ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 14 ಜೂನ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ಫಲಪ್ರದ ದಿನ. ನಿರುದ್ಯೋಗಿಗಳು ಶುಭ ಸುದ್ದಿಗಳನ್ನು ನಿರೀಕ್ಷೆ ಮಾಡಬಹುದು. ಸಾಂಸಾರಿಕವಾಗಿ ಸುಖ, ಸಮೃದ್ಧಿಯಿರಲಿದೆ. ಆದರೆ ಮಾತಿನಿಂದ ಇತರರಿಗೆ ಬೇಸರ ತರಬೇಡಿ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ಸಂದರ್ಭಕ್ಕೆ ತಕ್ಕ ಸಹಾಯ ದೊರಕುವುದರಿಂದ ಸಂಭಾವ್ಯ ಸಮಸ್ಯೆಗಳಿಂದ ದೂರವಾಗಲಿದ್ದೀರಿ. ಹಳೆಯ ಮಿತ್ರರಿಂದ ಉಪಯೋಗವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಹಣಕಾಸಿನ ವಿಚಾರದಲ್ಲಿ ಬೇರೆಯವರು ನೀಡುವ ಸಲಹೆಗಳನ್ನು ನಂಬಿ ತೊಂದರೆಗೆ ಸಿಲುಕಿಕೊಳ್ಳಬೇಕಾದೀತು. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆಯ ಯೋಗ. ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ.

ಕರ್ಕಟಕ: ಜವಾಬ್ಧಾರಿಯುತ ನಡೆಯಿಂದ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಕಂಡುಬರಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಅನಗತ್ಯ ಚಿಂತೆ ಬೇಡ.

ಸಿಂಹ: ನಿಮ್ಮ ಹಳೆಯ ಬಾಕಿಗಳನ್ನು ತೀರಿಸಲು ಅವಕಾಶಗಳು ಕಂಡುಬರಲಿದೆ. ಧನ ಗಳಿಕೆಗೆ ನಾನಾ ಮಾರ್ಗಗಳು ಕಂಡುಬರುವುದು. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗ. ತಾಳ್ಮೆಯಿರಲಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕಾಗಿ ಕೆಲವು ದಿನ ಕಾಯುವುದು ಉತ್ತಮ. ಸಂಗಾತಿಯ ಸಮಯೋಚಿತ ಸಲಹೆಗಳು ಉಪಯೋಗಕ್ಕೆ ಬರಲಿವೆ. ವಾಹನ ಸವಾರರಿಗೆ ದಂಡ ಕಟ್ಟುವ ಪರಿಸ್ಥಿತಿ ಎದುರಾದೀತು.

ತುಲಾ: ಆದಾಯ ವೃದ್ಧಿಗೆ ನಾನಾ ಮಾರ್ಗಗಳು ಕಂಡುಬರಲಿದ್ದು, ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಸ್ವಯಂ ವೃತ್ತಿಯವರಿಗೆ ಮುನ್ನಡೆಯ ಯೋಗ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಕೌಟುಂಬಿಕವಾಗಿ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳಿಂದ ತೊಂದರೆಗಳು ಕಂಡುಬಂದೀತು. ಕಿರು ಸಂಚಾರ ಮಾಡಬೇಕಾಗುತ್ತದೆ.

ಧನು: ಉದ್ಯೋಗ, ವ್ಯವಹಾರದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದೆ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆ ಕಂಡುಬಂದೀತು. ಮನರಂಜನಾ ವೃತ್ತಿಯಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ.

ಮಕರ: ನಿಮ್ಮ ಮೇಲೆ ಕುಟುಂಬದವರು ಇಟ್ಟಿದ್ದ ನಿರೀಕ್ಷೆಗಳನ್ನು ನಿಜ ಮಾಡಲಿದ್ದೀರಿ. ತಾಂತ್ರಿಕ ವೃತ್ತಿಯವರಿಗೆ ಕಾರ್ಯದೊತ್ತಡ ಕಂಡುಬಂದೀತು. ಸಾಂಸಾರಿಕವಾಗಿ ತೃಪ್ತಿದಾಯಕ ದಿನವಾಗಿರಲಿದೆ.

ಕುಂಭ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಸಂತಾನ ಹೀನ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ನೆರೆಹೊರೆಯವರಿಂದ ಸಹಾಯ ನಿರೀಕ್ಷಿಸಲಿದ್ದೀರಿ. ತಾಳ್ಮೆಯಿರಲಿ.

ಮೀನ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಮಾಡಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದಲ್ಲಿ ಆರೋಗ್ಯ ಸಮಸ್ಯೆಯಾದೀತು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ