ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 20 ಜೂನ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಮನಸ್ಸಿನಲ್ಲಿರುವ ಭಾವನೆಯನ್ನು ಇತರರ ಮೇಲೆ ಹೇರಲು ಹೋಗಬೇಡಿ. ಬಾಯ್ತಪ್ಪಿ ಆಡಿದ ಮಾತಿಗೆ ತಕ್ಕ ಬೆಲೆ ತೆರಬೇಕಾದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ತಾಳ್ಮೆಯಿರಲಿ.

ವೃಷಭ: ಸರಕಾರೀ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಯಶಸ್ಸು ಸಿಗುವುದು. ಇಷ್ಟಮಿತ್ರರೊಂದಿಗೆ ಇಷ್ಟಭೋಜನ ಮಾಡುವ ಯೋಗ. ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ಹಿರಿಯರ ಸಲಹೆಗಳನ್ನು ಕಡೆಗಣಿಸದಿರಿ. ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ಕರ್ಕಟಕ: ಮನಸ್ಸಿನಲ್ಲಿರುವ ಋಣಾತ್ಮಕ ಚಿಂತನೆಗಳು ಕಾರ್ಯಸಾಧನೆಗೆ ಅಡ್ಡಿ ಮಾಡೀತು. ಸಂಗಾತಿಯಿಂದ ಸಹಕಾರ ಸಿಗುವುದು. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗ. ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟವಾಗುವ ಸಾಧ‍್ಯತೆ. ಯೋಗ್ಯ ವಯಸ್ಕರಿಗೆ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಅನಗತ್ಯ ಚಿಂತೆ ಬೇಡ.

ಕನ್ಯಾ: ನಿರುದ್ಯೋಗಿಗಳು ಹೊಸ ಅವಕಾಶಕ್ಕಾಗಿ ಬೇರೆ ಊರಿಗೆ ಪ್ರಯಾಣ ಮಾಡಬೇಕಾಗುತ್ತದೆ. ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ‍್ಳಲಿದ್ದೀರಿ. ನಿಮ್ಮ ಕಾರ್ಯಸಾಧನೆಗೆ ಕ್ರಿಯಾತ್ಮಕವಾಗಿ ಯೋಚಿಸಬೇಕಾಗುತ್ತದೆ.

ತುಲಾ: ಪಾಲುದಾರಿಕೆ ವ್ಯವಹಾರದಲ್ಲಿ ವಂಚನೆಗೊಳಗಾಗುವ ಭೀತಿ. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ಕಟ್ಟುನಿಟ್ಟು ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ವಿದ್ಯಾರ್ಥಿಗಳು ಹೊಸ ಪರೀಕ್ಷೆ, ಸವಾಲುಗಳಿಗೆ ಸಿದ್ಧರಾಗಬೇಕಾಗುತ್ತದೆ. ಕಳೆದು ಹೋದ ವಸ್ತುವಿಗಾಗಿ ಹುಡುಕಾಟ ನಡೆಸಲಿದ್ದೀರಿ. ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ದಿನದಂತ್ಯಕ್ಕೆ ನೆಮ್ಮದಿ.

ಧನು: ಎಷ್ಟೇ ಒಳ್ಳೆಯವರಾಗಿದ್ದರೂ ಅಪವಾದಕ್ಕೆ ಗುರಿಯಾಗುವ ಸಾಧ್ಯತೆ. ಮಾತಿನ ಮೇಲೆ ನಿಗಾ ಇರಲಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾದೀತು. ಬಂಧು ಮಿತ್ರರನ್ನು ಭೇಟಿಯಾಗುವ ಯೋಗ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸಿಗಾಗಿ ಸಾಹಸಕ್ಕೆ ಕೈ ಹಾಕಲಿದ್ದೀರಿ. ನೆರೆಹೊರೆಯವರಿಂದ ಸಹಾಯ ನಿರೀಕ್ಷಿಸಬಹುದು. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯುವುದು.

ಕುಂಭ: ಮಕ್ಕಳ ವಿಚಾರಕ್ಕೆ ಬೇರೆಯವರಿಂದ ಹೊಗಳಿಸಿಕೊಳ್ಳುವ ಯೋಗ. ಹಣಕಾಸಿನ ಹರಿವಿದ್ದರೂ ಅಷ್ಟೇ ಖರ್ಚೂ ಇರಲಿದೆ. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ಕೊಂಚ ಮಟ್ಟಿಗೆ ಸುಧಾರಿಸಲಿದೆ.

ಮೀನ: ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಸರಕಾರೀ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ