ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 25 ಜೂನ್ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಇಷ್ಟ ಭೋಜನ ಮಾಡಲಿದ್ದೀರಿ. ಮಕ್ಕಳ ಮನಸ್ಸಂತೋಷಕ್ಕಾಗಿ ಕೆಲವು ಕೆಲಸ ಮಾಡಬೇಕಾಗುತ್ತದೆ. ಗೃಹಿಣಿಯರಿಗೆ ಬಿಡುವಿಲ್ಲದ ಕೆಲಸ.

ವೃಷಭ: ಮನೆಗೆ ಅತಿಥಿಗಳನ್ನು ಸ್ವಾಗತಿಸಲು ಸಿದ್ಧತೆ ನಡೆಸಬೇಕಾಗುತ್ತದೆ. ಬಂಧು ಮಿತ್ರರ ಭೇಟಿ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಯಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಮೇಲಧಿಕಾರಿಗಳಿಂದ ಹೆಚ್ಚಿನ ಜವಾಬ್ಧಾರಿ ಸಿಗಲಿದೆ. ತಾಂತ್ರಿಕ ವೃತ್ತಿಯವರಿಗೆ ಬಿಡುವಿನ ಖುಷಿ. ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ.

ಕರ್ಕಟಕ: ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ವ್ಯಾಪಾರಸ್ಥರು ವ್ಯವಹಾರಕ್ಕಾಗಿ ಅನ್ಯ ಊರಿಗೆ ಪ್ರಯಾಣ ಮಾಡಬೇಕಾಗಿಬರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ.

ಸಿಂಹ: ಕಾರ್ಯರಂಗದಲ್ಲಿ ನಿಮ್ಮ ಎದುರಾಳಿಗಳ ವಿರುದ್ಧ ಜಯ ಸಾಧಿಸಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿ ಯೋಗ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ಮನಸ್ಸಿನ ಮಾತುಗಳನ್ನು ಆತ್ಮೀಯರೊಂದಿಗೆ ಹಂಚಿಕೊಳ್ಳಲಿದ್ದೀರಿ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ತಾಳ್ಮೆಯಿರಲಿ.

ತುಲಾ: ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲು ಅಡೆತಡೆಗಳು ಬಂದೀತು. ಸಂಗಾತಿಯ ಸಲಹೆಗಳು ಉಪಯೋಗಕ್ಕೆಬರಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ಸರಕಾರೀ ವೃತ್ತಿಯವರಿಗೆ ಉದ್ಯೋಗ ಸಂಬಂಧವಾದ ಚಿಂತೆ ಕಾಡೀತು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.

ಧನು: ಯಥೇಚ್ಛವಾಗಿ ನಿಮ್ಮ ಇಷ್ಟ ಭೋಜನ ಮಾಡುವ ಯೋಗ. ಕೌಟುಂಬಿಕವಾಗಿ ಸುಖ, ಸಮೃದ್ಧಿಯ ದಿನಗಳು. ಆದಾಯ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ಮಕರ: ಸರಕಾರೀ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ನಯವಂಚಕರಿಂದ ದೂರವಿರುದೇ ಉತ್ತಮ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ.

ಕುಂಭ: ನೀವು ಅಂದುಕೊಂಡಿದ್ದು ಒಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ಬಂದೀತು. ಹೊಸ ಕೆಲಸಗಳಿಗೆ ಹೊಂದಿಕೊಳ್ಳಲು ಕಷ್ಟಪಡಬೇಕಾದೀತು. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಮೀನ: ಎಷ್ಟೇ ಕಾರ್ಯದೊತ್ತಡಗಳಿದ್ದರೂ ಮನೆಯವರೊಂದಿಗೆ ಸಮಯ ಕಳೆಯಲಿದ್ದೀರಿ. ಪಾಲು ಬಂಡವಾಳ ಹೂಡಿಕೆಗೆ ಇದು ಸಕಾಲ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಕುಲದೇವರ ಪ್ರಾರ್ಥನೆ ಮಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ