ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಗುರುವಾರ, 3 ಅಕ್ಟೋಬರ್ 2019 (08:46 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಸವಾಲುಗಳನ್ನು ಎದುರಿಸಲು ಸಜ್ಜಾಗಿರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಮಕ್ಕಳ ಭವಿಷ್ಯದ ಚಿಂತೆ ಕಾಡುವುದು. ಸಂಗಾತಿಯ ಸಹಕಾರ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಅಭಿವೃದ್ಧಿದಾಯಕ ಬೆಳವಣಿಗೆಗಳು ನಡೆಯಲಿವೆ. ಬಡ್ತಿ, ಮುನ್ನಡೆ ಯೋಗವಿದೆ. ಅವಿವಾಹಿತರಿಗೆ ಕಂಕಣ ಭಾಗ್ಯವಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ನಿರುದ್ಯೋಗಿಗಳಿಗೆ ಸರ್ಕಾರಿ ಉದ್ಯೋಗದ ಯೋಗವಿದೆ.

ಮಿಥುನ: ದೈವಾನುಕೂಲ ನಿಮ್ಮ ಮೇಲಿದ್ದು, ನೀವು ಅಂದುಕೊಂಡ ಕೆಲಸಗಳು ನೆರವೇರುವುದು. ಕೌಟುಂಬಿಕವಾಗಿ ಸಂತಸದ ದಿನಗಳಿವು. ಬಂಧು ಮಿತ್ರರ ಭೇಟಿಯಾಗುವಿರಿ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಪರಿಶ್ರಮಪಡಬೇಕಾಗುತ್ತದೆ. ದೇವತಾ ಪ್ರಾರ್ಥನೆಯಿಂದ ಮನಸ್ಸಿಗೆ ನೆಮ್ಮದಿ.

ಕರ್ಕಟಕ: ಮಕ್ಕಳ ವಿಚಾರದಲ್ಲಿ ಸಂಗಾತಿಯೊಡನೆ ಭಿನ್ನಾಭಿಪ್ರಾಯ ಮೂಡಬಹುದು. ಸಂತಾನಾಪೇಕ್ಷಿತ ದಂಪತಿಗಳು ದೈವದ ಮೊರೆ ಹೋಗುವರು. ನೆರೆಹೊರೆಯವರ ಚಾಡಿ ಮಾತುಗಳು ಮನಸ್ಸಿಗೆ ಬೇಸರವುಂಟುಮಾಡಬಹುದು. ವ್ಯವಹಾರದಲ್ಲಿ ಮುನ್ನಡೆಯಿರಲಿದೆ.

ಸಿಂಹ: ಸಾಮಾಜಿಕವಾಗಿ ನಿಮ್ಮ ಕೆಲಸ ಕಾರ್ಯಗಳು ಮೆಚ್ಚುಗೆಗೆ ಪಾತ್ರವಾಗುವುದು. ಇಷ್ಟಮಿತ್ರರೊಂದಿಗೆ ಪ್ರವಾಸ, ಭೋಜನ ಸಾಧ‍್ಯತೆಯಿದೆ. ದೂರ ಸಂಚಾರದಲ್ಲಿ ಕಳ್ಳತನವಾಗದಂತೆ ಎಚ್ಚರಿಕೆ ವಹಿಸಿ. ವಾಹನ ಖರೀದಿ ಯೋಗವಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಕನ್ಯಾ: ಅಧಿಕ ಲಾಭ ಕೊಡುವ ಕೆಲಸದ ಬಗ್ಗೆ ಯೋಚನೆ ಮಾಡುವಿರಿ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ಮರಳಿ ಬಾರದು. ಅಪರಿಚಿತರನ್ನು ನಂಬಿ ವ್ಯವಹಾರ ಮಾಡುವಾಗ ಎಚ್ಚರಿಕೆ ಅಗತ್ಯ. ಹಿರಿಯರಿಂದ ಉಡುಗೊರೆ ನಿರೀಕ್ಷಿಸಬಹುದು.

ತುಲಾ: ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ಕೌಟುಂಬಿಕವಾಗಿ ಕೆಲವೊಂದು ಜವಾಬ್ಧಾರಿಗಳನ್ನು ಹೊತ್ತುಕೊಳ್ಳಬೇಕಾಗುತ್ತದೆ. ಹಾಗಿದ್ದರೂ ಸಂತೋಷಕ್ಕೆ ಕೊರತೆಯಿರದು. ವ್ಯವಹಾರದಲ್ಲಿ ಸಣ್ಣಮಟ್ಟಿನ ಲಾಭ ಕಂಡುಬರುವುದು. ಖರ್ಚಿನ ಬಗ್ಗೆ ಮಿತಿಯಿರಲಿ.

ವೃಶ್ಚಿಕ: ಪಾಲು ಬಂಡವಾಳ ವ್ಯವಹಾರದಲ್ಲಿ ಹೆಚ್ಚಿನ ಲಾಭ ಗಳಿಸುವಿರಿ. ಕುಲದೇವರನ್ನು ಪ್ರಾರ್ಥಿಸಿ ಹೊಸ ಕೆಲಸಗಳಿಗೆ ಕೈ ಹಾಕಿದರೆ ಉತ್ತಮ ಫಲ ಪಡೆಯಬಹುದು. ವಾಹನ ಸವಾರರು ಚಾಲನೆ ಮಾಡುವಾಗ ಎಚ್ಚರಿಕೆಯಿಂದಿರಬೇಕು. ಪ್ರೇಮಿಗಳಿಗೆ ಶುಭವಾಗಲಿದೆ.

ಧನು: ಸಹೋದರರಿಂದ ಕಿರಿ ಕಿರಿಯಾಗಬಹುದು. ಸರ್ಕಾರಿ ಕೆಲಸಗಳಲ್ಲಿ ಮುನ್ನಡೆಯಾಗಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲ ಸಿಗುವುದು. ಪ್ರೀತಿ ಪಾತ್ರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚಗಳಾಗಬಹುದು.

ಮಕರ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಗೆ ಸಹೋದ್ಯೋಗಿಗಳೇ ಅಡ್ಡಗಾಲು ಹಾಕುವರು. ಆತ್ಮಸ್ಥೈರ್ಯದಿಂದ ಮುನ್ನಡೆದರೆ ಯಶಸ್ಸು ಸಾಧ‍್ಯ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ. ಶೈಕ್ಷಣಿಕ ವೃತ್ತಿಯವರಿಗೆ ಏಳಿಗೆಯಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಕುಂಭ: ಉದರ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಂಡುಬಂದರೂ ಉಪೇಕ್ಷೆ ಬೇಡ. ಹಳೆಯ ಮಿತ್ರರ ಭೇಟಿ ಮನಸ್ಸಿಗೆ ಖುಷಿ ನೀಡುವುದು. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ. ವಾಹನ ಖರೀದಿ ಯೋಗವಿದೆ. ಮನಸ್ಸಿಗೆ ಖುಷಿಕೊಡುವ ವಾರ್ತೆ ಕೇಳಲಿದ್ದೀರಿ.

ಮೀನ: ಮಹಿಳಾ ಉದ್ಯೋಗಿಗಳು ಉದ್ಯೋಗದಲ್ಲಿ ಮುನ್ನಡೆ ಪಡೆಯುವರು. ಆರ್ಥಿಕವಾಗಿ ಆದಾಯಕ್ಕೆ ಕೊರೆತೆಯಿರದು. ಧಾರ್ಮಿಕ ಕಾರ್ಯಗಳಲ್ಲಿ ಕುಟುಂಬ ಸಮೇತರಾಗಿ ಭಾಗವಹಿಸುವಿರಿ. ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಹಿನ್ನಡೆಯಾಗಬಹುದು. ತಾಳ್ಮೆ ಕಳೆದುಕೊಳ್ಳಬೇಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ