ಯುಗಾದಿ ದಿನ ನಿಮ್ಮ ರಾಶಿ ಫಲ ಹೇಗಿದೆ ನೋಡಿ

ಬುಧವಾರ, 22 ಮಾರ್ಚ್ 2023 (08:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಎಲ್ಲಾ ವಿಚಾರಗಳನ್ನೂ ಕುಟುಂಬ ಸದಸ್ಯರೊಂದಿಗೆ ಹಂಚಿಕೊಳ್ಳುವ ಪ್ರವೃತ್ತಿಯಿರಲಿ. ವಿದ್ಯಾರ್ಥಿಗಳಿಗೆ ಕಠಿಣ ಪ್ರಯತ್ನದ ಅಗತ್ಯವಿದೆ. ಇಷ್ಟ ಭೋಜನ ಮಾಡುವ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಮನಸ್ಸಿನಲ್ಲಿ ಏನೇ ಇದ್ದರೂ ಅದನ್ನು ಕಾರ್ಯರೂಪಕ್ಕೆ ತರಲು ಉದಾಸೀನ ಪ್ರವೃತ್ತಿ ತೋರಲಿದ್ದೀರಿ. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ದೇಹಾಯಾಸವಾದಿತು. ಮನೆಗೆ ಬಂಧು ಮಿತ್ರರನ್ನು ಬರಮಾಡಿಕೊಳ್ಳಲಿದ್ದೀರಿ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ನಿಷ್ಠೆಗೆ ತಕ್ಕ ಫಲ ಸಿಗಲಿದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕುವುದು ಉತ್ತಮ. ಕೌಟುಂಬಿಕವಾಗಿ ಸುಖ ಸಮೃದ್ಧಿಯಿರಲಿದೆ. ತಾಳ್ಮೆಯಿರಲಿ.

ಕರ್ಕಟಕ: ಗುರುಹಿರಿಯರೊಂದಿಗೆ ಅನಗತ್ಯ ಭಿನ್ನಾಭಿಪ್ರಾಯಕ್ಕೆ ಅವಕಾಶ ಕೊಡಬೇಡಿ. ಮಾತಿನ ಮೇಲೆ ನಿಗಾ ಇರಲಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಸಿಂಹ: ವ್ಯವಹಾರದಲ್ಲಿ ಇನ್ನೊಬ್ಬರ ಸಹಾಯ ನಿರೀಕ್ಷಿಸಬೇಡಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಆಸ್ತಿ ವಿಚಾರದಲ್ಲಿ ನಿಮಗೆ ಅನುಕೂಲಕರ ತೀರ್ಪು ಬರಲಿದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಕನ್ಯಾ: ಮನೆಯವರೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆ ಮೂಲಕ ಖುಷಿ ನೀಡಲಿದ್ದೀರಿ. ಹಣಕಾಸಿನ ಹರಿವಿದ್ದರೂ ಅಷ್ಟೇ ಖರ್ಚೂ ಇರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ತುಲಾ: ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸಿಗೆ ಸಹೋದ್ಯೋಗಿಗಳಿಂದಲೇ ತಡೆಯಾದೀತು. ಒಳ್ಳೆಯ ಸಮಯಕ್ಕಾಗಿ ತಾಳ್ಮೆಯಿಂದ ಕಾಯಲೇಬೇಕು. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ.

ವೃಶ್ಚಿಕ: ಆರೋಗ್ಯ ಬಗ್ಗೆ ಎಚ್ಚರವಿರಲಿ. ದೀರ್ಘ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.

ಧನು: ಕೌಟುಂಬಿಕವಾಗಿ ಸುಂದರ ಕ್ಷಣ ಕಳೆಯುವ ಯೋಗ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ನಯವಂಚಕರ ಮಾತಿಗೆ ಮರುಳಾಗದಿರಿ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ.

ಮಕರ: ಸರಕಾರೀ ಉದ್ಯೋಗಿಗಳಿಗೆ ಬಿಡುವಿನ ದಿನದ ಸಂತೋಷ ಸಿಗಲಿದೆ. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಹೋದರರೊಂದಿಗೆ ಭಿನ್ನಾಭಿಪ್ರಾಯಕ್ಕೆ ಅವಕಾಶ ಕೊಡಬೇಡಿ.

ಕುಂಭ: ಮಕ್ಕಳ ಭವಿಷ್ಯಕ್ಕಾಗಿ ಕೆಲವೊಂದು ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಇಷ್ಟ ಭೋಜನ ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಪಾಲುದಾರಿಕಾ ಕ್ಷೇತ್ರದಲ್ಲಿ ಲಾಭವಾಗಲಿದೆ. ವಾಹನ ಖರೀದಿ ಯೋಗ ನಿಮ್ಮದಾಗುವುದು. ಕೌಟುಂಬಿಕವಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಪರಾಮರ್ಶಿಸಿ ಮುಂದುವರಿಯಿರಿ. ದಿನದಂತ್ಯಕ್ಕೆ ನೆಮ್ಮದಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ