ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 23 ಆಗಸ್ಟ್ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬೇರೆಯವರು ನಿಮ್ಮ ಬಗ್ಗೆ ಹೇಳುವ ಚಾಡಿ ಮಾತುಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ನಿಮ್ಮ ತ್ಯಾಗಕ್ಕೆ ತಕ್ಕ ಬೆಲೆ ಸಿಕ್ಕೇ ಸಿಗುತ್ತದೆ. ಹಿರಿಯರಲ ಸಲಹೆಗಳು ಉಪಯೋಗಕ್ಕೆ ಬರಲಿದೆ. ಅನಗತ್ಯ ಚಿಂತೆ ಬೇಡ.

ವೃಷಭ: ಧಾರ್ಮಿಕ ಚಟುವಟಿಕೆಗಳಿಗೆ ನೇತೃತ್ವ ವಹಿಸಲಿದ್ದೀರಿ. ಆಪ್ತರಿಗಾಗಿ ಒಲ್ಲದ ಕೆಲಸಗಳನ್ನೂ ಮಾಡಬೇಕಾಗುತ್ತದೆ. ಅನಿವಾರ್ಯ ಪರಿಸ್ಥಿತಿಗಳಲ್ಲಿ ಪರರ ಸಹಾಯ ಪಡೆಯಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಗೃಹ, ವಾಹನಾದಿ ಖರೀದಿ ವಿಚಾರದಲ್ಲಿ ಅಡೆತಡೆಗಳು ಬಂದೀತು. ಇಷ್ಟಮಿತ್ರರೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ದೂರದ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಮಾತಿನ ಮೇಲೆ ಹಿಡಿತವಿರಲಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯಕ್ಕೆ ಒಳಗಾಗಬೇಡಿ. ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಮುನ್ನಡೆ. ಸಾಮಾಜಿಕವಾಗಿ ಸ್ಥಾಮ ಮಾನ ವೃದ್ಧಿಯಾಗಲಿದೆ.

ಸಿಂಹ: ಗುರುಹಿರಿಯರ ಪ್ರೀತಿ ಸಂಪಾದನೆ ಮಾಡಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಹಿಂದೆ ಮಾಡಿದ್ದ ಸಾಲಗಳನ್ನು ತೀರಿಸಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ವ್ಯವಹಾರದಲ್ಲಿ ಒತ್ತಡದಿಂದಾಗಿ ಇತರರ ಮೇಲೆ ಕೂಗಾಡುವ ಸಂದರ್ಭಗಳು ಎದುರಾದೀತು. ಚತುರತೆಯಿಂದ ಕೂಡಿದ ನಿಮ್ಮ ಕಾರ್ಯವೈಖರಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ದಿನದಂತ್ಯಕ್ಕೆ ನೆಮ್ಮದಿ.

ತುಲಾ: ಹಣಕಾಸಿನ ವಿಚಾರದಲ್ಲಿ ಇನ್ನೊಬ್ಬರ ಸಲಹೆ ಬೇಕಾದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ.

ವೃಶ್ಚಿಕ: ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಒಳಿತಾಗಲಿದೆ. ವಾಹನ ಸವಾರರಿಗೆ ಒತ್ತಡ ಎದುರಾಗಲಿದೆ. ತಾಳ್ಮೆಯಿರಲಿ.

ಧನು: ಹೊಸ ಯೋಜನೆಗಳನ್ನು ಅಳವಡಿವುದರಿಂದ ನಿಮ್ಮ ಕಾರ್ಯಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆ ಕಾಣಲಿದ್ದೀರಿ. ಸಂಗಾತಿಯ ಸಮಯೋಚಿತ ಸಲಹೆಗಳು ಉಪಯೋಗಕ್ಕೆ ಬರಲಿದೆ. ಅನಗತ್ಯ ಚಿಂತೆ ಬೇಡ.

ಮಕರ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆಯಿರಲಿದ್ದು, ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳಾದೀತು. ಹಿರಿಯರ ಸಲಹೆ ಪಡೆಯಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

ಕುಂಭ: ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಕಂಡುಬರಲಿದೆ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಕೂಡಿಬರಲಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ.

ಮೀನ: ಸಾಂಸಾರಿಕವಾಗಿ ಕೆಲವೊಂದು ಕಿರಿ ಕಿರಿಗಳು ಚಿಂತೆ ಹೆಚ್ಚಿಸೀತು. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ. ಕಟ್ಟಡ ಕಾಮಗಾರಿ ಕೆಲಸಗಳು ನಿರ್ವಿಘ್ನವಾಗಿ ನಡೆಯಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ