ಕುಂಕುಮಾರ್ಚನೆ ಹೇಗೆ ಮಾಡಬೇಕು?

ಶನಿವಾರ, 3 ಆಗಸ್ಟ್ 2019 (09:01 IST)
ಬೆಂಗಳೂರು: ದೇವಿಗೆ ವಿಶೇಷವಾದ ಪೂಜೆ ಎಂದರೆ ಕುಂಕುಮಾರ್ಚನೆ ಮೊದಲ ಸ್ಥಾನದಲ್ಲಿ ನಿಲ್ಲುತ್ತದೆ. ಕುಂಕುಮಾರ್ಚನೆ ಮಾಡುವಾಗ ಈ ಕ್ರಮಗಳನ್ನು ತಪ್ಪದೇ ಪಾಲಿಸಬೇಕು.


ಕುಂಕುಮಾರ್ಚನೆಯನ್ನು ಮಾಡುವಾಗ ಪ್ರಥಮವಾಗಿ ದೇವಿಯ ಆವಾಹನೆಯನ್ನು ಮಾಡಿ ಪೂಜಿಸುತ್ತಾರೆ. ನಂತರ ದೇವಿಯ ಹೆಸರನ್ನು ಉಚ್ಚರಿಸುತ್ತಾ ದೇವಿಯ ಮೂರ್ತಿಯ ಮೇಲೆ ಕುಂಕುಮವನ್ನು ಅರ್ಪಿಸುತ್ತಾರೆ.

ದೇವಿಯ ಚರಣಗಳಿಂದ ಆರಂಭಿಸಿ ಶಿರದವರೆಗೆ ಏರಿಸಿ, ಆಕೆಯನ್ನು ಕುಂಕುಮದಿಂದ ಆಚ್ಛಾದಿಸುತ್ತಾರೆ. ಕುಂಕುಮಾರ್ಚನೆಯು ಪೂರ್ಣವಾದ ನಂತರ ದೇವಿಗೆ ಆರತಿಯನ್ನು ಬೆಳಗಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸುತ್ತಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ