ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 24 ಆಗಸ್ಟ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ರಂಗದಲ್ಲಿ ಪ್ರಗತಿ ಕಂಡುಬರಲಿದೆ. ವ್ಯವಹಾರದಲ್ಲಿ ಇತರರ ಸಲಹೆಗಳು ಉಪಯೋಗಕ್ಕೆ ಬರಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಷಭ: ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ವ್ಯಾಪಾರಿಗಳಿಗೆ ಹಣಕಾಸಿನ ಪ್ರಗತಿಗೆ ಹೊಸ ದಾರಿ ಕಂಡುಬರಲಿದೆ.

ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ.

ಕರ್ಕಟಕ: ಉದ್ಯಮಿಗಳಿಗೆ ವ್ಯವಹಾರ ವಿಸ್ತರಣೆಗೆ ಅವಕಾಶ ಸಿಗುವುದು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಾಂಪತ್ಯದಲ್ಲಿ ಸುಖ, ಸಮೃದ್ಧಿ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಸಿಂಹ: ಕಾರ್ಯಕ್ಷೇತ್ರದಲ್ಲಿ ಪೈಪೋಟಿ ಎದುರಾಗಲಿದೆ. ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಸಾಮಾಜಿಕವಾಗಿ ಸ್ಥಾಮ ಮಾನ ವೃದ್ಧಿಯಾಗಲಿದೆ. ವಿವೇಚನೆಯಿಂದ ಸಂಪತ್ತು ಉಪಯೋಗಿಸಬೇಕಾಗುತ್ತದೆ. ತಾಳ್ಮೆಯಿರಲಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಕೆಳ ಹಂತದ ನೌಕರರಿಗೆ ಮುಂಬಡ್ತಿ ಯೋಗ. ಅವಿವಾಹಿತರಿಗೆ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ವ್ಯಾಪಾರಿಗಳಿಗೆ ಅನುಕೂಲಕರ ವಾತಾವರಣ.

ತುಲಾ: ಸ್ಟೇಶನರಿ ವ್ಯವಹಾರಸ್ಥರಿಗೆ ತಕ್ಕ ಅನುಕೂಲ ಕಂಡುಬರಲಿದೆ. ಉದ್ಯೋಗಾಕಾಂಕ್ಷಿಗಳಿಗೆ ನೂತನ ಅವಕಾಶಗಳು ಕಂಡುಬರಲಿದೆ. ತಾತ್ಕಾಲಿಕ ಹೂಡಿಕೆಯಿಂದ ನಷ್ಟವಾಗುವ ಸಾಧ‍್ಯತೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ವಿಶೇಷ ವ್ಯಕ್ತಿಗಳಿಂದ ನಿಮ್ಮ ಜೀವನಕ್ಕೆ ತಿರುವು ಸಿಗಲಿದೆ. ದೈವಾನುಗ್ರಹದಿಂದ ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಪಾಲುದಾರಿಕೆ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ.

ಧನು: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದ್ದೀರಿ. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಯೋಗ. ಪ್ರೀತಿ ಪಾತ್ರರ ಕಷ್ಟಕ್ಕೆ ನೆರವಾಗಲಿದ್ದೀರಿ. ತಾಂತ್ರಿಕ ವೃತ್ತಿಯವರಿಗೆ ಬಿಡುವಿಲ್ಲದ ಕೆಲಸ.

ಮಕರ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಉದ್ಯೋಗ, ವ್ಯವಹಾರದಲ್ಲಿ ಅಡೆತಡೆಗಳು ನಿವಾರಣೆಯಾಗಲಿದೆ. ಹಿರಿಯರಿಗೆ ದೇವತಾ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ.

ಕುಂಭ: ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಬೇಡ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಸಾಂಸಾರಿಕವಾಗಿ ಸುಖ, ಸಮೃದ್ಧಿಯಿರಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ತಾಳ್ಮೆ ಇರಲಿ.

ಮೀನ: ನಿರುದ್ಯೋಗಿಗಳಿಗೆ ತಾತ್ಕಾಲಿಕವಾಗಿ ಉದ್ಯೋಗ ಸಿಗಲಿದೆ. ಪಾಲುದಾರಿಕೆ ಕ್ಷೇತ್ರದಲ್ಲಿ ಪಾರದರ್ಶಕತೆಯಿರಲಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಕುಲದೇವರ ಪ್ರಾರ್ಥನೆ ಮಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ