ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 15 ಜೂನ್ 2023 (07:50 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಲಸಗಳನ್ನು ಪೂರ್ತಿ ಮಾಡಿದ ತೃಪ್ತಿ ನಿಮ್ಮದಾಗಲಿದೆ. ಹೊಸ ವಿಷಯಗಳನ್ನು ಕಲಿಯುವ ಆಸಕ್ತಿ ಕಂಡುಬರಲಿದೆ. ಸಾಂಸಾರಿಕವಾಗಿ ನೆಮ್ಮದಿಯಿರಲಿದೆ.

ವೃಷಭ: ಉದ್ದೇಶಿತ ಕೆಲಸಗಳಿಗೆ ಕೊನೆಯ ಗಳಿಗೆಯಲ್ಲಿ ಅಡೆತಡೆಗಳು ಬಂದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯವೊದಗಿಬರಲಿದೆ. ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ಮಿಥುನ: ವ್ಯಾವಹಾರಿಕ ಸಂಬಂಧಗಳ ಸುಧಾರಣೆಗೆ ಮುಂದಾಗಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡಬೇಕಾಗುತ್ತದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗುವುದು.

ಕರ್ಕಟಕ: ಭೂಮ್ಯಾದಿ ವ್ಯವಹಾರಗಳಲ್ಲಿ ಲಾಭ ಕಂಡುಬರಲಿದೆ. ವೈಯಕ್ತಿಕ ಜೀವನದಲ್ಲಿ ಬೇರೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಮಕ್ಕಳ ಸಂತೋಷದಲ್ಲಿ ಭಾಗಿಯಾಗಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ಫಲಪ್ರದ ದಿನವಾಗಿರಲಿದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ವ್ಯವಹಾರದಲ್ಲಿ ಹಿತಶತ್ರುಗಳ ಕಾಟ ಕಂಡುಬಂದೀತು. ತಾಳ್ಮೆಯಿರಲಿ.

ಕನ್ಯಾ: ಪಾಲುದಾರಿಕಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರೆ ಲಾಭ ಕಂಡುಬರಲಿದೆ. ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ತುಲಾ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ಇನ್ನೊಬ್ಬರಿಂದ ಪಡೆದ ವಸ್ತು, ಹಣವನ್ನು ಮರಳಿಸಲಿದ್ದೀರಿ. ನೆರೆಹೊರೆಯವರೊಂದಿಗೆ ಸಂಬಂಧ ಸುಧಾರಿಸಲಿದೆ. ಇಷ್ಟ ಭೋಜನ ಮಾಡುವ ಯೋಗ. ಹಳೆಯ ಮಿತ್ರರನ್ನು ಭೇಟಿಯಾಗಲಿದ್ದು, ಮನಸ್ಸಿಗೆ ಸಂತೋಷವಾಗಲಿದೆ.

ಧನು: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಭರವಸೆ ನಿಜ ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಏಕಾಗ್ರತೆಯ ಕೊರತೆ ಕಂಡುಬಂದೀತು. ಹಿರಿಯರು ದೇವತಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಮಕರ: ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಚನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು.

ಕುಂಭ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೇವತಾ ಪ್ರಾರ್ಥನೆ ಮಾಡಿ.

ಮೀನ: ನಿಮ್ಮ ಇಷ್ಟ ವಸ್ತುವನ್ನು ಕಳೆದುಕೊಳ್ಳುವ ಭೀತಿ. ಪ್ರೀತಿ ಪಾತ್ರರೊಂದಿಗೆ ಮನಸ್ಸಿನ ಮಾತುಗಳನ್ನು ಹಂಚಿಕೊಳ್ಳಲಿದ್ದೀರಿ. ಕಾರ್ಯನಿಮಿತ್ತ ಪ್ರಯಾಣ ಮಾಡಬೇಕಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ