ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 6 ಸೆಪ್ಟಂಬರ್ 2023 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದೇಹಾರೋಗ್ಯದ ವಿಚಾರದಲ್ಲಿ ನಿರ್ಲ್ಯಕ್ಷ್ಯ ಮಾಡಬೇಡಿ. ವ್ಯವಹಾರದಲ್ಲಿ ನಿಮ್ಮ ಚಾಕಚಕ್ಯತೆಯಿಂದ ಲಾಭ ಪಡೆದುಕೊಳ್ಳಲಿದ್ದೀರಿ. ಇಷ್ಟಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ದಿನದಂತ್ಯಕ್ಕೆ ಸಂತೋಷದ ಸುದ್ದಿ.

ವೃಷಭ: ಸಂಗಾತಿಯೊಂದಿಗೆ ಕ್ಷುಲ್ಲುಕ ವಿಚಾರಗಳಿಗೆ ಘರ್ಷಣೆಗಳಾದೀತು. ಮಾತಿನ ಮೇಲೆ ಸಂಯಮವಿರಲಿ. ಮೇಲಧಿಕಾರಿಗಳ ಪ್ರೋತ್ಸಾಹ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಬೇರೆಯವರು ಆಡುವ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.  ಹಿಂದೆ ಮಾಡಿದ ಒಳ್ಳೆಯ ಕೆಲಸಗಳ ಫಲ ನಿಮಗೆ ಸಿಗಲಿದೆ. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗ ಕಂಡುಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಜವಾಬ್ಧಾರಿಯುತವಾಗಿ ನಡೆದುಕೊಳ್ಳಬೇಕಾಗುತ್ತದೆ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಪಾಲುದಾರಿಕೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ.

ಸಿಂಹ: ಅಧ್ಯಯನ ಕ್ಷೇತ್ರದಲ್ಲಿ ಮುನ್ನಡೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಮೆಚ್ಚುಗೆ ಸಿಗಲಿದೆ. ಉದ್ಯಮಿಗಳಿಗೆ ಕೀರ್ತಿ ಸಂಪಾದಿಸುವ ಯೋಗ. ಹೊಸ ಜನರ ಭೇಟಿಯಾಗಲಿದ್ದು, ಮನಸ್ಸು ಉಲ್ಲಾಸವಾಗಲಿದೆ.

ಕನ್ಯಾ: ಕಾರ್ಯರಂಗದಲ್ಲಿ ನಿಮ್ಮ ಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಆರ್ಥಿಕವಾಗಿ ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ.

ತುಲಾ: ವಿಶೇಷ ವ್ಯಕ್ತಿಗಳ ಭೇಟಿಯಿಂದ ನಿಮ್ಮ ಕನಸು ನನಸಾಗಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಕಡೆಗೆ ಆಸಕ್ತಿ ಬೆಳೆಯಲಿದೆ. ಹಣಕಾಸಿನ ವಿಚಾರದಲ್ಲಿ ಪರರ ಅವಲಂಬನೆ. ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ಸಾಂಸಾರಿಕವಾಗಿ ಜವಾಬ್ಧಾರಿ ಹೆಚ್ಚಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ದತೆ ನಡೆಸಲಿದ್ದೀರಿ. ಸಹೋದರರೊಂದಿಗಿನ ಭಿನ್ನಾಭಿಪ್ರಾಯಗಳು ದೂರವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಧನು: ಉದ್ಯೋಗ, ವ್ಯವಹಾರ ನಿಮಿತ್ತ ಅನ್ಯ ಊರಿಗೆ ಪ್ರಯಾಣ ಮಾಡುವ ಸಂಭವ. ಕಟ್ಟಡ ಕಾಮಗಾರಿ ಕೆಲಸಗಳಿಗೆ ವಿಘ್ನಗಳು ಕಂಡುಬಂದೀತು. ಹಣಕಾಸಿನ ವಿಚಾರದಲ್ಲಿ ಅಪರಿಚಿತರನ್ನು ನಂಬಿ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ.

ಮಕರ: ಸರಕಾರಿ ನೌಕರರಿಗೆ ಬಿಡುವಿನ ಕ್ಷಣದ ಖುಷಿ ಸಿಗಲಿದೆ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ ನಿಮ್ಮದಾಗಲಿದೆ. ಕೈಲಾದವರಿಗೆ ಸಹಾಯ ಮಾಡಿದ ಖುಷಿ ನಿಮ್ಮದಾಗುವುದು. ಅನಗತ್ಯ ಚಿಂತೆ ಬೇಡ.

ಕುಂಭ: ನಿಮ್ಮ ಮನೋಭಿಲಾಷೆ ಪೂರ್ತಿ ಮಾಡಲು ಪ್ರಯತ್ನಿಸಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಪರರ ನಿಂದನೆಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಸಂಗಾತಿಯಿಂದ ಉಡುಗೊರೆ ನಿರೀಕ್ಷಿಸಬಹುದು. ತಾಳ್ಮೆಯಿರಲಿ.

ಮೀನ: ಉದ್ಯೋಗ ಬದಲಾವಣೆಗೆ ಪ್ರಯತ್ನ ಪಡುತ್ತಿದ್ದರೆ ಅದಕ್ಕೆ ತಕ್ಕ ಫಲ ಸಿಗಲಿದೆ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ