ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 1 ಸೆಪ್ಟಂಬರ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಅಗತ್ಯತೆ ಮೇಲಧಿಕಾರಿಗಳಿಗೆ ಮನವರಿಕೆಯಾಗಲಿದೆ. ಪರಿಚಿತರ ಕಷ್ಟದಲ್ಲಿ ನೆರವಾದ ನೆಮ್ಮದಿ ನಿಮ್ಮದಾಗಲಿದೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗುತ್ತದೆ.

ವೃಷಭ: ಮನಸ್ಸಿಗೆ ಉಲ್ಲಾಸ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ವಿವಾಹ ಸಂಬಂಧ ಮಾತುಕತೆಯಲ್ಲಿ ಪ್ರಗತಿ ಕಂಡುಬರುವುದು. ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗುವುದು.

ಮಿಥುನ: ಗೃಹಿಣಿಯರಿಗೆ ಸಾಂಸಾರಿಕವಾಗಿ ಹೆಚ್ಚಿನ ಜವಾಬ್ಧಾರಿ  ಹೆಗಲಿಗೇರಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ ನಡೆಸಬೇಕಾಗುತ್ತದೆ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರುವುದು.

ಕರ್ಕಟಕ: ನಿಮ್ಮ ಮನೋಬಲ ಹೆಚ್ಚಿಸಿಕೊಳ್ಳುವುದರಿಂದ ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಯಶಸ್ಸು ಪಡೆದುಕೊಳ್ಳಲಿದ್ದೀರಿ. ಸಹೋದರ ಸಂಬಂಧಿಗಳೊಂದಿಗಿನ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳಲಿದ್ದೀರಿ. ಚಿಂತೆ ಬೇಡ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆ. ಆರ್ಥಿಕವಾಗಿ ನಾನಾ ಮೂಲಗಳಿಂದ ಹಣಕಾಸಿನ ಹರಿವು ಇರಲಿದೆ. ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯ. ಬಾಕಿ ಹಣ ಸಂದಾಯವಾಗಲಿದೆ.

ಕನ್ಯಾ: ಉದ್ಯೋಗ ರಂಗದಲ್ಲಿ ಹೆಚ್ಚಿನ ಅವಕಾಶಗಳು ನಿಮ್ಮದಾಗಲಿದೆ. ದೇವತಾರಾಧನೆಯಿಂದ ಶುಭ ಫಲ ನಿರೀಕ್ಷಿಸಬಹುದು. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ.

ತುಲಾ: ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಮನರಂಜನಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ. ಅಧ್ಯಾಪಕ ವೃತ್ತಿಯವರಿಗೆ ಹೆಚ್ಚಿನ ಶ್ರಮವಹಿಸಬೇಕಾದೀತು. ತಾಳ್ಮೆಯಿರಲಿ.

ವೃಶ್ಚಿಕ: ಅನ್ಯರ ವಿಚಾರಗಳಲ್ಲಿ ಮೂಗು ತೂರಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳುವ ಪರಿಸ್ಥಿತಿ ಎದುರಾದೀತು. ಪಾಲು ಬಂಡವಾಳ ಹೂಡಿಕೆಯಿಂದ ಹೆಚ್ಚಿನ ಲಾಭ ಕಂಡುಕೊಳ್ಳಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ಧನು: ಇತರರ ಅನುಕೂಲಕ್ಕಾಗಿ ನಿಮ್ಮ ದೈನಂದಿನ ಕೆಲಸಗಳಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ. ದೈಹಿಕವಾಗಿ ಹೆಚ್ಚಿನ ಶ್ರಮವಹಿಸಬೇಕಾದೀತು. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಹೆಚ್ಚಲಿದೆ.

ಮಕರ: ನಿಮ್ಮ ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯಕ್ಕೊಳಗಾಗಬೇಡಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಕುಲದೇವರ ಪ್ರಾರ್ಥನೆ ಮಾಡಿ.

ಕುಂಭ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಎಲ್ಲವೂ ಒಳಿತಾಗಲಿದೆ. ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ.

ಮೀನ: ಭೂಮ್ಯಾದಿ ವ್ಯವಹಾರಗಳಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಅರಸಿಕೊಂಡು ಬರಲಿವೆ. ಹಿರಿಯರಿಗೆ ದೇವತಾ ಕಾರ್ಯಗಳಲ್ಲಿ ಭಾಗಿಯಾದ ನೆಮ್ಮದಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ