ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 5 ಸೆಪ್ಟಂಬರ್ 2023 (06:50 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕೆಲಸದ ಆಯ್ಕೆ ವಿಚಾರದಲ್ಲಿ ಗೊಂದಲಗಳು ಕಂಡುಬಂದೀತು. ಹಿರಿಯರ ಸಲಹೆ ಪಡೆಯಿರಿ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಮಕ್ಕಳ ಜೀವನದ ಬಗ್ಗೆ ಮಹತ್ವದ ತೀರ್ಮಾನ ತೆಗೆದುಕೊಳ್ಳಲಿದ್ದೀರಿ.

ವೃಷಭ: ಆಪ್ತರ ಸಲಹೆಯಿಂದ ಸಮಸ್ಯೆಗಳು ಪರಿಹಾರವಾಗಲಿದೆ. ಲಭ್ಯವಿರುವ ಅವಕಾಶಗಳ ಸದುಪಯೋಗಪಡಿಸಿಕೊಳ್ಳಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಆಪ್ತರೊಂದಿಗೆ ಸಮಾಲೋಚನೆ ನಡೆಸುವುದು ಸೂಕ್ತ. ವ್ಯವಹಾರ ಕ್ಷೇತ್ರದಲ್ಲಿ ಹೊಸಬರಿಂದ ಪೈಪೋಟಿ ಎದುರಾಗಲಿದೆ. ಹೂಡಿಕೆ ವ್ಯವಹಾರಗಳಿಂದ ಲಾಭ.

ಕರ್ಕಟಕ: ಕೆಲಸ ಕಾರ್ಯಗಳು ಕೊಂಚ ಮಂದಗತಿಯಲ್ಲಿ ನಡೆಯಲಿದೆ. ಅಲ್ಪ ಕಾಲದ ಹೂಡಿಕೆಯಿಂದ ಲಾಭ ಪಡೆಯಬಹುದು. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಮೆಚ್ಚುಗೆ ಸಿಗುವುದು. ದಿನದಂತ್ಯಕ್ಕೆ ಸಂತೋಷದ ಸುದ್ದಿ ಕೇಳಿಬರುವುದು.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಪೈಪೋಟಿ ಎದುರಾಗಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆ. ತಾಳ್ಮೆ ಅಗತ್ಯ.

ಕನ್ಯಾ: ಆತುರದ ನಿರ್ಧಾರದಿಂದ ತೊಂದರೆ ಎದುರಿಸಬೇಕಾದೀತು. ಸಂಗಾತಿಯ ಸಲಹೆ ಪಾಲಿಸುವುದು ಉತ್ತಮ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶ ಅರಸಿಕೊಂಡು ಬರಲಿದೆ. ಬಳಸಿಕೊಳ್ಳಿ.

ತುಲಾ: ವ್ಯವಹಾರದಲ್ಲಿ ನಿಮ್ಮ ಜಾಣತನ ಪ್ರದರ್ಶಿಸಲಿದ್ದೀರಿ. ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚಾಗಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ವೃಶ್ಚಿಕ: ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲಕರ ವಾತಾವರಣವಿರಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ವ್ಯವಹಾರದಲ್ಲಿ ಇದುವರೆಗೆ ಇದ್ದ ಕಿರಿ ಕಿರಿಗಳು ದೂರವಾಗಲಿದೆ. ಅನಗತ್ಯ ಚಿಂತೆ ಬೇಡ.

ಧನು: ದಾನ ಧರ್ಮಾದಿಗಳ ಕಡೆಗೆ ಒಲವು. ಮಕ್ಕಳ ವಿಚಾರದಲ್ಲಿ ಅನಗತ್ಯ ಚಿಂತೆ ಬೇಡ. ಬಂಧು ಮಿತ್ರರ ಭೇಟಿ ಯೋಗ. ಪ್ರೀತಿ ಪಾತ್ರರ ಕೆಲಸಗಳಿಗೆ ನೆರವು ನೀಡಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು.

ಮಕರ: ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ಮನೆಯಲ್ಲಿ ಸಣ್ಣ ಪುಟ್ಟ ರಿಪೇರಿ ಕೆಲಸಗಳಿಗೆ ಮುಂದಾಗಲಿದ್ದೀರಿ. ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಅತಿಯಾಗಿ ಇನ್ನೊಬ್ಬರ ಮೇಲೆ ಅವಲಂಬನೆ ಬೇಡ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಮುನ್ನಡೆಯಿರಲಿದೆ. ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

ಮೀನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಇಷ್ಟ ಮಿತ್ರರೊಂದಿಗೆ ಕಾಲ ಕಳೆಯುವ ಯೋಗ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ