ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 17 ಜುಲೈ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಚುರುಕುತ ಪ್ರದರ್ಶಿಸಬೇಕಾಗುತ್ತದೆ. ಉದ್ಯೋಗ ಬದಲಾವಣೆಗಾಗಿ ನೀವು ಪಡುತ್ತಿದ್ದ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.

ವೃಷಭ: ಅಧಿಕ ಪರಿಶ್ರಮದಿಂದ ನಿಮಗೆ ಉತ್ತಮ ಫಲಾಫಲಗಳು ದೊರೆಯಲಿವೆ. ಸಾಂಸಾರಿಕವಾಗಿ ಏಳು-ಬೀಳುಗಳು ಸಾಮಾನ್ಯ. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ತಾಳ್ಮೆಯಿರಲಿ.

ಮಿಥುನ: ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಹಿರಿಯರ ಸಲಹೆ ಪಡೆದುಕೊಳ್ಳಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಇಷ್ಟ ಮಿತ್ರರನ್ನು ಭೇಟಿಯಾಗುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ಕರ್ಕಟಕ: ಮನರಂಜನಾ ವೃತ್ತಿಯಲ್ಲಿರುವವರಿಗೆ ಮುನ್ನಡೆಯ ಯೋಗ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ಅಷ್ಟೇ ಖರ್ಚೂ ಇರಲಿದೆ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಅಪವಾದದ ಭೀತಿ ಕಂಡುಬರಲಿದೆ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತಿಯ ಯೋಗ. ಅವಿವಾಹಿತರಿಗೆ ಯೋಗ್ಯ ವೈವಾಹಿಕ ಸಂಬಂಧಗಳು ಕೂಡಿಬರಲಿವೆ.

ಕನ್ಯಾ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ಹೊಸ ಕೆಲಸಗಳಲ್ಲಿ ಅಡೆತಡೆಗಳು ಸಾಮಾನ್ಯ. ಮಕ್ಕಳಿಂದ ಸಂತೋಷ, ನೆಮ್ಮದಿ ನಿಮ್ಮದಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಎಲ್ಲವೂ ಒಳ್ಳೆಯದಾಗಲಿದೆ. ವಾಹನಾದಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ‍್ಳಲಿದ್ದೀರಿ.

ವೃಶ್ಚಿಕ: ಕೆಲಸದಲ್ಲಿ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದ್ದು, ಮನಸ್ಸಿಗೆ ನೆಮ್ಮದಿಯಾಗಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಪಾಲು ಬಂಡವಾಳ ಹೂಡಿಕೆಗೆ ಇದು ಸಕಾಲ. ಅನಗತ್ಯ ಚಿಂತೆ ಬೇಡ.

ಧನು: ಹಳೆಯ ಬಾಕಿಗಳು ಪಾವತಿಯಾಗಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ವಿದ್ಯಾರ್ಥಿಗಳು ಹೊಸ ಸವಾಲುಗಳಿಗೆ ಸಿದ್ಧರಾಗಬೇಕಾಗುತ್ತದೆ.

ಮಕರ: ಕಾರ್ಯರಂಗದಲ್ಲಿ ಮೇಲಧಿಕಾರಿಗಳಿಂದ ಒತ್ತಡ ಕಂಡುಬಂದೀತು. ಮಾತಿನ ಮೇಲೆ ನಿಗಾ ಇರಲಿ. ನೀವು ಅಂದುಕೊಂಡಿದ್ದ ಕೆಲಸಗಳು ನಿಗದಿತ ಸಮಯಕ್ಕೆ ಪೂರ್ತಿಯಾಗಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಕುಂಭ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಆದಾಯ ಮೂಲಕ್ಕೆ ತೊಂದರೆಗಳು ಎದುರಾದೀತು. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮೀನ: ಹಿರಿಯರಿಂದ ಬಂದ ಬಳವಳಿ ಸಂರಕ್ಷಿಸುವ ಹೊಣೆಗಾರಿಕೆ ನಿಮ್ಮದಾಗಲಿದೆ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆಯ ಯೋಗ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಸಹೋದರ ಸಮಾನರಿಂದ ಸಹಕಾರ ಕಂಡುಬರುವುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ