ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 2 ಸೆಪ್ಟಂಬರ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹಿಂದೆ ಮಾಡಿದ ತಪ್ಪುಗಳಿಗೆ ಪ್ರಾಯಶ್ಚಿತ ಮಾಡಿಕೊಳ್ಳಲಿದ್ದೀರಿ. ಗೃಹಿಣಿಯರಿಗೆ ಮನೆಗೆ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಬೇಕಾದೀತು. ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಪ್ರಗತಿ ಕಂಡು ನೆಮ್ಮದಿಯಾಗಲಿದೆ.

ವೃಷಭ: ಮನಸ್ಸಿಗೆ ಇಷ್ಟವಾಗುವ ವ್ಯಕ್ತಿಗಾಗಿ ನೀವು ಹುಡುಕಾಡುತ್ತಿದ್ದರೆ ಇಂದು ಫಲ ಸಿಗಲಿದೆ. ಯಂತ್ರೋಪಕರಣಗಳೊಂದಿಗೆ ಕೆಲಸ ಮಾಡುವಾಗ ಎಚ್ಚರಿಕೆ ವಹಿಸಿ. ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಒತ್ತು ನೀಡಿ.

ಮಿಥುನ: ಭವಿಷ್ಯದ ಯೋಜನೆ ಬಗ್ಗೆ ಮೀನ ಮೇಷ ಎಣಿಸುತ್ತಾ ಕೂರುವುದು ಬೇಕಾಗಿಲ್ಲ. ನಿಮಗೆ ಅನುಕೂಲಕರವಾದ ಉದ್ಯೋಗಾವಕಾಶಗಳು ಬರಲಿವೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ.

ಕರ್ಕಟಕ: ನಿಮ್ಮ ಹಿಂದಿನ ಬಾಕಿ ಪಾವತಿಯಾಗಲಿದೆ. ಹಣಕಾಸಿನ ವಿಚಾರದಲ್ಲಿ ಪರಿಸ್ಥಿತಿ ಸುಧಾರಿಸಲಿದೆ. ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಗುರುಹಿರಿಯರ ಸಲಹೆ ಪಡೆಯಿರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಿಂಹ: ಉದ್ಯೋಗ, ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ ಕಂಡುಬರುವುದು. ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಸುಧಾರಣೆ ಕಂಡುಬರಲಿದೆ.

ಕನ್ಯಾ: ವಿದೇಶದಲ್ಲಿ ಉದ್ಯೋಗದಲ್ಲಿರುವವರಿಗೆ ತವರಿಗೆ ಭೇಟಿ ನೀಡುವ  ಯೋಗ. ಇಷ್ಟಾರ್ಥ ಸಿದ್ಧಿಗಾಗಿ ಕುಲದೇವರ ಪ್ರಾರ್ಥನೆ ನಡೆಸಿ. ಮೇಲಧಿಕಾರಿಗಳಿಂದ ಕಾರ್ಯದೊತ್ತಡ ಕಂಡುಬರಲಿದೆ. ತಾಳ್ಮೆಯಿರಲಿ.

ತುಲಾ: ನಿಮ್ಮ ಅಭಿಪ್ರಾಯಗಳನ್ನು ಇತರರ ಮೇಲೆ ಹೇರಲು ಹೋಗಬೇಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗಾವಕಾಶಗಳು ಬರಲಿವೆ. ವಿದ್ಯಾರ್ಥಿಗಳು ಆಯ್ಕೆ ವಿಚಾರದಲ್ಲಿ ಗೊಂದಲಕ್ಕೀಡಾಗಲಿದ್ದಾರೆ.

ವೃಶ್ಚಿಕ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಬಹುದಿನಗಳ ನಿಮ್ಮ ಕನಸು ಈಡೇರಿಸಿಕೊಳ್ಳಲಿದ್ದೀರಿ. ಉದ್ಯೋಗಾರ್ಥ ಸಂದರ್ಶನಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ವಿದ್ಯಾರ್ಥಿಗಳಿಗೆ ದೈಹಿಕವಾಗಿ ಚಟುವಟಿಕೆಯಿಂದ ಕೂಡಿದ ದಿನ. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಯೋಗ. ನೆರೆಹೊರೆಯವರಿಂದ ಸಹಾಯ ಸಿಗುವುದು.

ಮಕರ: ಅನವಶ್ಯಕವಾಗಿ ನಿಮ್ಮ ವಿಚಾರದಲ್ಲಿ ಬೇರೆಯವರು ಮೂಗು ತೂರಿಸುವುದರಿಂದ ಕಿರಿ ಕಿರಿ ಅನುಭವಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಕುಟುಂಬ ಸೌಖ್ಯಕ್ಕಾಗಿ ದೇವತಾ ಕಾರ್ಯಗಳನ್ನು ನೆರವೇರಿಸಲಿದ್ದೀರಿ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಮೂರನೆಯವರು ಹಸ್ತಕ್ಷೇಪ ಮಾಡಲು ಅವಕಾಶ ಕೊಡಬೇಡಿ. ತಾಂತ್ರಿಕ ವೃತ್ತಿಯವರಿಗೆ ಬಿಡುವಿನ ಸಂತೋಷ ಸಿಗುವುದು.

ಮೀನ: ಸರಕಾರೀ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬಂದೀತು. ಭೂಮ್ಯಾದಿ ವ್ಯವಹಾರಗಳನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡುವುದು ಉತ್ತಮ. ಹಳೆಯ ಬಾಕಿ ಸಂದಾಯವಾಗಲಿದೆ. ಆರೋಗ್ಯದಲ್ಲಿ ಚೇತರಿಕೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ