ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 6 ಜೂನ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಬಡ್ಡಿ ವ್ಯವಹಾರ ಮಾಡುವವರು ಎಚ್ಚರಿಕೆಯಿಂದಿರುವುದು ಮುಖ್ಯ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಆರೋಗ್ಯದಲ್ಲಿ ಚೇತರಿಕೆಯಿರಲಿದೆ.

ವೃಷಭ: ಕೆಲವು ಮಹತ್ವದ ತೀರ್ಮಾನ ಕೈಗೊಳ್ಳುವ ಸಮಯವಿದು. ನೆರೆಹೊರೆಯವರ ಸಹಾಯ ಪಡೆಯಲಿದ್ದೀರಿ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಕೊಡು-ಕೊಳ್ಳುವ ವ್ಯವಹಾರದಲ್ಲಿ ಲಾಭ.

ಮಿಥುನ: ಹೊಸದಾಗಿ ಆರಂಭಿಸಿದ್ದ ಕೆಲಸಗಳಿಗೆ ಅಡೆತಡೆಗಳು ಬಂದೀತು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಮೆಚ್ಚುಗೆ ಸಿಗುವುದು.

ಕರ್ಕಟಕ: ನಿಮ್ಮನ್ನು ಹೊಗಳಿ ಹೊನ್ನ ಶೂಲಕ್ಕೇರಿಸುವವರ ಬಗ್ಗೆ ಎಚ್ಚರಿಕೆಯಿಂದಿರಿ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಕಾರ್ಯರಂಗದಲ್ಲಿ ಬೇಡದೇ ಇದ್ದರೂ ಕೆಲವೊಂದು ವ್ಯಕ್ತಿಗಳನ್ನು ಎದುರಿಸಬೇಕಾಗುತ್ತದೆ. ತಾಳ್ಮೆ, ಸಂಯಮ ಅಗತ್ಯ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ಪೋಷಕರ ಬಹುದಿನಗಳ ಬೇಡಿಕೆ ಈಡೇರಿಸಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಕ್ಕಳ ಸಂತೋಷದಲ್ಲಿ ಭಾಗಿಯಾಗಲಿದ್ದೀರಿ. ಕಾರ್ಯರಂಗದಲ್ಲಿ ಕಾರ್ಯದೊತ್ತಡ ಕಂಡುಬಂದೀತು.

ತುಲಾ: ಮರೆಯಬೇಕೆಂದರೂ ಕೆಲವೊಂದು ಘಟನೆಗಳು ನಿಮ್ಮನ್ನು ಕಾಡುತ್ತಲೇ ಇರುತ್ತವೆ. ಕಳೆದು ಹೋದ ವಸ್ತುವಿಗಾಗಿ ಹುಡುಕಾಟ ನಡೆಸಲಿದ್ದೀರಿ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ.

ವೃಶ್ಚಿಕ: ಸರಕಾರೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಪಾಲು ಬಂಡವಾಳ ಕ್ಷೇತ್ರದಲ್ಲಿ ಪ್ರಗತಿ ಕಂಡುಬರುವುದು. ಯೋಗ್ಯ ವಯಸ್ಕರಿಗೆ ವೈವಾಹಿಕ ಪ್ರಸ್ತಾಪಗಳು ಬರಲಿವೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ಕಾರ್ಯನಿಮಿತ್ತ ಪರರನ್ನು ಆಶ್ರಯಿಸಬೇಕಾದ ಪರಿಸ್ಥಿತಿಯಿರಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ಕಂಡುಬರುವುದು.

ಮಕರ: ಸಮಯಕ್ಕೆ ಸರಿಯಾಗಿ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಕುಂಭ: ಬಹುದಿನಗಳಿಂದ ಬಾಕಿಯಿದ್ದ ದೇವತಾ ಕಾರ್ಯಗಳನ್ನು ಪೂರ್ತಿ ಮಾಡಲಿದ್ಧೀರಿ. ಸಾಲಗಾರರಿಂದ ಸಂದಾಯವಾಗಬೇಕಾದ ಹಣ ಸಂದಾಯವಾಗಲಿದೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮೀನ: ಬೇರೆಯವರ ಕಷ್ಟಕ್ಕೆ ಸ್ಪಂದಿಸುವ ನಿಮ್ಮ ಗುಣ ಮೆಚ್ಚುಗೆಗೆ ಪಾತ್ರವಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ