ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 5 ಜೂನ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅಂದುಕೊಂಡ ಕೆಲಸಗಳು ಸುಗಮವಾಗಿ ನಡೆಯಲಿವೆ. ಬರಬೇಕಾದ ಬಾಕಿ ಹಣ ಸಂದಾಯವಾಗಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಇಷ್ಟಮಿತ್ರರನ್ನು ಬಹಳ ದಿನಗಳ ನಂತರ ಭೇಟಿಯಾಗುವ ಯೋಗ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ವ್ಯವಹಾರಗಳಿಗೆ ಇತರರಿಂದ ತೊಂದರೆಗಳು ಎದುರಾದೀತು. ತಾಳ್ಮೆ, ಸಂಯಮದಿಂದ ವ್ಯವಹರಿಸಬೇಕಾಗುತ್ತದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ.

ಮಿಥುನ: ನಿಮ್ಮ ಹಳೆಯ ಮಿತ್ರರಿಂದ ಸಹಾಯಹಸ್ತ ಒದಗಿಬರಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ಮಂಗಲ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ.

ಕರ್ಕಟಕ: ಬಂಧು ಮಿತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗುವುದು. ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ.

ಸಿಂಹ: ಸನ್ಮಿತ್ರರ ಸಹಕಾರದಿಂದ ನಿಮ್ಮ ಕೆಲಸ ಕಾರ್ಯಗಳು ಸುಗಮವಾಗಿ ನೆರವೇರಲಿದೆ. ನಾಲ್ಕು ಜನರ ಮಧ್ಯೆ ಎದ್ದು ಕಾಣುವಂತಹ ಕೆಲಸ ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಕಂಡುಬರಲಿದೆ.

ಕನ್ಯಾ: ಗೃಹ, ವಾಹನಾದಿ ಖರೀದಿ ವಿಚಾರದಲ್ಲಿ ಆಸಕ್ತಿ ಕಂಡುಬರುವುದು. ಪಾಲು ಬಂಡವಾಳ ಹೂಡಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಸಂಗಾತಿಯ ಸಲಹೆ ಪಡೆಯುವುದು ಉತ್ತಮ. ಮಕ್ಕಳಿಂದ ಸಂತೋಷ ಸಿಗಲಿದೆ.

ತುಲಾ: ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಆಪ್ತರೊಂದಿಗೆ ಕಾಲ ಕಳೆಯುವ ಅವಕಾಶ ದೊರೆಯುವುದು. ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೃಶ್ಚಿಕ: ನಿಮಗೆ ಅನುಕೂಲಕರವಾಗಿಯೇ ಕೋರ್ಟು ತೀರ್ಪುಗಳು ಬರಲಿದ್ದು, ಮನಸ್ಸಿಗೆ ನೆಮ್ಮದಿಯಾಗಲಿದೆ. ಕೆಳ ಹಂತದ ನೌಕರರಿಗೆ ಉದ್ಯೋಗ ಬದಲಾವಣೆಗೆ ಅವಕಾಶ ಸಿಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಧನು: ಮನೆ, ವಾಹನ ರಿಪೇರಿ ಇತ್ಯಾದಿ ಕೆಲಸಗಳಿಗೆ ಖರ್ಚು ವೆಚ್ಚಗಳು ಕಂಡುಬಂದೀತು. ಸಾಕು ಪ್ರಾಣಿಗಳಿಂದ ತೊಂದರೆ ಎದುರಾಗುವ ಸಾಧ‍್ಯತೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಕರ: ವಾಸ್ತವ ಅರಿತು ತೀರ್ಮಾನ ತೆಗೆದುಕೊಳ್ಳುವುದು ಉತ್ತಮ. ಹಿರಿಯರ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಹಿಂದೆ ಮಾಡಿದ್ದ ಒಳ್ಳೆಯ ಕೆಲಸಗಳಿಗೆ ತಕ್ಕ ಪ್ರತಿಫಲ ಪಡೆಯಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಕುಂಭ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಮೆಚ್ಚುಗೆ ವ್ಯಕ್ತವಾಗಲಿದೆ. ಸಾಮಾಜಿಕ ಕಾರ್ಯಗಳಿಂದ ನೆಮ್ಮದಿ ಕಂಡುಕೊಳ್ಳುವಿರಿ. ಆರೋಗ್ಯದಲ್ಲಿ ಸುಧಾರಣೆ.

ಮೀನ: ಕಾರ್ಯರಂಗದಲ್ಲಿ ಹೊಸ ಚಿಂತನೆ, ಯೋಜನೆಗಳಿಗೆ ಅವಕಾಶ ಮಾಡಿಕೊಡಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆ ಕಂಡುಬಂದೀತು. ಮಾತಿನ ಮೇಲೆ ನಿಗಾ ಇರಲಿ. ಕುಲದೇವರ ಪ್ರಾರ್ಥನೆ ಮಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ