ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 4 ಸೆಪ್ಟಂಬರ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬಹುದಿನಗಳ ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ನಿಮ್ಮ ಹಿಂದೆ ಮಾತನಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ವೃಷಭ: ಉದ್ಯೋಗ, ವ್ಯವಹಾರ ನಿಮಿತ್ತ ಪರವೂರಿಗೆ ಸಂಚರಿಸುವ ಅನಿವಾರ್ಯತೆ ಎದುರಾಗಲಿದೆ. ಯಂತ್ರೋಪಕರಣಗಳಿಂದ ತೊಂದರೆ ಎದುರಾದೀತು. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ನಿಮ್ಮ ಭವಿಷ್ಯದ ಬಗ್ಗೆ ಚಿಂತೆಯಾದೀತು. ಸ್ವಯಂ ವೃತ್ತಿಯವರಿಗೆ ಮುನ್ನಡೆ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ನೆರೆಹೊರೆಯವರಿಗೆ ಸಹಾಯ ಮಾಡಲಿದ್ದೀರಿ.

ಕರ್ಕಟಕ: ಹಳೆಯ ಬಾಕಿಗಳನ್ನು ತೀರಿಸಲಿದ್ದೀರಿ. ಹಿರಿಯರಿಗೆ ದೇವತಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.

ಸಿಂಹ: ವಿಶೇಷ ವ್ಯಕ್ತಿಗಳಿಂದ ನಿಮ್ಮ ಜೀವನಕ್ಕೆ ಹೊಸ ತಿರುವು ಸಿಗಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಹಿಂದೆ ಮಾಡಿದ ತಪ್ಪುಗಳು ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಿ. ಸಹೋದರಾದಿ ಸಂಬಂಧಿಗಳೊಂದಿಗೆ ಭಿನ್ನಾಭಿಪ್ರಾಯಗಳು ದೂರವಾಗಲಿದೆ. ಮಕ್ಕಳಿಂದ ಸಂತೋಷ ಸಿಗುವುದು. ತಾಳ್ಮೆಯಿರಲಿ.

ತುಲಾ: ಅತಿಯಾಗಿ ಮಾತನಾಡಲು ಹೋಗಿ ನಿಮ್ಮ ಗುಟ್ಟುಗಳನ್ನು ಬಯಲು ಮಾಡಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.

ವೃಶ್ಚಿಕ: ಹಿರಿಯರಿಂದ ಬಂದ ಬಳವಳಿ ಸಂರಕ್ಷಿಸುವ ಹೊಣೆಗಾರಿಕೆ ನಿಮ್ಮದಾಗುವುದು. ವ್ಯಾಪಾರೀ ವರ್ಗದವರಿಗೆ ಲಾಭ ಮಾಡಿಕೊಳ್ಳಲು ಹೊಸ ದಾರಿಗಳು ಸಿಗಲಿವೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಧನು: ಭೂಮ್ಯಾದಿ ವ್ಯವಹಾರಗಳಲ್ಲಿ ಲಾಭ ಕಂಡುಬರಲಿದೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸ್ಥಾನ ಮಾನಾದಿಗಳಿಗೆ ತೊಂದರೆ ಎದುರಾಗಲಿದೆ. ಸ್ವಯಂ ವೃತ್ತಿಯವರು ಕ್ರಿಯಾತ್ಮಕವಾಗಿ ಯೋಚಿಸಬೇಕಾಗುತ್ತದೆ. ಹಿರಿಯರಿಗೆ ದೇವತಾ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ.

ಕುಂಭ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ಮಕ್ಕಳ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ಯೋಗ್ಯ ವಯಸ್ಕರಿಗೆ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಮೀನ: ಕೌಟುಂಬಿಕ ವಿಚಾರದಲ್ಲಿ ಸಂಗಾತಿಯಿಂದ ಕಿರಿ ಕಿರಿ ಕಂಡುಬಂದೀತು. ಮಕ್ಕಳೊಂದಿಗೆ ತಾಳ್ಮೆ ಕಳೆದುಕೊಳ್ಳುವ ಸಂದರ್ಭ ಎದುರಾದೀತು. ದೇವತಾ ಪ್ರಾರ್ಥನೆ ಮಾಡಿ. ಕಾರ್ಯಕ್ಷೇತ್ರದಲ್ಲಿ ಮುನ್ನಡೆಯಿರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ