ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 7 ಜೂನ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಕೆಲಸ ಕಾರ್ಯಗಳಲ್ಲಿ ಬೇರೆಯವರ ಹಸ್ತಕ್ಷೇಪ ಕಿರಿ ಕಿರಿ ತಂದೀತು. ಕಷ್ಟದ ಸಮಯದಲ್ಲಿ ಸ್ನೇಹಿತರ ಸಹಾಯ ಪಡೆಯಲಿದ್ದೀರಿ. ಹಿಂದೆ ಮಾಡಿದ ಸಾಲಗಳು ಪಾವತಿಯಾಗಲಿವೆ. ವಾಹನ ಸಂಚಾರ ಮಾಡಲಿದ್ದೀರಿ.

ವೃಷಭ: ಕಾರ್ಯರಂಗದಲ್ಲಿ ಮೇಲಧಿಕಾರಿಗಳಿಂದ ಒತ್ತಡ ಕಂಡುಬರಲಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಮನಸ್ಸು ಹಾತೊರೆಯಲಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರುವುದು.

ಮಿಥುನ: ವ್ಯಾಪಾರೀ ವರ್ಗದವರಿಗೆ ವಿನೂತನ ಪ್ರಯೋಗಗಳು ಕೈ ಹಿಡಿಯಲಿವೆ. ಹಣಕಾಸಿನ ಹರಿವಿದ್ದರೂ ಅಷ್ಟೇ ಖರ್ಚೂ ಇರಲಿದೆ. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಕುಲದೇವರ ಪ್ರಾರ್ಥನೆ ಮಾಡಿ.

ಕರ್ಕಟಕ: ನಿಮ್ಮ ಕಷ್ಟದ ಸಮಯದಲ್ಲಿ ಆಗಿಬಂದವರಿಗೆ ಪ್ರತ್ಯುಪಕಾರ ಮಾಡುವ ಅವಕಾಶಗಳು ಬರಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ಸಿಂಹ: ಕಾರ್ಯನಿಮಿತ್ತ ಪರವೂರಿಗೆ ಸಂಚರಿಸುವ ಅನಿವಾರ್ಯತೆ ಎದುರಾಗಲಿದೆ. ಮನೆಗೆ ನೆಂಟರಿಷ್ಟರ ಭೇಟಿ ಸಾಧ್ಯತೆ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆ. ಇಷ್ಟ ಮಿತ್ರರನ್ನು ಭೇಟಿಯಾಗಲಿದ್ದೀರಿ.

ಕನ್ಯಾ: ಬಹಳ ದಿನಗಳ ನಂತರ ನಿಮ್ಮ ಇಷ್ಟದ ವ್ಯಕ್ತಿಗಳನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಕೈಗೊಂಡ ಕೆಲಸಗಳಲ್ಲಿ ಯಶಸ್ಸು ಕಾಣಲಿದ್ದೀರಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಬೇಕಾಗುತ್ತದೆ.

ತುಲಾ: ಎಷ್ಟೇ ಕಷ್ಟವಿದ್ದರೂ ಅಂದುಕೊಂಡ ಕೆಲಸವನ್ನು ಪೂರ್ತಿ ಮಾಡಲೇಬೇಕೆಂಬ ಛಲ ಕಂಡುಬರಲಿದೆ. ಕೆಳ ಹಂತದ ನೌಕರರಿಗೆ ಮೇಲಧಿಕಾರಿಗಳಿಂದ ಕಿರಿ ಕಿರಿ ಕಂಡುಬಂದೀತು. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ವೃಶ್ಚಿಕ: ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಹಿರಿಯರ ಅಭಿಪ್ರಾಯ ಆಲಿಸಿ ಮುಂದುವರಿಯುವುದು ಸೂಕ್ತ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ.

ಧನು: ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗದು. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಮಕರ: ಸಹವಾಸ ದೋಷದಿಂದ ಕೆಲವೊಂದು ದುರಾಭ್ಯಾಸಗಳನ್ನು ರೂಢಿಸಿಕೊಳ್ಳಲಿದ್ದೀರಿ. ಸಂಗಾತಿಯ ಅಸಮಾಧಾನಕ್ಕೆ ಕಾರಣವಾಗಬೇಕಾದೀತು. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆ ಕಂಡುಬರಲಿದೆ. ತಾಳ್ಮೆಯಿರಲಿ.

ಕುಂಭ: ಕಾರ್ಯರಂಗದಲ್ಲಿ ನಿಮ್ಮ ಎದುರಾಳಿಗಳಿಂದ ಪೈಪೋಟಿ ಕಂಡುಬಂದೀತು. ಮಹಿಳೆಯರಿಗೆ ಕೆಲಸ ಕಾರ್ಯಗಳಲ್ಲಿ ಪರರ ಸಹಾಯ ಸಿಗುವುದು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.

ಮೀನ: ನಿಮ್ಮ ಒಳ್ಳೆಯತನವನ್ನು ಬೇರೆಯವರು ದುರುಪಯೋಗಪಡಿಸಿಕೊಳ್ಳುವ ಸಾಧ‍್ಯತೆ. ನಿಮ್ಮ ವ್ಯವಹಾರಕ್ಕೆ ಅನುಕೂಲವಾಗುವಂತೆ ಕೆಲವೊಂದು ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ಅನಗತ್ಯ ಚಿಂತೆ ಬೇಡ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ