ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 8 ಜೂನ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಇಷ್ಟ ಭೋಜನ ಮಾಡುವ ಯೋಗ. ಆದರೆ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಹಣಕಾಸಿನ ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೃಷಭ: ಬೇರೆಯವರು ನಿಮ್ಮ ಕೆಲಸಗಳಲ್ಲಿ ಮೂಗು ತೂರಿಸಲು ಅವಕಾಶ ಮಾಡಿಕೊಡಬೇಡಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಏಳಿಗೆಗೆ ಕುಟುಂಬದವರ ಪ್ರೋತ್ಸಾಹವಿರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಸರಕಾರೀ ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ.

ಕರ್ಕಟಕ: ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟ ಭೀತಿ ಎದುರಾಗಲಿದೆ. ತಾಂತ್ರಿಕ ವೃತ್ತಿಯವರಿಗೆ ಅಡಚಣೆಗಳು ಎದುರಾದೀತು. ಹಣಕಾಸಿನ ಗಳಿಕೆಗೆ ಅನ್ಯ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ತಾಳ್ಮೆಯಿರಲಿ.

ಸಿಂಹ: ಎಷ್ಟೇ ಕಾರ್ಯದೊತ್ತಡವಿದ್ದರೂ ಮನೆಯವರೊಂದಿಗೆ ಸಮಯ ಕಳೆಯಲು ಕಾಲಾವಕಾಶ ಮಾಡಿಕೊಳ್ಳಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.

ಕನ್ಯಾ: ವಿದೇಶಗಳಲ್ಲಿ ನೌಕರಿ ಮಾಡುತ್ತಿದ್ದರೆ ತವರಿಗೆ ಭೇಟಿಯಾಗುವ ಯೋಗ. ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳು ಬರಲಿವೆ.  ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ತುಲಾ: ನಿಮ್ಮದಲ್ಲದ ತಪ್ಪಿಗೆ ಸಮಸ್ಯೆ ಎದುರಿಸಬೇಕಾದ ಪರಿಸ್ಥಿತಿ ಬಂದೀತು. ಸಂಗಾತಿಯ ಸಲಹೆಗಳನ್ನು ಪಾಲಿಸುವದು ಉತ್ತಮ. ಗೃಹ, ವಾಹನ ರಿಪೇರಿ ಕೆಲಸಗಳಿಗೆ ಹಣ ವ್ಯಯವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಕಡೆಗೆ ಮನಸ್ಸು ವಾಲಲಿದೆ.

ಧನು: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಮಾತಿನ ಮೇಲೆ ನಿಗಾ ಇರಲಿ. ಮಕ್ಕಳ ಜೀವನದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಬಂಧು ಮಿತ್ರರನ್ನು ಭೇಟಿಯಾಗುವ ಯೋಗ.

ಮಕರ: ಹೊಸ ಕೆಲಸಗಳಿಗೆ ಕೈ ಹಾಕಿದರೆ ಇಂದು ಯಶಸ್ಸು ನಿಮ್ಮದಾಗಲಿದೆ. ಸರಕಾರಿ ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ಮನೆಗೆ ಅತಿಥಿಗಳ ಆಗಮನ ಸಾಧ‍್ಯತೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು.

ಕುಂಭ: ದೈನಂದಿನ ಕೆಲಸಗಳಿಗೆ ಅಡಚಣೆಗಳು ಕಂಡುಬಂದೀತು. ಇಷ್ಟಭೋಜನ ಮಾಡುವ ಯೋಗವಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ.

ಮೀನ: ಬಹಳ ದಿನಗಳಿಂದ ಬಾಕಿಯಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಪ್ರಯತ್ನಿಸಲಿದ್ದೀರಿ. ದೇವರ ಹರಕೆ, ಸೇವೆಗಳನ್ನು ಪೂರ್ತಿ ಮಾಡಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ