ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 7 ಜುಲೈ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮಗೆ ಎದುರಾಗುವ ಸಮಸ್ಯೆಗಳಿಗೆ ಸಹೋದ್ಯೋಗಿಗಳಿಂದ ಪರಿಹಾರವಾಗಲಿದೆ. ಇಷ್ಟ ಮಿತ್ರರೊಂದಿಗೆ ಭೋಜನ ಮಾಡುವ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ವೃಷಭ: ನಿರುದ್ಯೋಗಿಗಳಿಗೆ ಸದವಕಾಶಗಳು ಬಂದಾಗ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಸಮಾನ ಮನಸ್ಕರೊಂದಿಗೆ ಬೆರೆಯಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಮಾತಿನಿಂದಲೇ ಇತರರ ಗಮನ ಸೆಳೆಯಲಿದ್ದೀರಿ.

ಸಿಂಹ: ಬಹಳ ದಿನಗಳಿಂದ ಬಾಕಿಯಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಕಾರ್ಯರಂಗದಲ್ಲಿ ಸಹೋದ್ಯೋಗಿಗಳಿಂದ ಪೈಪೋಟಿ ಎದುರಾಗಲಿದೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಯಂತ್ರೋಪಕರಣಗಳೊಂದಿಗೆ ಕೆಲಸ ಮಾಡುವಾಗ ಎಚ್ಚರ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ವೃಶ್ಚಿಕ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಮನಸ್ಸಿನ ಮಾತುಗಳನ್ನು ಆತ್ಮೀಯರೊಂದಿಗೆ ಹಂಚಿಕೊಳ್ಳಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ.

ಧನು: ಬಹಳ ದಿನಗಳ ನಂತರ ಬಂಧು ಮಿತ್ರರನ್ನು ಭೇಟಿಯಾಗುವ ಅವಕಾಶ. ಸರಕಾರೀ ಕೆಲಸಗಳಿಗಾಗಿ ಓಡಾಟ ನಡೆಸಲಿದ್ದೀರಿ. ಸಹೋದರಾದಿ ಸಂಬಂಧಿಗಳೊಂದಿಗಿನ ಭಿನ್ನಾಭಿಪ್ರಾಯಗಳು ದೂರವಾಗಲಿದೆ.

ಮಕರ: ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟದ ಭೀತಿ. ಮನೆಯಲ್ಲಿ ರಿಪೇರಿ ಇತ್ಯಾದಿ ಕೆಲಸಗಳಿಗೆ ಕೈ ಹಾಕಲಿದ್ದೀರಿ. ಸರಕಾರೀ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಹಿರಿಯರಿಗೆ ತೀರ್ಥ ಯಾತ್ರೆ ಕೈಗೊಳ್ಳುವ ಅವಕಾಶಗಳು ಒದಗಿಬಂದೀತು. ಪ್ರೀತಿ ಪಾತ್ರರೊಂದಿಗೆ ಕಾಲ ಕಳೆಯುವ ಅವಕಾಶ ಕಂಡುಬರಲಿದೆ. ತಾಂತ್ರಿಕ ವೃತ್ತಿಯವರಿಗೆ ಕಾರ್ಯದೊತ್ತಡ ಕಂಡುಬರಲಿದೆ.

ಮೀನ: ಮಕ್ಕಳ ಜೀವನದ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಕಿರು ಸಂಚಾರ ಮಾಡಲಿದ್ದೀರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ