂದ ನಿಮಗೆ ಒಳಿತೇ ಆಗಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ವಿಶೇಷ ವ್ಯಕ್ತಿಗಳನ್ನು ಭೇಟಿಯಾಗಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ.

ವೃಶ್ಚಿಕ: ಸರಕಾರೀ ವೃತ್ತಿಯಲ್ಲಿರುವವರಿಗೆ ಬಿಡುವಿನ ದಿನ ಖುಷಿ ಸಿಗುವುದು. ಸ್ವಯಂ ವೃತ್ತಿಯವರಿಗೆ ಉನ್ನತಿಯ ಯೋಗ. ಹಿರಿಯರಿಗೆ ದೇವತಾ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ ನಿಮ್ಮದಾಗುವುದು.

ಧನು: ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ಸಂಗಾತಿಯೊಂದಿಗೆ ಪರಾಮರ್ಸಿಸಿದರೆ ಉತ್ತಮ. ಪಾಲುದಾರಿಕಾ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಮುನ್ನಡೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.

ಮಕರ: ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಹಣಕಾಸಿನ ದುಂದು ವೆಚ್ಚಗಳಿಗೆ ಕಡಿವಾಣವಿರಲಿ. ಸಾಂಸಾರಿಕವಾಗಿ ಸುಂದರ ಕ್ಷಣ ಕಳೆಯುವ ಯೋಗ. ಆರೋಗ್ಯದಲ್ಲಿ ಸುಧಾರಣೆ.

ಕುಂಭ: ಭವಿಷ್ಯದ ಬಗ್ಗೆ ಕೆಲವು ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಪ್ರೀತಿ ಪಾತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು.

ಮೀನ: ಮನಸ್ಸಿನಲ್ಲಿರುವ ಮಾತುಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಸಂಗಾತಿಯ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ