ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 13 ಜೂನ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು  ಹೊರ ಹಾಕಲು ಅವಕಾಶ ಸಿಗಲಿದೆ. ತಾಂತ್ರಿಕ  ವೃತ್ತಿಯವರಿಗೆ ಮುನ್ನಡೆ ಕಂಡುಬರಲಿದೆ. ಹೊಸ ವಿಚಾರಗಳನ್ನು ಕಲಿಯುವ ಅವಕಾಶವಿರುವುದು. ಅನಗತ್ಯ ಚಿಂತೆ ಬೇಡ.

ವೃಷಭ: ಸಾಂಸಾರಿಕವಾಗಿ ನಿಮಗೆ ಹಿತಶತ್ರುಗಳಿಂದ ತೊಂದರೆ ಎದುರಾದೀತು. ಸಂಗಾತಿಯೊಂದಿಗೆ ಮನಸ್ಸಿನ ಮಾತು ಹಂಚಿಕೊಳ್ಳಲಿದ್ದೀರಿ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ನಿಮ್ಮ ದೌರ್ಬಲ್ಯವನ್ನು ಬಳಸಿಕೊಂಡು ವಂಚನೆ ಮಾಡುವವರಿರುತ್ತಾರೆ. ಎಚ್ಚರಿಕೆಯಿಂದಿರುವುದು ಸೂಕ್ತ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ವಾಹನ, ಭೂಮಿ ಖರೀದಿ ಮಾಡುವ ನಿಮ್ಮ ಕನಸು ಸದ್ಯದಲ್ಲೇ ನನಸಾಗುವುದು. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ದಿನದಂತ್ಯಕ್ಕೆ ನೆಮ್ಮದಿ.

ಸಿಂಹ: ವ್ಯಾವಹಾರಿಕವಾಗಿ ಮುನ್ನಡೆಯಿದ್ದರೂ ಅದಕ್ಕೆ ತಕ್ಕ ಧನಗಳಿಕೆಯಾಗದೇ ನಿರಾಸೆಯಾದೀತು. ನೆರೆಹೊರೆಯವರಿಂದ ಸಹಾಯ ಸಿಗುವುದು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಸಾಂಸಾರಿಕವಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಕೆಳ ಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ. ಸ್ವಯಂ ವೃತ್ತಿಯವರಿಗೆ ಮುನ್ನಡೆ. ಕಾರ್ಯನಿಮಿತ್ತ ಪರವೂರಿಗೆ ಸಂಚರಿಸಬೇಕಾಗುತ್ತದೆ.

ತುಲಾ: ವೈಯಕ್ತಿಕ ಜೀವನದಲ್ಲಿ ಕಷ್ಟ-ನಷ್ಟಗಳು ಸಾಮಾನ್ಯ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ತಾಳ್ಮೆಯಿರಲಿ. ವಿಶೇಷ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ. ಸಮಾನ ಮನಸ್ಕರೊಂದಿಗೆ ಬೆರೆಯಲಿದ್ದೀರಿ.

ವೃಶ್ಚಿಕ: ಹಿರಿಯರಿಗೆ ದೇವತಾ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಇಷ್ಟಮಿತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು.

ಧನು: ವೈಯಕ್ತಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಪರಿಹಾರ ಕಂಡುಕೊಳ್ಳಲಿದ್ದೀರಿ. ಮಕ್ಕಳ ಜೀವನದ ಬಗ್ಗೆ ಅನಗತ್ಯ ಚಿಂತೆ ಬೇಡ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ತಾಳ್ಮೆಯಿರಲಿ.

ಮಕರ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಕೆಲವು ದಿನ ಕಾಯುವುದು ಸೂಕ್ತ. ನಿಮ್ಮ ಆಪ್ತರನ್ನು ಭೇಟಿಯಾಗಲು ಅವಕಾಶ ಸಿಗಲಿದೆ. ಸರಕಾರೀ ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ.

ಕುಂಭ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ವಿವೇಚನೆಯಿಂದ ನಿರ್ಧಾರ ತೆಗೆದುಕೊಂಡಲ್ಲಿ ಸೂಕ್ತ. ವಿದ್ಯಾರ್ಥಿಗಳು ಶಿಕ್ಷಕರ ಪ್ರೀತಿಗೆ ಪಾತ್ರರಾಗಲಿದ್ದಾರೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮೀನ: ಸುಲಭವಿದೆ ಎಂದು ಯಾವುದೇ ಕೆಲಸಕ್ಕೆ ಕೈ ಹಾಕಿದರೂ ಕೆಲವೊಂದು ಸಮಸ್ಯೆಗಳು ಎದುರಾದೀತು. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ